LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪೊಲೀಸರ ಮೆಗಾ ಆಪರೇಷನ್: 105 ಅಕ್ರಮ ಬಾಂಗ್ಲಾ ವಲಸಿಗರ ಬಂಧನ, ಗಡಿಪಾರಿಗೆ ಕ್ರಮ

Advertisement
Advertisement

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜಧಾನಿಯಲ್ಲಿ ಕಾನೂನುಬಾಹಿರವಾಗಿ ನೆಲೆಸಿರುವ ವಿದೇಶಿ ಪ್ರಜೆಗಳ ವಿರುದ್ಧ ಬೆಂಗಳೂರು ನಗರ ಪೊಲೀಸರು ಸಮರ ಸಾರಿದ್ದು
, ಬೃಹತ್ ಕಾರ್ಯಾಚರಣೆಯಲ್ಲಿ 105 ಅಕ್ರಮ ಬಾಂಗ್ಲಾದೇಶಿ ಪ್ರಜೆಗಳನ್ನು ವಶಕ್ಕೆ ಪಡೆದಿದ್ದಾರೆ.

ನಗರದ ವೈಟ್‌ಫೀಲ್ಡ್ ಹಾಗೂ ಎಲೆಕ್ಟ್ರಾನಿಕ್ ಸಿಟಿ ವಿಭಾಗಗಳಲ್ಲಿ ಒಟ್ಟು 592 ಪೊಲೀಸ್ ಸಿಬ್ಬಂದಿಯನ್ನೊಳಗೊಂಡ 58 ವಿಶೇಷ ಪಡೆಗಳು ಈ ಜಂಟಿ ಕಾರ್ಯಾಚರಣೆ ನಡೆಸಿದ್ದವು. ತಪಾಸಣೆ ವೇಳೆ ಒಟ್ಟು 2,944 ಶಂಕಿತ ವ್ಯಕ್ತಿಗಳ ದಾಖಲೆಗಳನ್ನು ಕೂಲಂಕುಷವಾಗಿ ಪರಿಶೀಲಿಸಲಾಗಿದ್ದು, ಈ ಪೈಕಿ ಸೂಕ್ತ ದಾಖಲೆಗಳಿಲ್ಲದ 105 ಬಾಂಗ್ಲಾದೇಶಿಗರು ಪತ್ತೆಯಾಗಿದ್ದಾರೆ ಎಂದು ಪೊಲೀಸ್ ಆಯುಕ್ತರ ಕಚೇರಿ ತಿಳಿಸಿದೆ.

ವಿಭಾಗವಾರು ಕಾರ್ಯಾಚರಣೆಯ ವಿವರ:
ವೈಟ್‌ಫೀಲ್ಡ್ ವಿಭಾಗ: 35 ವಿಶೇಷ ತಂಡಗಳಿಂದ 1,035 ಜನರ ತಪಾಸಣೆ; 62 ಅಕ್ರಮ ವಲಸಿಗರ ಪತ್ತೆ.

ಎಲೆಕ್ಟ್ರಾನಿಕ್ ಸಿಟಿ ವಿಭಾಗ: 23 ವಿಶೇಷ ತಂಡಗಳಿಂದ 1,909 ಜನರ ಪರಿಶೀಲನೆ; 43 ಅಕ್ರಮ ವಲಸಿಗರ ಬಂಧನ.

ವಶಕ್ಕೆ ಪಡೆಯಲಾದ ಪ್ರಜೆಗಳ ವಿವರ ಹಾಗೂ ವರದಿಯನ್ನು ಮುಂದಿನ ಕಾನೂನು ಕ್ರಮಕ್ಕಾಗಿ ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿಗೆ (FRRO) ರವಾನಿಸಲಾಗಿದ್ದು, ಅಲ್ಲಿಂದ ಹಸಿರು ನಿಶಾನೆ ಸಿಕ್ಕ ಬಳಿಕ ಅವರ ಮಾತೃದೇಶಕ್ಕೆ ಗಡಿಪಾರು ಮಾಡಲಾಗುವುದು ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ಮನೆ ಮಾಲೀಕರಿಗೆ ಡಿಸಿಪಿ ಕಠಿಣ ಎಚ್ಚರಿಕೆ:
ಕಾರ್ಯಾಚರಣೆ ಕುರಿತು ಮಾಹಿತಿ ನೀಡಿದ ವೈಟ್‌ಫೀಲ್ಡ್ ವಿಭಾಗದ ಡಿಸಿಪಿ ಸೈದುಲು ಅಡಾವತ್
, "ಯಾವುದೇ ಸೂಕ್ತ ದಾಖಲೆಗಳನ್ನು ಪರಿಶೀಲಿಸದೆ ಅಕ್ರಮ ವಲಸಿಗರಿಗೆ ಮನೆ ಅಥವಾ ಜಾಗ ಬಾಡಿಗೆಗೆ ನೀಡುವ ಮಾಲೀಕರ ವಿರುದ್ಧವೂ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು. ಈಗಾಗಲೇ ವೈಟ್‌ಫೀಲ್ಡ್ ಭಾಗದಲ್ಲಿ ಇಂತಹ 10 ಮನೆ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ" ಎಂದು ಎಚ್ಚರಿಸಿದ್ದಾರೆ. 

ನಗರದಾದ್ಯಂತ ಈ ತಪಾಸಣೆ ಮುಂದುವರಿಯಲಿದ್ದು, ಸಾರ್ವಜನಿಕರು ತಮ್ಮ ವ್ಯಾಪ್ತಿಯಲ್ಲಿ ಅಕ್ರಮ ವಲಸಿಗರ ಬಗ್ಗೆ ಮಾಹಿತಿ ತಿಳಿದುಬಂದರೆ ತಕ್ಷಣವೇ ಹತ್ತಿರದ ಪೊಲೀಸ್ ಠಾಣೆಗೆ ಅಥವಾ ತುರ್ತು ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ನೀಡುವಂತೆ ಬೆಂಗಳೂರು ಪೊಲೀಸ್ ಇಲಾಖೆ ಮನವಿ ಮಾಡಿದೆ.

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರೈತರಿಗೆ 3 ದಿನಗಳ ವಸತಿಯುಕ್ತ ಉಚಿತ ಸಾವಯವ ಕೃಷಿ ತರಬೇತಿ ಹಾಗೂ ಪ್ರವಾಸಬಿಡದಿ ಟೌನ್‌ಶಿಪ್‌ ಯೋಜನೆ ವಿರುದ್ಧ ಕುಮಾರಸ್ವಾಮಿ, ಆರ್.ಅಶೋಕ್ ಚಾಲನೆ: ಪಾದಯಾತ್ರೆಯಲ್ಲಿ ಹಿರಿಯೂರು ಮುಖಂಡರು ಭಾಗಿಸರ್ಕಾರಿ ಶಾಲೆಗೆ ಭೂಮಿ ದಾನ ಅತ್ಯಂತ ಶ್ರೇಷ್ಠ ಕಾರ್ಯ-ಎನ್. ಶ್ರೀನಿವಾಸ್ ಚಿನ್ಮೂಲಾದ್ರಿ ಅಕ್ಷರೋತ್ಸವ ಕವಿಗೋಷ್ಟಿ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿದ ಡಾ.ಎಲ್.ಪಾಲಾಕ್ಷಯ್ಯಬಿಡದಿ ಟೌನ್‌ಶಿಪ್ ವಿರೋಧಿ ಪಾದಯಾತ್ರೆಗೆ ಸಿಎಂ ಡಿ.ಕೆ. ಶಿವಕುಮಾರ್ ಪ್ರತ್ಯುತ್ತರ:ಬಿಡದಿ ಟೌನ್‌ಶಿಪ್ ವಿರುದ್ಧ ಬಿಜೆಪಿ-ಜೆಡಿಎಸ್ ಜಂಟಿ ಸಮರ: ಬೈರಮಂಗಲದಿಂದ ಬೆಂಗಳೂರಿಗೆ 'ಪಾದಯಾತ್ರೆ' ಆರಂಭ"ನನ್ನನ್ನು ಕೊಂಡುಕೊಳ್ಳಲು ಯಾರಿಂದಲೂ ಸಾಧ್ಯವಿಲ್ಲ": ಹೆಚ್.ಡಿ. ಕೆ ವಾಗ್ದಾಳಿ ಖಾತೆ ಹಂಚಿಕೆ, ಸಂಪುಟ ಪುನಾರಚನೆ ಕಸರತ್ತು: ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳಿದ ಸಿಎಂ ಶಿವಕುಮಾರ್ಪೊಲೀಸರ ಮೆಗಾ ಆಪರೇಷನ್: 105 ಅಕ್ರಮ ಬಾಂಗ್ಲಾ ವಲಸಿಗರ ಬಂಧನ, ಗಡಿಪಾರಿಗೆ ಕ್ರಮಸಚಿವ ನಾಗೇಂದ್ರ ರಾಜೀನಾಮೆಗೆ ಶ್ರೀರಾಮುಲು ಆಗ್ರಹ; ರೆಡ್ಡಿ ಬ್ರದರ್ಸ್‌ಗೆ ಈಶ್ವರ್ ಖಂಡ್ರೆ ತಿರುಗೇಟು