Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪೊಲೀಸರ ಮಿಂಚಿನ ಕಾರ್ಯಾಚರಣೆ, 5.50 ಕೋಟಿ ಡ್ರಗ್ಸ್​  ವಶ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರಿನ ಸಿಸಿಬಿ ಪೊಲೀಸರು ಡ್ರಗ್ಸ್ ಸರಬರಾಜು ಮಾಡುತ್ತಿದ್ದ ಅಡ್ಡೆಗಳ ಮೇಲೆ ಮಿಂಚಿನ ಕಾರ್ಯಾಚರಣೆ ಮಾಡಿ 5.50 ಕೋಟಿ ರೂ ಮೌಲ್ಯದ ಡ್ರಗ್ಸ್​  ವಶಪಡಿಸಿಕೊಂಡು ತನಿಖೆ ಚುರುಕುಗೊಳಿಸಿದ್ದಾರೆ.


ನಗರಕ್ಕೆ ಡ್ರಗ್ಸ್ ತರಿಸಿಕೊಂಡು ದಂಧೆ ನಡೆಸುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿ, ಬಂಧಿತ ಆರೋಪಿಗಳಿಂದ 1.47 ಕೋಟಿ ಮೌಲ್ಯದ ಎಂಡಿಎಂಎ ವಶಕ್ಕೆ ಪಡೆದುಕೊಂಡಿದ್ದಾರೆ. ಅಲ್ಲದೆ ಮತ್ತೊಂದು ಪ್ರಕರಣದಲ್ಲಿ ನಗರದ ವಿದೇಶಿ ಅಂಚೆ ಕಚೇರಿಗೆ ಚಾಕೊಲೇಟ್ ಹಾಗೂ ಬಿಸ್ಕತ್ ಪ್ಯಾಕೇಟ್​ಗಳಲ್ಲಿ ಬಂದಿದ್ದ ಮೂರು ಕೋಟಿ ಮೌಲ್ಯದ ಹೈಡ್ರೊಗಾಂಜ ಜಪ್ತಿ ಮಾಡಿದ್ದಾರೆ.

ದೆಹಲಿಯಿಂದ ರಾಜಧಾನಿಗೆ ನಿಷೇಧಿತ ಎಂಡಿಎಂಎ ತರಿಸಿಕೊಂಡು ಡ್ರಗ್ಸ್ ಮಾರಾಟ ಮಾಡಿ ಅಕ್ರಮವಾಗಿ ಹಣ ಸಂಪಾದನೆ ಮಾಡುತ್ತಿದ್ದ ನೈಜೀರಿಯಾದ ಇಬ್ಬರು ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.


ಆರೋಪಿಗಳಾದ ಡುರೊ ಮಿಶೆಲ್ ಹಾಗೂ ಇಬು ಸ್ಯಾಮುಯೆಲ್ ಬಂಧಿತರು. ಇವರಿಂದ 1.47 ಕೆ.ಜಿ ಎಂಡಿಎಂಎ ಕ್ರಿಸ್ಟೆಲ್ ವಶಪಡಿಸಿಕೊಂಡು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಬಿಸ್ನೆಸ್ ವೀಸಾದಡಿ 2017ರಲ್ಲಿ ಭಾರತಕ್ಕೆ ಬಂದಿದ್ದ ಆರೋಪಿಗಳು ನಗರದ ಹೆಬ್ಬಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನೆಲೆಸಿದ್ದರು. ಆರಂಭದಲ್ಲಿ ಬಟ್ಟೆ ವ್ಯಾಪಾರ ಮಾಡುತ್ತಿದ್ದು, ತಮಿಳುನಾಡಿನಿಂದ ಬಟ್ಟೆ ಖರೀದಿಸಿ ನೈಜೀರಿಯಾಗೆ ರಪ್ತು ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.ಸುಲಭವಾಗಿ ಹಣ ಸಂಪಾದ‌ನೆ ಮಾಡಲು ಅಡ್ಡ ದಾರಿ ಹಿಡಿದು, ದೆಹಲಿಯಿಂದ ಲಗೇಜ್​ಗಳ ಮುಖಾಂತರ ಡ್ರಗ್ಸ್ ತರಿಸಿಕೊಳ್ಳುತ್ತಿದ್ದರು.

ಬಳಿಕ ನಗರದ ಕಾಲೇಜುಗಳ ಮುಂದೆ ಡ್ರಗ್ಸ್ ಮಾರಾಟ ಮಾಡಿ ಅಕ್ರಮವಾಗಿ ಹಣ ಸಂಪಾದನೆ ಮಾಡುತ್ತಿದ್ದರು. ಆರೋಪಿಗಳ ವಿರುದ್ದ ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಮತ್ತೊಂದು ಡ್ರಗ್ಸ್ ಪ್ರಕರಣದಲ್ಲಿ ಬೆಂಗಳೂರಿನ ಕೆ.ಜಿ.ನಗರ ಪೊಲೀಸ್ ಠಾಣಾ ವ್ಯಾಪ್ತಿಯ ವಿದೇಶಿ ಅಂಚೆ ಕಚೇರಿಗೆ ಥೈಲ್ಯಾಂಡ್​ನಿಂದ ಬಂದಿದ್ದ ಅನುಮಾನಾಸ್ಪಾದ ಪಾರ್ಸೆಲ್​​ನಲ್ಲಿದ್ದ 3 ಕೋಟಿ ಮೌಲ್ಯದ 3 ಕೆ.ಜಿ‌.‌ಹೈಡ್ರೊಗಾಂಜಾವನ್ನು ಸಿಸಿಬಿ ಪತ್ತೆ ಹಚ್ಚಿ ವಶಕ್ಕೆ ಪಡೆದುಕೊಂಡಿದೆ.


ಅಂಚೆ ಕಚೇರಿಗೆ ವಿದೇಶದಿಂದ ಅನುಮಾನ್ಪಾಸದ ಪಾರ್ಸೆಲ್ ಬರುತ್ತಿರುವುದಾಗಿ ಕಸ್ಟಮ್ ಇಲಾಖೆ ಪೊಲೀಸರಿಗೆ ಮಾಹಿತಿ ನೀಡಿದ್ದು ಮಾಹಿತಿ ಆಧರಿಸಿ ಪೊಲೀಸರು ಕಾರ್ಯಾಚರಣೆ ನಡೆಸಿದಾಗ ಕೋಟ್ಯಂತರ ಮೌಲ್ಯದ ಡ್ರಗ್ಸ್ ಪತ್ತೆಯಾಗಿದೆ.


ವಿದೇಶಿ ಕಂಪೆನಿಗಳ‌ಬಿಸ್ಕತ್, ಚಾಕೊಲೇಟ್ ಪ್ಯಾಕೇಟ್​​ಗಳಲ್ಲಿ ಡ್ರಗ್ಸ್ ಮರೆಮಾಚಿ ಅಪರಿಚಿತ ಆರೋಪಿಗಳು ನಗರಕ್ಕೆ ತರಿಸಿಕೊಂಡಿದ್ದರು. ಕೆ.ಜಿ.ಹಳ್ಳಿ ಪೊಲೀಸ್ ಠಾಣೆಯಲ್ಲಿ ಎನ್​ಡಿಪಿಎಸ್ ಪ್ರಕರಣ ದಾಖಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ