Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪೊಲೀಸರ ಕೊಲೆಗೆ ಯತ್ನ ಆರೋಪಿಗೆ ಗುಂಡು ಹಾರಿಸಿದ ಪೊಲೀಸರು

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಪ್ರಕರಣ ಒಂದರಲ್ಲಿ ಬೇಕಾಗಿದ್ದ ಆರೋಪಿಯನ್ನು ಬಂಧಿಸಲು ಮುಂದಾದ ಪೊಲೀಸರ ಹತ್ಯೆ ಯತ್ನ ಮಾಡಿದ್ದು ಆತ್ಮ ರಕ್ಷಣೆಗಾಗಿ ಪೊಲೀಸರು ಗುಂಡು ಹಾರಿಸಿರುವ ಘಟನೆ ಚಿತ್ರದುರ್ಗ ತಾಲೂಕಿನ ಸೀಬಾರ ಸಮೀಪದಲ್ಲಿ ಶುಕ್ರವಾರ ಬೆಳಗಿನ ಜಾವ ಜರುಗಿದೆ.


ಪೊಲೀಸರು ಹಾರಿಸಿದ ಗುಂಡು ಆರೋಪಿ ಚೇಳುಗುಡ್ಡದ ಮಹಮ್ಮದ್ ಕಮ್ರಾನ್ ತಂದೆ ಮಹಮ್ಮದ್ ಖಾಸೀಂ ಮೊಣಕಾಲಿಗೆ ಗುಂಡು ತಗಲಿದ್ದು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.

ಆರೋಪಿಯನ್ನು ಹಿಡಿಯಲು ಮುಂದಾದ ಪೊಲೀಸ್ ಸಿಬ್ಬಂದಿ ತಿಮ್ಮರಾಯಪ್ಪ ಅವರಿಗೆ ಚಾಕುವಿನಿಂದ ಹೊಟ್ಟೆಗೆ ಇರಿಯಲು ಯತ್ನಿಸಿದಾಗ ಪೊಲೀಸ್ ಕೈ ಅಡ್ಡ ಹಿಡಿದಿದ್ದರಿಂದ ಕೈಗೆ ಚಾಕು ಇರಿದಿದ್ದಲ್ಲದೆ ಮತ್ತೆ ಚಾಕುವಿನಿಂದ ಕೊಲೆ ಮಾಡಲು ಮುಂದಾಗುತ್ತಿದ್ದಂತೆ ಪೊಲೀಸರು ಆತ್ಮ ರಕ್ಷಣೆಗಾಗಿ ಆರೋಪಿ ಕಾಲಿಗೆ ಗುಂಡು ಹಾರಿಸಿದ್ದಾರೆ.

ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯ ಪ್ರಮುಖ ಪ್ರಕರಣವೊಂದರಲ್ಲಿ ಬೇಕಾಗಿದ್ದ ಆರೋಪಿ ಮಹಮ್ಮದ್ ಕಮ್ರಾನ್ ನಗರದ ಹೊರವಲಯದ ಸೀಬಾರದ ಬಳಿ ಇರುವ ಮಾಹಿತಿ ಪೊಲೀಸ್ ನಿರೀಕ್ಷಕ ಮುದ್ದರಾಜ ವೈ ರವರು ತಮ್ಮ ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ಹೋಗಿದ್ದು ಪೊಲೀಸರನ್ನು ಕಂಡು ಸ್ಥಳದಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ ವ್ಯಕ್ತಿಯನ್ನು ಹಿಡಿದುಕೊಳ್ಳುವ ಸಮಯದಲ್ಲಿ ಈ ಘಟನೆ ಸಂಭವಿಸಿದೆ.

ಆಗ ಪೊಲೀಸ್ ನಿರೀಕ್ಷಕ ಮುದ್ದರಾಜ ಗಾಳಿಯಲ್ಲಿ ಗುಂಡು ಹಾರಿಸಿ ಶರಣಾಗುವಂತೆ ಎಚ್ಚರಿಕೆ ನೀಡಿದಾಗ್ಯೂ ಆರೋಪಿ ಪುನಃ ಚಾಕುವಿನಿಂದ ತಿಮ್ಮರಾಯಪ್ಪವರಿಗೆ ಚುಚ್ಚಿ ಕೊಲೆ ಮಾಡಲು ಪ್ರಯತ್ನಿಸಿದಾಗ ಮುದ್ದುರಾಜರವರು ಆರೋಪಿಯ ಕಡೆಗೆ ಒಂದು ಸುತ್ತು ಗುಂಡು ಹಾರಿಸಿದ್ದು ಆರೋಪಿಯ ಮೊಣಕಾಲಿಗೆ ತಗುಲಿದೆ. ಗಾಯಗೊಂಡಿರುವ ಪೊಲೀಸ್ ಸಿಬ್ಬಂದಿ ಮತ್ತು ಆರೋಪಿ ಇಬ್ಬರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ