Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪೋಕ್ಸೋ ಕೇಸ್: ವಚನಾನಂದ ಶ್ರೀಗಳ ಜಾಮೀನು ರದ್ದತಿಗೆ ಪೊಲೀಸರು ಕೋರ್ಟ್ ಮೆಟ್ಟಿಲು!

Advertisement
Advertisement

ಚಂದ್ರವಳ್ಳಿ ನ್ಯೂಸ್, ದಾವಣಗೆರೆ:
ಹರಿಹರದ ಜಗದ್ಗುರು ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ಅವರ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ
, ಅವರಿಗೆ ಮಂಜೂರಾಗಿರುವ ನಿರೀಕ್ಷಣಾ ಜಾಮೀನನ್ನು ರದ್ದುಗೊಳಿಸುವಂತೆ ಹರಿಹರ ಗ್ರಾಮಾಂತರ ಠಾಣೆ ಪೊಲೀಸರು ನ್ಯಾಯಾಲಯದ ಮೊರೆ ಹೋಗಿದ್ದಾರೆ. ಇದರಿಂದಾಗಿ ಶ್ರೀಗಳಿಗೆ ಬಂಧನದ ಭೀತಿ ಎದುರಾಗಿದೆ.

ಮುಚ್ಚಿದ ಲಕೋಟೆಯಲ್ಲಿ ವರದಿ ಸಲ್ಲಿಕೆ-
ಹರಿಹರ ಗ್ರಾಮಾಂತರ ಠಾಣೆಯ ತನಿಖಾಧಿಕಾರಿ ಹಾಗೂ ಪೊಲೀಸ್ ಇನ್‌ಸ್ಪೆಕ್ಟರ್ (
PI) ಸುರೇಶ್ ಸಗರಿ ನೇತೃತ್ವದ ತಂಡವು ದಾವಣಗೆರೆ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಈ ಕುರಿತು ಮುಚ್ಚಿದ ಲಕೋಟೆಯಲ್ಲಿ ರಹಸ್ಯ ವರದಿಯೊಂದನ್ನು ಸಲ್ಲಿಸಿದೆ. ಸ್ವಾಮೀಜಿ ಅವರಿಗೆ ನೀಡಿರುವ ನಿರೀಕ್ಷಣಾ ಜಾಮೀನನ್ನು ರದ್ದುಪಡಿಸಬೇಕು ಎಂದು ಪೊಲೀಸರು ನ್ಯಾಯಾಲಯಕ್ಕೆ ಪ್ರಬಲವಾಗಿ ಮನವಿ ಮಾಡಿದ್ದಾರೆ. ಒಂದು ವೇಳೆ ಕೋರ್ಟ್ ಪೊಲೀಸರ ಮನವಿಯನ್ನು ಪುರಸ್ಕರಿಸಿ ಜಾಮೀನು ರದ್ದುಗೊಳಿಸಿದರೆ, ವಚನಾನಂದ ಶ್ರೀಗಳು ಯಾವುದೇ ಕ್ಷಣದಲ್ಲಾದರೂ ಬಂಧನಕ್ಕೊಳಗಾಗುವ ಸಾಧ್ಯತೆಯಿದೆ.

ಪ್ರಕರಣ ಮುಂಚಿತವಾಗಿಯೇ ಜಾಮೀನು ಪಡೆದಿದ್ದ ಶ್ರೀಗಳು!
ತಮ್ಮ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲು ದೊಡ್ಡ ಮಟ್ಟದ ಷಡ್ಯಂತ್ರ ನಡೆಯುತ್ತಿದೆ ಎಂದು ಆರೋಪಿಸಿದ್ದ ವಚನಾನಂದ ಸ್ವಾಮೀಜಿ ಅವರು
, ಎಫ್‌ಐಆರ್ (FIR) ದಾಖಲಾಗುವ ಮುನ್ನವೇ ಮುಂಜಾಗ್ರತಾ ಕ್ರಮವಾಗಿ ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು ಪಡೆಯುವಲ್ಲಿ ಯಶಸ್ವಿಯಾಗಿದ್ದರು.

ತನಿಖಾಧಿಕಾರಿ ಸುರೇಶ್ ಸಗರಿ ಹೇಳಿಕೆ:
"ವಚನಾನಂದ ಶ್ರೀಗಳ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿರುವುದು ನಿಜ. ಸದ್ಯ ಅವರ ನಿರೀಕ್ಷಣಾ ಜಾಮೀನು ರದ್ದು ಕೋರಿ ಗೌರವಾನ್ವಿತ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದೇವೆ. ಪ್ರಕರಣದ ಮುಂದಿನ ತನಿಖೆಗಾಗಿ ಮೇ 25ರಂದು ಮತ್ತೊಮ್ಮೆ ಪೊಲೀಸ್ ಠಾಣೆಗೆ ಖುದ್ದಾಗಿ ಹಾಜರಾಗುವಂತೆ ಶ್ರೀಗಳಿಗೆ ಸೂಚನೆ ನೀಡಲಾಗಿದೆ."

ಪ್ರಭಾವಿ ಮಠಾಧೀಶರೊಬ್ಬರ ವಿರುದ್ಧದ ಪೋಕ್ಸೋ ಪ್ರಕರಣ ಇಡೀ ದಾವಣಗೆರೆ ಜಿಲ್ಲೆ ಮಾತ್ರವಲ್ಲದೆ ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿದ್ದು, ಮೇ 25ರ ವಿಚಾರಣೆ ಹಾಗೂ ನ್ಯಾಯಾಲಯದ ಮುಂದಿನ ನಿರ್ಧಾರದ ಮೇಲೆ ಎಲ್ಲರ ಕಣ್ಣು ನೆಟ್ಟಿದೆ.

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಾಲಮಸ್ಸೇರಿ ಹೆಚ್‌ಎಂಟಿ ಘಟಕಕ್ಕೆ ಕೇಂದ್ರ ಸಚಿವ ಕುಮಾರಸ್ವಾಮಿ ಭೇಟಿ ಪರಿಶೀಲನೆತುಷ್ಟೀಕರಣದ ಮಿತಿ ಮೀರಿದ ಕಾಂಗ್ರೆಸ್: ಗಲಭೆ ಪ್ರಕರಣಗಳ ವಾಪಸಾತಿ ವಿರುದ್ಧ ವಿಜಯೇಂದ್ರಲೆಕ್ಕ ಕೊಡಿ ಸಿದ್ದರಾಮಣ್ಣ!: ಗೃಹಲಕ್ಷ್ಮಿ ಯೋಜನೆಯ 5,000 ಕೋಟಿ ಹಣ ಎಲ್ಲಿದೆ? ನಿಖಿಲ್ ಕುಮಾರಸ್ವಾಮಿ ಪ್ರಶ್ನೆವೈಮಾನಿಕ ಮತ್ತು ರಕ್ಷಣಾ ಕ್ಷೇತ್ರದ ಉತ್ಪಾದನೆಗೆ ಕರ್ನಾಟಕವೇ ನೆಚ್ಚಿನ ತಾಣ: ಸಚಿವ ಎಂ.ಬಿ. ಪಾಟೀಲ್ಸರಕಾರಿ ಜಾಗಕ್ಕೆ 12 ಕೋಟಿ, ರೈತರ ಜಮೀನಿಗೆ ಕೇವಲ 2 ಕೋಟಿ!: ​ಗೃಹಲಕ್ಷ್ಮಿಯರ 2 ತಿಂಗಳ ಕಂತಿನ 5,000 ಕೋಟಿ ಹಣ ಏನಾಯ್ತು?: ನಿಖಿಲ್ ಆಕ್ರೋಶರೈತರ ಒಕ್ಕಲೆಬ್ಬಿಸುವಿಕೆ ನಿಲ್ಲಿಸಿ, ಖಾಸಗಿ ಕಂಪನಿಗಳಲ್ಲಿ ಸ್ಥಳೀಯರಿಗೆ 50% ಉದ್ಯೋಗ ಕಡ್ಡಾಯಗೊಳಿಸಿ: ನಿಖಿಲ್ಪುಲ್ವಾಮಾ ದಾಳಿಯ ಮಾಸ್ಟರ್‌ ಮೈಂಡ್, ಉಗ್ರ ಹಮ್ಜಾ ಬುರ್ಹಾನ್ ಹತ್ಯೆ: ಬಿಜೆಪಿ ನಾಯಕ ಸಿ.ಟಿ. ರವಿ ಪ್ರತಿಕ್ರಿಯೆರೌಡಿಶೀಟರ್, ಮುಸ್ಲಿಂ ಗೂಂಡಾಗಳ ಕೇಸ್ ವಾಪಸ್; ಸರ್ಕಾರದ ವಿರುದ್ಧ ಸಿ.ಟಿ. ರವಿ ಆಕ್ರೋಶಗರ್ಭಿಣಿಯರು, ಬಾಣಂತಿಯರಿಗೆ ನಿತ್ಯ ಪೌಷ್ಠಿಕ ಬಿಸಿಯೂಟ!​- ಡಾ. ಪ್ರಭಾ