Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಭ್ರಷ್ಟಾಚಾರ ವಿರುದ್ಧ ಜಾಗೃತಿ ಮೂಡಿಸಲು ಮುಖ್ಯಮಂತ್ರಿಗಳಿಂದ ಪ್ರತಿಜ್ಞಾವಿಧಿ ಬೋಧನೆ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
 ಭ್ರಷ್ಟಾಚಾರದ ವಿರುದ್ಧ ಜಾಗೃತಿ ಮೂಡಿಸಲು ಸಚಿವಾಲಯ ಸಿಬ್ಬಂದಿಗಳಿಗೆ ವಿಧಾನಸೌಧದ 3ನೇ ಮಹಡಿ  ಸಮ್ಮೇಳನ ಸಭಾಂಗಣದಲ್ಲಿ ಜಾಗೃತಿ ಅರಿವು ಸಪ್ತಾಹ-2024”ರ ಆಚರಣೆಯ ಪ್ರತಿಜ್ಞಾವಿದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬೋಧಿಸಿದರು.

 ನಮ್ಮ ದೇಶದ ಆರ್ಥಿಕ, ರಾಜಕೀಯ ಮತ್ತು ಸಾಮಾಜಿಕ ಅಭಿವೃದ್ಧಿಗೆ ಭ್ರಷ್ಟಾಚಾರವು ಒಂದು ಪ್ರಮುಖ ಆಡಚಣೆಯಾಗಿದೆಯೆಂದು ನಾನು ನಂಬುತ್ತೇನೆ.  ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡಲು ಸರ್ಕಾರ, ನಾಗರಿಕರು ಮತ್ತು ಖಾಸಗಿ ವಲಯದ ಎಲ್ಲಾ ಪಾಲುದಾರರು ಒಟ್ಟಾಗಿ ಕೆಲಸ ಮಾಡಬೇಕಾಗುತ್ತದೆ.

ಪ್ರತಿ ನಾಗರಿಕನು ಜಾಗರೂಕನಾಗಿದ್ದು, ಎಲ್ಲಾ ಸಮಯದಲ್ಲೂ ಉನ್ನತ ಗುಣಮಟ್ಟದ ಪ್ರಾಮಾಣಿಕತೆ ಮತ್ತು ನಿಷ್ಠೆಗೆ ಬದ್ದನಾಗಿರಬೇಕೆಂದು ಹಾಗೂ ಭ್ರಷ್ಟಾಚಾರದ ವಿರುದ್ದ ಹೋರಾಟವನ್ನು ಬೆಂಬಲಿಸಬೇಕೆಂದು ತಾನು ಅರಿತಿರುವುದರಿಂದ ಈ ರೀತಿ ಪ್ರತಿಜ್ಞೆ ಮಾಡುತ್ತೇನೆ.

ಜೀವನದ ಎಲ್ಲಾ ಕ್ಷೇತ್ರಗಳಲ್ಲಿ ಪ್ರಾಮಾಣಿಕತೆ ಮತ್ತು ಕಾನೂನಿನ ನಿಯಮಗಳನ್ನು ಅನುಸರಿಸುತ್ತೇನೆ.  ಲಂಚವನ್ನು ಪಡೆಯುವುದಿಲ್ಲ ಹಾಗೂ ನೀಡುವುದೂ ಇಲ್ಲ. ಎಲ್ಲಾ ಕಾರ್ಯಗಳನ್ನು ಪ್ರಾಮಾಣಿಕ ಮತ್ತು ಪಾರದರ್ಶಕ ರೀತಿಯಲ್ಲಿ ನಿರ್ವಹಿಸುತ್ತೇನೆ.

ಸಾರ್ವಜನಿಕ ಹಿತಾಸಕ್ತಿಯಲ್ಲಿ ಕಾರ್ಯನಿರ್ವಹಿಸುತ್ತೇನೆ. ವೈಯಕ್ತಿಕ ನಡವಳಿಕೆಯಲ್ಲಿ ನಿಷ್ಠೆ ಪ್ರದರ್ಶಿಸುವ ಮೂಲಕ ಮಾದರಿಯಾಗುತ್ತೇನೆ.  ಯಾವುದೇ ಭ್ರಷ್ಟಾಚಾರದ ಘಟನೆಯನ್ನು ಸೂಕ್ತ ಸಂಸ್ಥೆಗೆ ವರದಿ ಮಾಡುತ್ತೇನೆ ಎಂದು ಪ್ರತಿಜ್ಞಾವಿಧಿ ಬೋಧಿಸಿದರು.

ಈ ವೇಳೆ, ಶ್ರೀ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಬಸನಗೌಡ ದದ್ದಲ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಒಳಾಡಳಿತ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಉಮಾಶಂಕರ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಕಾರ್ಯದರ್ಶಿ ಜಿ. ಸತ್ಯವತಿ ಸೇರಿದಂತೆ ಹಿರಿಯ ಅಧಿಕಾರಿಗಳು ಮತ್ತು ನೌಕರರು ಉಪಸ್ಥಿತರಿದ್ದರು.

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ