ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರಿನ ಡಿಜೆ ಹಳ್ಳಿ ಪೊಲೀಸ್ ಇನ್ಸ್ಪೆಕ್ಟರ್ ಸುನೀಲ್ ಅವರನ್ನ ಯುವತಿ ಮೇಲೆ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿ ಅಮಾನತು ಮಾಡಲಾಗಿದೆ.
ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಈ ಕುರಿತು ಪ್ರತಿಕ್ರಿಯಿಸಿ, ಇನ್ಸ್ಪೆಕ್ಟರ್ ಹಾಗೂ ಎಎಸ್ಐ ವಿರುದ್ಧ ಪ್ರಕರಣ ದಾಖಲಾಗಿತ್ತು. ಸದ್ಯ ಇಬ್ಬರನ್ನೂ ಸಸ್ಪೆಂಡ್ ಮಾಡಲಾಗಿದ್ದು ತನಿಖೆ ಮುಂದುವರೆದಿದೆ ಎಂದು ಮಾಹಿತಿ ನೀಡಿದರು.
ಪೊಲೀಸ್ ಠಾಣೆಗೆ ಪ್ರಕರಣವೊಂದರ ಸಂಬಂಧ ಮಹಿಳೆ ಹೋಗಿದ್ದ ವೇಳೆ ಸಹಾಯ ಮಾಡುವುದಾಗಿ ನಂಬರ್ ತೆಗೆದುಕೊಂಡು ವಾಟ್ಸಪ್ ಚಾಟ್ ಮೂಲಕ ಪರಿಚಯ ಮಾಡಿಕೊಂಡಿದ್ದರು.
ರಿಜಿಸ್ಟರ್ ಮದುವೆಯಾಗುವುದಾಗಿ ನಂಬಿಸಿ, 1 ವರ್ಷದಲ್ಲಿ 3 ಬಾರಿ ಲೈಂಗಿಕವಾಗಿ ಬಳಸಿಕೊಂಡಿದ್ದಾರೆ. ಅಲ್ಲದೇ ಖಾಸಗಿ ಫೋಟೋ, ವಿಡಿಯೋ ಇಟ್ಟುಕೊಂಡು ವಿಚಾರ ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಮಹಿಳೆ ಆರೋಪಿಸಿ ಪೊಲೀಸ್ ಮಹಾ ನಿರ್ದೇಶಕರಿಗೆ ದೂರು ನೀಡಿ ನ್ಯಾಯಕ್ಕಾಗಿ ಮೊರೆ ಹೋಗಿದ್ದರು.


