Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಂತರರಾಜ್ಯ ಕಳ್ಳರ ತಂಡವನ್ನು ಬಂಧಿಸುವಲ್ಲಿ ಯಶಸ್ವಿಯಾದ ಪೊಲೀಸರು

Advertisement
ಚಂದ್ರವಳ್ಳಿ ನ್ಯೂಸ್, ​ ಚಿತ್ರದುರ್ಗ:
ಚಿತ್ರದುರ್ಗ ಜಿಲ್ಲಾ ಪೊಲೀಸರು ವಿಶೇಷ ಕಾರ್ಯಚರಣೆ ನಡೆಸಿ, ಜಲಜೀವನ್ ಮಿಷನ್ ಪೈಪ್ ಅಳತೆ ಮಾಡುವ ನೆಪದಲ್ಲಿ ಮನೆಗಳ್ಳತನ ಮಾಡುತ್ತಿದ್ದ ಅಂತರರಾಜ್ಯ ಕಳ್ಳರ ತಂಡವನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.


​ಘಟನೆಯ ಹಿನ್ನೆಲೆ:
​ದಿನಾಂಕ 23.08.2025 ರಂದು ಹೊಸದುರ್ಗದ ನ್ಯೂ ಮಾರುತಿ ನಗರದ ವೀಣಾ ಎಂಬುವವರ ಮನೆಗೆ ಬಂದ ಇಬ್ಬರು ವ್ಯಕ್ತಿಗಳು, ತಾವು ಜಲಜೀವನ್ ಮಿಷನ್ ಯೋಜನೆಯಡಿ ಪೈಪ್ ಸಂಪರ್ಕ ನೀಡಲು ಬಂದಿರುವುದಾಗಿ ನಂಬಿಸಿದ್ದಾರೆ. ಅಳತೆ ತೆಗೆದುಕೊಳ್ಳುವ ನೆಪದಲ್ಲಿ ಟೆರೆಸ್ ಮೇಲೆ ಮನೆಯ ಯಜಮಾನಿಯನ್ನು ಕರೆದೊಯ್ದು ದಿಕ್ಕು ತಪ್ಪಿಸಿದ ಸಮಯದಲ್ಲಿ, ಇನ್ನಿಬ್ಬರು ಆರೋಪಿಗಳು ಮನೆಯ ಬೀರುವಿನಲ್ಲಿದ್ದ 1,45,000 ರೂ. ಬೆಲೆಯ 40 ಗ್ರಾಂ ಬಂಗಾರದ ಸರವನ್ನು ಕಳ್ಳತನ ಮಾಡಿದ್ದರು. ಈ ಸಂಬಂಧ ಹೊಸದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. 



​ಪೊಲೀಸ್ ಕಾರ್ಯಾಚರಣೆ ಮತ್ತು ಬಂಧನ:
​ಚಿತ್ರದುರ್ಗ ಜಿಲ್ಲಾ ಪೊಲೀಸ್ ಅಧೀಕ್ಷಕ ರಂಜಿತ್ ಕುಮಾರ್ ಬಂಡಾರು ಅವರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಲಾಗಿತ್ತು. ತಾಂತ್ರಿಕ ಮಾಹಿತಿ ಮತ್ತು ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಪೊಲೀಸರು ತಮಿಳುನಾಡು ಮೂಲದ ಇಬ್ಬರು ಆರೋಪಿಗಳನ್ನು ಹಾಗೂ ಒಬ್ಬ ಬಾಲಾಪರಾಧಿಯನ್ನು ಬಂಧಿಸಿದ್ದಾರೆ. 

​ಬಂಧಿತ ಆರೋಪಿಗಳು:
​ಸರವಣಭವ @ ಬಾಬು (42): ವೆಲ್ಲೂರು ಜಿಲ್ಲೆ, ತಮಿಳುನಾಡು.
​ಶ್ರೀನಿವಾಸ (42): ವೆಲ್ಲೂರು ಜಿಲ್ಲೆ, ತಮಿಳುನಾಡು. 
​ಇವರ ಜೊತೆಗೆ ಒಬ್ಬ ಕಾನೂನಿನ ಸಂಘರ್ಷಕ್ಕೊಳಾಗದ ಬಾಲಕನನ್ನು ವಶಕ್ಕೆ ಪಡೆಯಲಾಗಿದ್ದು, ಮತ್ತೋರ್ವ ಆರೋಪಿ ತಲೆಮರೆಸಿಕೊಂಡಿದ್ದಾನೆ. 

​ವಶಪಡಿಸಿಕೊಂಡ ಸ್ವತ್ತುಗಳು:
​ಬಂಧಿತರಿಂದ ವಿವಿಧ ಜಿಲ್ಲೆಗಳ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದ ಒಟ್ಟು 14.50 ಲಕ್ಷ ರೂಪಾಯಿ ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.​ಬಂಗಾರ: 13,00,000 ರೂ. ಬೆಲೆಯ ಒಟ್ಟು 94 ಗ್ರಾಂ ಚಿನ್ನದ ಆಭರಣಗಳು. 

​ವಾಹನಗಳು: ಕೃತ್ಯಕ್ಕೆ ಬಳಸಿದ್ದ 1,50,000 ರೂ. ಬೆಲೆಯ ಎರಡು ಮೋಟಾರು ಸೈಕಲ್‌ಗಳು.  ​ಈ ಮೋಟಾರು ಸೈಕಲ್‌ಗಳನ್ನು ಶಿರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳ್ಳತನ ಮಾಡಲಾಗಿತ್ತು ಎಂದು ತಿಳಿದುಬಂದಿದೆ. 

​ಪತ್ತೆಯಾದ ಪ್ರಕರಣಗಳು:
​ಈ ತಂಡದ ಬಂಧನದಿಂದ ಈ ಕೆಳಗಿನ ಪ್ರಕರಣಗಳು ಬೆಳಕಿಗೆ ಬಂದಿವೆ:​ಹೊಸದುರ್ಗ ಠಾಣೆಯ 1 ಪ್ರಕರಣ.  ​ಚಿತ್ರದುರ್ಗ ಬಡಾವಣೆ ಠಾಣೆಯ 2 ಪ್ರಕರಣಗಳು.  ​ದಾವಣಗೆರೆ ಟೌನ್ ವಿದ್ಯಾನಗರ ಠಾಣೆಯ 1 ಪ್ರಕರಣ. ​ಈ ಯಶಸ್ವಿ ಪತ್ತೆ ಕಾರ್ಯವನ್ನು ಜಿಲ್ಲಾ ಪೊಲೀಸ್ ಅಧೀಕ್ಷಕರು ಶ್ಲಾಘಿಸಿದ್ದಾರೆ.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ