ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಬಾಶೆಟ್ಟಿಹಳ್ಳಿ ಗ್ರಾಮದ ಮನೆಯ ಕೊಠಡಿ ಯೊಂದರಲ್ಲಿ ಅಕ್ರಮವಾಗಿ ಇಸ್ಪೀಟ್ ಜೂಜಾಟ ಆಡುತ್ತಿದ್ದ ಐದು ಜನರನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಖಚಿತ ಮಾಹಿತಿ ಯೊಂದಿಗೆ ವಶಕ್ಕೆ ಪಡೆಸಿಕೊಂಡಿದ್ದಾರೆ.
ಬಾಶೆಟ್ಟಿಹಳ್ಳಿ ಗ್ರಾಮದ ತನುಜಾ ಬಾರ್ ಹಿಂಭಾಗದಲ್ಲಿರುವ ಪ್ರಕಾಶ್ ಎನ್ನುವವರಿಗೆ ಸೇರಿದ ಮನೆಯ ರೂಮಿನಲ್ಲಿ ಸೆ.24ರಂದು ರಾತ್ರಿ 7.30ರ ವೇಳೆಗೆ ಹಣವನ್ನು ಪಣಕ್ಕಿಟ್ಟು ಜೂಜಾಟ ಆಡುತ್ತಿರುವ ಬಗ್ಗೆ ಪೊಲೀಸರಿಗೆ ಖಚಿತ ಮಾಹಿತಿ ಆಧರಿಸಿ ಇನ್ಸ್‌ಪೆಕ್ಟರ್ ಡಾ.ಎಂ. ಬಿ. ನವೀನ್ ಕುಮಾರ್ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ.
ದಾಳಿಯಲ್ಲಿ ಅಂಬರೀಶ್ (45), ಸಂತೋಷ್ (25), ನಾನಿಬಾಬು (27), ಶಿವರೆಡ್ಡಿ (38) ಹಾಗೂ ಶಿವಣ್ಣ (30) ಎಂಬ ಐವರನ್ನು ವಶಕ್ಕೆ ಪಡೆಯಲಾಗಿದೆ.
ಆರೋಪಿಗಳಿಂದ 52 ಇಸ್ಪೀಟ್ ಎಲೆಗಳು, ಜೂಜಾಟಕ್ಕೆ ಪಣವಾಗಿಟ್ಟಿದ್ದ ₹35,600 ನಗದು ಹಾಗೂ ಒಂದು ಪ್ಲಾಸ್ಟಿಕ್ ಚಾಪೆಯನ್ನು ವಶಪಡಿಸಿಕೊಳ್ಳಲಾಗಿದೆ.
ಈ ಸಂಬಂಧ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ FIR No. 456/2026, ಕಲಂ 80 ಕೆಪಿ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ ಎಂದು ಪೋಲೀಸ್ ಮೂಲಗಳಿಂದ ತಿಳಿದು ಬಂದಿದೆ.




