LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಬಾರ್ ಗಳ ಹಾವಳಿ

Advertisement
Advertisement

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ತೂಬಗೆರೆ ಹೋಬಳಿ ಹಾಡೋನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯಕ್ಕೆ ತೆರಳುವ ಹೆದ್ದಾರಿಗಳ ಪಕ್ಕದಲ್ಲಿ ಬಾರ್ ಮತ್ತು ರೆಸ್ಟೋರೆಂಟ್‌ಗಳು ಹೆಚ್ಚಾಗಿದ್ದು, ಸುತ್ತಮುತ್ತಲಿನ ಕೃಷಿ ಭೂಮಿಗಳಿಗೆ ಪ್ಲಾಸ್ಟಿಕ್ ಮತ್ತು ಗಾಜಿನ ಬಾಟಲಿಗಳ ತ್ಯಾಜ್ಯದ ಕಾಟ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದ್ದು ರೈತರು ಕಂಗಾಲಾಗಿದ್ದಾನೆ.

ಗಾಜಿನ ಚೂರುಗಳು ಮಣ್ಣಿನಲ್ಲಿ ಸೇರಿ ಬೆಳೆಗಳ ಬೇರುಗಳಿಗೆ ಹಾನಿ ಮಾಡುತ್ತವೆ. ಪ್ಲಾಸ್ಟಿಕ್ ತ್ಯಾಜ್ಯಗಳು ಕರಗದೆ ಮಣ್ಣಿನ ಫಲವತ್ತತೆಯನ್ನು ಸಂಪೂರ್ಣವಾಗಿ ನಾಶಪಡಿಸುತ್ತವೆ.ಕಸದ ರಾಶಿಯಿಂದಾಗಿ ಮಳೆನೀರು ಭೂಮಿಯ ಆಳಕ್ಕೆ ಇಳಿಯಲು ಸಾಧ್ಯವಾಗುವುದಿಲ್ಲ.ಮೇವು ಮೇಯುವಾಗ ಗಾಜಿನ ಚೂರುಗಳು  ಜಾನುವಾರುಗಳಿಗೆ ಬಾಯಿಗೆ ಸಿಲುಕಿ ಪ್ರಾಣಾಪಾಯ ಸಂಭವಿಸಬಹುದು.  ಹಾಗು ಪ್ಲಾಸ್ಟಿಕ್ ಹೊಟ್ಟೆಗೆ ಸೇರಿ ಹಸು, ಎಮ್ಮೆಗಳು ಸಾವನ್ನಪ್ಪಬಹುದು.ಮತ್ತು ರೈತರು ಹೊಲಗಳಲ್ಲಿ ಉಳುಮೆ ಮಾಡುವಾಗ ಅಥವಾ ಕಳೆ ಕೀಳುವಾಗ ಗಾಜಿನ ಚೂರುಗಳು ಚುಚ್ಚಿ ರೈತರ ಕೈಕಾಲುಗಳಿಗೆ ಹಾನಿಯಾಗುತ್ತವೆ ಎಂದು ರೈತ ಮಂಂಜುನಾಥ ತನ್ನ ಆಳಲು ತೋಡಿಕೊಂಡಿದ್ದಾನೆ. ಇದ್ದಕ್ಕೆ ಸಂಬಂದ ಪಟ್ಟ ಅಧಿಕಾರಿಗಳು ಸಮಸ್ಯೆ ಬಗೆಹರಿಸುವಂತೆ ಮನವಿ ಮಾಡಿದ್ದಾರೆ.

ಶ್ರೀಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯ ಕೂಗಳೆ ದೂರದಲ್ಲಿದ್ದು ಹೆದ್ದಾರಿ ಬದಿಯಲ್ಲಿ ಬಾರ್‌ಗಳು (ಮದ್ಯದಂಗಡಿಗಳು) ಪ್ರಾರಂಭವಾಗುವುದರಿಂದ ರಸ್ತೆ ಸುರಕ್ಷತೆಗೆ ಭಾರಿ ಧಕ್ಕೆಯುಂಟಾಗುವುದಲ್ಲದೆ. ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವುದು ಹೆಚ್ಚಾಗಿ ಅಪಘಾತಗಳಿಗೆ ಕಾರಣವಾಗಿದೆ. ಬಾರ್‌ಗಳ ಸುತ್ತಮುತ್ತಲಿನ ವಾತಾವರಣವು ಕಲುಷಿತಗೊಂಡಿದ್ದು  ಈ ರಸ್ತೆಗಳಲ್ಲಿ ಸ್ಥಳೀಯ ಮಹಿಳೆಯರು ಮತ್ತು ಮಕ್ಕಳಿಗೆ ಸಂಚರಿಸಲು ಭಯದ ವಾತಾವರಣ ಸೃಷ್ಟಿಯಾಗಿದೆ. ಮದ್ಯದ ಅಮಲಿನಲ್ಲಿ ಗಲಾಟೆ, ಜಗಳಗಳು ನಡೆದು ಸಾರ್ವಜನಿಕರಿಗೆ ಕಿರುಕುಳಕ್ಕೆ ಕಾರಣವಾಗಿದೆ.
ಆನಂದ್ ಕುಮಾರ್, ಗ್ರಾಪಂ ಮಾಜಿ ಸದಸ್ಯ ಹಾಡೋನಹಳ್ಳಿ.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರೈತರಿಗೆ 3 ದಿನಗಳ ವಸತಿಯುಕ್ತ ಉಚಿತ ಸಾವಯವ ಕೃಷಿ ತರಬೇತಿ ಹಾಗೂ ಪ್ರವಾಸಬಿಡದಿ ಟೌನ್‌ಶಿಪ್‌ ಯೋಜನೆ ವಿರುದ್ಧ ಕುಮಾರಸ್ವಾಮಿ, ಆರ್.ಅಶೋಕ್ ಚಾಲನೆ: ಪಾದಯಾತ್ರೆಯಲ್ಲಿ ಹಿರಿಯೂರು ಮುಖಂಡರು ಭಾಗಿಸರ್ಕಾರಿ ಶಾಲೆಗೆ ಭೂಮಿ ದಾನ ಅತ್ಯಂತ ಶ್ರೇಷ್ಠ ಕಾರ್ಯ-ಎನ್. ಶ್ರೀನಿವಾಸ್ ಚಿನ್ಮೂಲಾದ್ರಿ ಅಕ್ಷರೋತ್ಸವ ಕವಿಗೋಷ್ಟಿ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿದ ಡಾ.ಎಲ್.ಪಾಲಾಕ್ಷಯ್ಯಬಿಡದಿ ಟೌನ್‌ಶಿಪ್ ವಿರೋಧಿ ಪಾದಯಾತ್ರೆಗೆ ಸಿಎಂ ಡಿ.ಕೆ. ಶಿವಕುಮಾರ್ ಪ್ರತ್ಯುತ್ತರ:ಬಿಡದಿ ಟೌನ್‌ಶಿಪ್ ವಿರುದ್ಧ ಬಿಜೆಪಿ-ಜೆಡಿಎಸ್ ಜಂಟಿ ಸಮರ: ಬೈರಮಂಗಲದಿಂದ ಬೆಂಗಳೂರಿಗೆ 'ಪಾದಯಾತ್ರೆ' ಆರಂಭ"ನನ್ನನ್ನು ಕೊಂಡುಕೊಳ್ಳಲು ಯಾರಿಂದಲೂ ಸಾಧ್ಯವಿಲ್ಲ": ಹೆಚ್.ಡಿ. ಕೆ ವಾಗ್ದಾಳಿ ಖಾತೆ ಹಂಚಿಕೆ, ಸಂಪುಟ ಪುನಾರಚನೆ ಕಸರತ್ತು: ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳಿದ ಸಿಎಂ ಶಿವಕುಮಾರ್ಪೊಲೀಸರ ಮೆಗಾ ಆಪರೇಷನ್: 105 ಅಕ್ರಮ ಬಾಂಗ್ಲಾ ವಲಸಿಗರ ಬಂಧನ, ಗಡಿಪಾರಿಗೆ ಕ್ರಮಸಚಿವ ನಾಗೇಂದ್ರ ರಾಜೀನಾಮೆಗೆ ಶ್ರೀರಾಮುಲು ಆಗ್ರಹ; ರೆಡ್ಡಿ ಬ್ರದರ್ಸ್‌ಗೆ ಈಶ್ವರ್ ಖಂಡ್ರೆ ತಿರುಗೇಟು