Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪೋಕ್ಸೋ ಪ್ರಕರಣ: ವಚನಾನಂದ ಸ್ವಾಮೀಜಿಗೆ ಷರತ್ತು ಬದ್ಧ ಜಾಮೀನು

Advertisement
Advertisement

 ಚಂದ್ರವಳ್ಳಿ ನ್ಯೂಸ್, ದಾವಣಗೆರೆ:
ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಹರಿಹರ ಪೀಠದ ವಚನಾನಂದ ಸ್ವಾಮೀಜಿಗೆ ಜಿಲ್ಲಾ ಪೋಕ್ಸೋ ವಿಶೇಷ ನ್ಯಾಯಾಲಯವು ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಆದೇಶಿಸಿದೆ.

ಹಿಂದೆ ಪಡೆದಿದ್ದ ನಿರೀಕ್ಷಣಾ ಜಾಮೀನು ರದ್ದಾದ ಹಿನ್ನೆಲೆಯಲ್ಲಿ ವಚನಾನಂದ ಶ್ರೀಗಳು ನಿಯಮಿತ (ರೆಗ್ಯೂಲರ್) ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ಸುದೀರ್ಘ ವಿಚಾರಣೆ ನಡೆಸಿದ ಜಿಲ್ಲಾ ಪೋಕ್ಸೋ ನ್ಯಾಯಾಲಯದ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರಾದ ರಾಮನಾರಾಯಣ್ ಹೆಗ್ಗಡೆ ಅವರು ಶ್ರೀಗಳಿಗೆ ಕೆಲವು ಕಠಿಣ ಷರತ್ತುಗಳನ್ನು ವಿಧಿಸಿ ಜಾಮೀನು ಪ್ರಕಟಿಸಿದ್ದಾರೆ.

ಪ್ರಕರಣದ ಹಿನ್ನೆಲೆ:
ಮಠದಲ್ಲಿದ್ದ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಲಾಗಿದೆ ಎಂದು ಆರೋಪಿಸಿ ಸಂತ್ರಸ್ತ ಬಾಲಕನ ತಾಯಿ ನೀಡಿದ ದೂರಿನ ಮೇರೆಗೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ಮೊದಲಿಗೆ 'ಝೀರೋ ಎಫ್ಐಆರ್' ದಾಖಲಾಗಿತ್ತು. ಘಟನೆ ನಡೆದ ಸ್ಥಳದ ವ್ಯಾಪ್ತಿಯ ಆಧಾರದ ಮೇಲೆ ತದನಂತರ ಈ ಪ್ರಕರಣವನ್ನು ದಾವಣಗೆರೆ ಜಿಲ್ಲೆಯ ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿತ್ತು.

ವಿಶೇಷವೆಂದರೆ, ಈ ಪ್ರಕರಣ ಅಧಿಕೃತವಾಗಿ ದಾಖಲಾಗುವ ಮುನ್ನವೇ ಮುನ್ನೆಚ್ಚರಿಕಾ ಕ್ರಮವಾಗಿ ವಚನಾನಂದ ಶ್ರೀಗಳು ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದರು. ಆದರೆ, ಆ ಜಾಮೀನು ರದ್ದಾದ ಕಾರಣ ಅವರು ನಿಯಮಿತ ಜಾಮೀನಿಗಾಗಿ ಮತ್ತೆ ನ್ಯಾಯಾಲಯದ ಮೆಟ್ಟಿಲೇರಬೇಕಾಯಿತು. ಸದ್ಯ ನ್ಯಾಯಾಲಯವು ಷರತ್ತುಬದ್ಧ ಜಾಮೀನು ನೀಡಿರುವುದರಿಂದ ಸ್ವಾಮೀಜಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ.

 

 

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.