Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪೋಡಿ ಮುಕ್ತ ಗ್ರಾಮಗಳಾಗಬೇಕು. ಕೆರೆ-ಕಟ್ಟೆ ಒತ್ತುವರಿ ತೆರವುಗೊಳಿಸಿ: ಸಿ.ಎಂ ಸ್ಪಷ್ಟ ಸೂಚನೆ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕಂದಾಯ ಇಲಾಖೆ ಸರ್ಕಾರಕ್ಕೆ ಮಾತೃ ಇಲಾಖೆ ಇದ್ದಂತೆ. ಪೋಡಿಮುಕ್ತ ಗ್ರಾಮಗಳಾಗಬೇಕು. ಸರ್ವೇ ಕಾರ್ಯ ಪೂರ್ಣಗೊಳ್ಳಬೇಕು. ಪರವಾನಗಿ ಭೂಮಾಪಕರ ಕಾಯಂ ಮಾಡಲು ಗಂಭೀರ ಕ್ರಮದ ಜೊತೆಗೆ
36 ADLR ಗಳ ನೇಮಕ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಘೋಷಣೆ ಮಾಡಿದರು.

ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ನಡೆದ ಭೂಮಾಪನ, ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆ ಹಾಗೂ ಇಲಾಖೆಯ ನೌಕರರ ಸಂಘಗಳ 36ನೇ ರಾಷ್ಟ್ರೀಯ ಭೂಮಾಪನಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.

ಕಂದಾಯ ಇಲಾಖೆ ಸರ್ಕಾರದ ಮಾತೃ ಇಲಾಖೆ ರೀತಿ ಇದೆ. ಈ ಇಲಾಖೆ ಅಚ್ಚುಕಟ್ಟಾಗಿ ಕೆಲಸ ಮಾಡಿದರೆ ರೈತ ಸಮುದಾಯ ನೆಮ್ಮದಿಯಾಗಿರುತ್ತದೆ. ಕೃಷ್ಣಬೈರೇಗೌಡರ ನೇತೃತ್ವದಲ್ಲಿ ಕಂದಾಯ ಇಲಾಖೆಯಲ್ಲಿ ಅತ್ಯುತ್ತಮ ಕೆಲಸಗಳಾಗುತ್ತಿವೆ ಎಂದು ಮೆಚ್ಚುಗೆ ಸೂಚಿಸಿದರು.

ಕೃಷ್ಣಬೈರೇಗೌಡರು ಇಲಾಖೆಯನ್ನು ಚೆನ್ನಾಗಿ ಅರ್ಥಮಾಡಿಕೊಂಡು, ನಾಲಗೆ ತುದಿಯಲ್ಲಿ ಅಂಕಿ ಅಂಶ ಇಟ್ಟುಕೊಂಡಿರುವ ಸಮರ್ಥ ಮಂತ್ರಿ.



ಕೇವಲ ಮಂತ್ರಿ ಆದರೆ ಸಾಲದು. ಪರಿಣತಿ, ಕಾಳಜಿ ಇರಬೇಕು. ಇವೆರಡೂ ಕೃಷ್ಣಬೈರೇಗೌಡ ಅವರಲ್ಲಿದೆ ಎಂದು ಸಿಎಂ ಸಿದ್ದರಾಮಯ್ಯ ಮೆಚ್ಚುಗೆ ಸೂಚಿಸಿದರು.

ನಾನು ಎರಡು ಬಾರಿ ಮುಖ್ಯಮಂತ್ರಿ ಆಗಿ ಕಂದಾಯ ಇಲಾಖೆಯ, ನೌಕರರ ಬಹಳಷ್ಟು ಸಮಸ್ಯೆಗಳನ್ನು ಬಗೆಹರಿಸಿದ್ದೇನೆ. ಪೂರ್ತಿ ಸಮಸ್ಯೆ ಬಗೆಹರಿದಿಲ್ಲ ಎನ್ನುವ ಬೇಸರ ನನಗೂ ಇದೆ. ತಹಶೀಲ್ದಾರ್, ಎಸಿ ಕಚೇರಿಗಳಲ್ಲಿ ಸುಗಮವಾಗಿ, ಪ್ರಾಮಾಣಿಕವಾಗಿ ಕೆಲಸಗಳು ಆದರೆ ನಾಡಿನ ಜನತೆ, ರೈತ ಸಮುದಾಯ ಅತ್ಯಂತ ನೆಮ್ಮದಿಯಾಗಿರುತ್ತದೆ ಎಂದು ಸಿದ್ದರಾಮಯ್ಯ ತಿಳಿಸಿದರು.

ಕಂದಾಯ ಇಲಾಖೆಗೆ ಅಗತ್ಯ ಇರುವಷ್ಟು ಹಣ ಕೊಟ್ಟಿದ್ದೇವೆ, ಮುಂದೆಯೂ ಕೊಡುತ್ತೇವೆ. ಅಗತ್ಯ ಸಿಬ್ಬಂದಿ ಬಲವನ್ನೂ ಕೊಟ್ಟಿದ್ದೇವೆ. ಅಗತ್ಯ ಇದ್ದರೆ ಮತ್ತೂ ಕೊಡುತ್ತೇನೆ. ಖಾಲಿ ಇರುವ ಎಲ್ಲಾ ಸರ್ವೇಯರ್ ಹುದ್ದೆಗಳ ನೇಮಕಾತಿ ಅತ್ಯಂತ ಪಾರದರ್ಶಕವಾಗಿ ಆಗಿದೆ. ಸದ್ಯದಲ್ಲೇ ನೇಮಕಾತಿ ಪತ್ರವನ್ನೂ ಕೊಡುತ್ತೇವೆ ಎಂದರು. ಹಿಂದೆ ಗೋವಿಂದೇಗೌಡರು ಪ್ರಾಮಾಣಿಕವಾಗಿ ಒಂದು ಲಕ್ಷ ಶಿಕ್ಷಕರ ನೇಮಕಾತಿ ಆಗಿರುವ ರೀತಿಯಲ್ಲೇ ಕೃಷ್ಣಬೈರೇಗೌಡರು ಸರ್ವೇಯರ್ ಗಳ ನೇಮಕಾತಿ ಮಾಡಿದ್ದಾರೆ.

ಪರವಾನಗಿ ಭೂಮಾಪಕರ ಕಾಯಂ ಮಾಡಲು ಗಂಭೀರ ಚಿಂತನೆ ಮಾಡಲಾಗುವುದು. ಜೊತೆಗೆ 36 ಮಂದಿ ಎಡಿಎಲ್ ಆರ್ ಗಳ ನೇಮಕವನ್ನೂ ಸದ್ಯದಲ್ಲೇ ಮಾಡಲಾಗುವುದು ಎಂದು ಸಿಎಂ ಘೋಷಿಸಿದರು.

ನಮ್ಮದು ಹಳ್ಳಿಗಳ ಮತ್ತು ರೈತರ ದೇಶ. ಗ್ರಾಮಗಳು ಮತ್ತು ರೈತರು ನೆಮ್ಮದಿಯಾಗಿ ಉತ್ಪಾದನೆಯಲ್ಲಿ ತೊಡಗಬೇಕಾದರೆ ಸರ್ವೇ ಕಾರ್ಯ ಸರಿಯಾಗಿ ಪೂರ್ಣಗೊಳ್ಳಬೇಕು. ಕೆರೆ ಕಟ್ಟೆಗಳ ಒತ್ತುವರಿ ತೆರವುಗೊಳಿಸಬೇಕು, ಪೋಡಿ ಮುಕ್ತ ಗ್ರಾಮಗಳಾಗಬೇಕು. ಇದಕ್ಕಾಗಿ ಇಲಾಖೆಯ ಪ್ರತಿಯೊಬ್ಬರೂ ಪ್ರಾಮಾಣಿಕವಾಗಿ ಶ್ರಮಿಸಿ, ಧ್ವನಿ ಇಲ್ಲದವರ ಪರವಾಗಿ ಕೆಲಸ ಮಾಡುವುದೇ ನಿಜವಾದ ಪುಣ್ಯದ ಕಾರ್ಯ ಎಂದು ಕರೆ ನೀಡಿದರು.

ಪ್ರತೀ ವರ್ಷ ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಪ್ರತೀ ವರ್ಷ ಆಚರಿಸಬೇಕು ಎಂದು ಸೂಚಿಸಿದರು.
ಶಾಸಕ ರಿಜ್ವಾನ್ ಅರ್ಷದ್ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಸಚಿವರಾದ ಕೃಷ್ಣಬೈರೇಗೌಡ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಮುಖ್ಯ ಸಚೇತಕ ಅಶೋಕ್ ಪಟ್ಟಣ್ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ