Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರತಿಭಾವಂತರಿಗೆ ಸೂಕ್ತ ವೇದಿಕೆ, ಪ್ರೋತ್ಸಾಹ ಅಗತ್ಯ-ಪಿ. ಎನ್. ಶೇಷಾದ್ರಿ

Advertisement
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಪ್ರತಿಭಾವಂತ ಕಲಾವಿದರಿಗೆ
  ಸೂಕ್ತ ವೇದಿಕೆ  ಮತ್ತು ಪ್ರೋತ್ಸಾಹ ನೀಡಿದಾಗ  ಸಾಂಸ್ಕೃತಿಕ ಪರಂಪರೆಯನ್ನು ಉಳಿಸಿ ಬೆಳೆಸಲು ಸಾಧ್ಯವಾಗುತ್ತದೆ ಎಂದು ದೊಡ್ಡಬಳ್ಳಾಪುರ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಪಿ.ಎನ್.ಶೇಷಾದ್ರಿ ತಿಳಿಸಿದರು.

       ನಗರದ ಸರ್ಕಾರಿ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ  ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ   ರಾಜ್ಯಮಟ್ಟದಲ್ಲಿ  ಸಾಂಸ್ಕೃತಿಕ ಮತ್ತು ಕ್ರೀಡಾ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ನಡೆದ ಅಭಿನಂದನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿ ಪ್ರತಿಯೊಬ್ಬರಲ್ಲೂ ಒಂದಲ್ಲೊಂದು  ಪ್ರತಿಭೆ  ಇರುತ್ತದೆ. ಅದಕ್ಕೆ ಸಕಾಲದಲ್ಲಿ  ಪ್ರೋತ್ಸಾಹ  ದೊರೆತರೆ ಅವರು ಸಾಧಕರಾಗಲು ಸಾಧ್ಯವಾಗುತ್ತದೆ. ಸಾಧಕರು ತಮ್ಮ ಅನುಭವ ಮತ್ತು ಯಶಸ್ಸಿನ ಹಾದಿಯನ್ನು ಮುಂದಿನ ಪೀಳಿಗೆಗೆ  ಹಂಚಿಕೊಳ್ಳುವ ಮೂಲಕ ಸಮಾಜಮುಖಿಗಳಾಗಿ ಬದುಕಬೇಕು ಎಂದರು.

     ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಗೌರವ ಕಾರ್ಯದರ್ಶಿ ಎ.ಜಯರಾಮ್ ಮಾತನಾಡಿ, ನಮ್ಮ ಜನಪದರ ಪ್ರತಿಭೆ  ವೈವಿಧ್ಯಮಯ.  ಅಕ್ಷರಸ್ಥರಲ್ಲದಿದ್ದರೂ, ಸಾವಿರಾರು ತ್ರಿಪದಿಗಳು, ಲಾವಣಿಗಳು, ಗಾದೆಗಳು ಮತ್ತು ಕಥೆಗಳನ್ನು ಕೇವಲ ನೆನಪಿನ ಶಕ್ತಿಯಿಂದ ತಲೆಮಾರಿನಿಂದ ತಲೆಮಾರಿಗೆ ದಾಟಿಸಿದ್ದಾರೆ. ಅವರ ಸಾಹಿತ್ಯದಲ್ಲಿ ಮಾನವೀಯ ಮೌಲ್ಯಗಳು ಮತ್ತು ಬದುಕಿನ ಸಾರ ಅಡಗಿದೆ.  ನಮ್ಮ ಶ್ರೀಮಂತ ಜಾನಪದ ಪರಂಪರೆಯನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯ ಆಗಬೇಕಾಗಿದೆ ಎಂದರು.

     ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು, ಕಸಬಾ ಹೋಬಳಿ ಕಸಾಪ ಕೋಶಾಧ್ಯಕ್ಷ  ಜಿ.ಸುರೇಶ್, ಜ್ಞಾನಗಂಗಾ ಪ್ರೌಢಶಾಲೆಯ ಶಿಕ್ಷಕ ಕೋದಂಡರಾಮ್ವಿವಿಧ  ವಿದ್ಯಾರ್ಥಿನಿಲಯಗಳ  ನಿಲಯಪಾಲಕರುಗಳಾದ  ರಾಧಾಮಣಿ, ರೂಬಿಯಾ, ಶಿವಪ್ಪ, ಸಿ.ಅಣ್ಣಯ್ಯ, ಸತೀಶ್ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ