Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪಿತೃವಾಕ್ಯ ಪರಿಪಾಲಕ ಆದರ್ಶ ಪುರುಷ ಶ್ರೀರಾಮ: ಪಿ.ಎಸ್.ಮಾಣಿಕ್ಯ

Advertisement
ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ:
ಪಿತೃವಾಕ್ಯ ಪರಿಪಾಲಕ ಆದರ್ಶಗಳ ಗಣಿ ಮರ್ಯಾದಾ ಪುರುಷೋತ್ತಮ ಶ್ರೀರಾಮ ಎಂದು ಚಳ್ಳಕೆರೆಯ ಶ್ರೀಶಾರದಾಶ್ರಮದ ಸದ್ಭಕ್ತರಾದ ಶ್ರೀಮತಿ ಪಿ.ಎಸ್.ಮಾಣಿಕ್ಯ ಸತ್ಯನಾರಾಯಣ ತಿಳಿಸಿದರು.                                


ಗಾಂಧಿನಗರದ ಸದ್ಭಕ್ತರಾದ ಸರಸ್ವತಿ ರಾಜು ಅವರ ನಿವಾಸದಲ್ಲಿ "ಶ್ರೀರಾಮ ನವಮಿ"ಯ ಪ್ರಯುಕ್ತ ಆಯೋಜಿಸಿದ್ದ ವಿಶೇಷ ಸತ್ಸಂಗ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಅವರು "ಶ್ರೀರಾಮನ ಜೀವನ ಮತ್ತು ವ್ಯಕ್ತಿತ್ವ"ದ ಬಗ್ಗೆ ವಿಶೇಷ ಉಪನ್ಯಾಸ ನೀಡಿದರು.


ಶ್ರೀರಾಮ ನಾಮವು ತಾರಕ ಮಂತ್ರವಾಗಿದ್ದು ಇದರ ನಿತ್ಯನಾಮ ಸ್ಮರಣೆಯಿಂದ ಮಾನವ ಜೀವನದ ಮುಖ್ಯ ಉದ್ದೇಶವಾದ ಮೋಕ್ಷ ಪ್ರಾಪ್ತಿಯಾಗುತ್ತದೆ ಎಂದು ತಿಳಿಸಿದ ಅವರು ಶ್ರೀಮದ್ ರಾಮಾಯಣದ ಬಗ್ಗೆ ಸಂಕ್ಷಿಪ್ತ ಪರಿಚಯ ಮಾಡಿಕೊಟ್ಟರು.


ವಿಶೇಷ ಸತ್ಸಂಗದ ಪ್ರಯುಕ್ತ ಸದ್ಭಕ್ತರಿಂದ ಸಾಮೂಹಿಕ ಶ್ರೀರಾಮರಕ್ಷಾ ಸ್ತೋತ್ರ ಪಠಣ,ಶ್ರೀಲತಾ ಗೋವಿಂದರಾಜು ನೇತೃತ್ವದ ಬಿಂದು ಮತ್ತು ಸಂಗಡಿಗರಿಂದ ಶ್ರೀಹನುಮಾನ್ ಚಾಲೀಸಾ ಪಠಣ, ಶ್ರೀರಾಮಕೃಷ್ಣರ ನಾಮಸ್ಮರಣೆ, ಶ್ರೀಮತಿ ಮೀನಾಕ್ಷಮ್ಮ, ಎಂ ಗೀತಾ ನಾಗರಾಜ್, ಗೀತಾ ಪ್ರಕಾಶ್, ಅಂಬಿಕಾ ಪರಮೇಶ್ವರ್, ಶ್ರೀರಾಧಾ ಮಾಧವ ಭಜನಾ ಮಂಡಳಿಯ ಶ್ರೀಮತಿ ಪರಿಮಳಾ ನಾಗರಾಜ್, ತಿಪ್ಪಮ್ಮ, ಮೋಹಿನಿ, ಮಾಕಂಸ್ ಲಕ್ಷ್ಮೀ ಬಾಲಾಜೀ, ನಾಗರತ್ನಮ್ಮ ಅವರಿಂದ ವಿಶೇಷ ಶ್ರೀರಾಮನ ಭಜನೆಗಳು, ಯತೀಶ್ ಎಂ ಸಿದ್ದಾಪುರ ಅವರಿಂದ "ಶ್ರೀಶಾರದಾದೇವಿ ಜೀವನಗಂಗಾ" ಗ್ರಂಥ ಪಾರಾಯಣ, ದಿವ್ಯತ್ರಯರಿಗೆ ಮಂಗಳಾರತಿ ಮತ್ತು ಅನ್ನಪ್ರಸಾದ ವಿನಿಯೋಗ ನಡೆಯಿತು.   

 ಸತ್ಸಂಗ ಕಾರ್ಯಕ್ರಮದಲ್ಲಿ ಸರಸ್ವತಿ ರಾಜು, ಗುಣಶೇಖರ್, ಚೇತನ್ ಕುಮಾರ್, ಕವಿತಾ, ಸಂಗೀತ,ಸಂಜನಾ, ಗಾಯತ್ರಿ, ಮಹಾಲಕ್ಷ್ಮೀ, ಹಂಸ, ದ್ರಾಕ್ಷಾಯಣಿ, ಅನ್ನಪೂರ್ಣ , ದೀಪಿಕಾ, ಸೌಮ್ಯ ಪ್ರಸಾದ್,    ವಿಶಾಲಮ್ಮ, ಕೀರ್ತನಾ, ಪವಿತ್ರ,ಚಂದ್ರಕಲಾ,ಲಕ್ಷ್ಮೀ, ವೈಷ್ಣವಿ,ರೂಪ, ಶ್ರೀದೇವಿ, ಸುಬ್ರಹ್ಮಣ್ಯ ಸೇರಿದಂತೆ ಸಾಕಷ್ಟು ಸಂಖ್ಯೆಯಲ್ಲಿ ಸದ್ಭಕ್ತರು ಭಾಗವಹಿಸಿದ್ದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ