Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

"ಪೊಲೀಸ್ ರಾಜ್ಯವಾಗಲು ಬಿಡುವುದಿಲ್ಲ": ಪೊಲೀಸರಿಗೆ 3 ಲಕ್ಷ ರೂ. ದಂಡ ವಿಧಿಸಿದ ಹೈಕೋರ್ಟ್!

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸಿವಿಲ್ ವ್ಯಾಜ್ಯಕ್ಕೆ ಸಂಬಂಧಿಸಿದಂತೆ ಆಸ್ತಿ ಉಯಿಲಿನ (ವಿಲ್) ಸಾಕ್ಷಿಯೊಬ್ಬರನ್ನು ಯಾವುದೇ ಸಕಾರಣಗಳಿಲ್ಲದೆ ಅಕ್ರಮವಾಗಿ ಬಂಧಿಸಿದ್ದ ವೈಟ್‌ಫೀಲ್ಡ್ ಪೊಲೀಸರ ವಿರುದ್ಧ ಕರ್ನಾಟಕ ಹೈಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿದ್ದು
, ತನಿಖಾಧಿಕಾರಿಗೆ ಬರೋಬ್ಬರಿ 3 ಲಕ್ಷ ರೂಪಾಯಿ ದಂಡ ವಿಧಿಸಿ ಆದೇಶಿಸಿದೆ.

ಉಯಿಲಿಗೆ (ವಿಲ್) ಸಾಕ್ಷಿಯಾಗಿ ಸಹಿ ಮಾಡಿದ ಕಾರಣಕ್ಕೆ ತಮ್ಮನ್ನು ಕಾನೂನು ಬಾಹಿರವಾಗಿ ಬಂಧಿಸಿರುವುದನ್ನು ಪ್ರಶ್ನಿಸಿ ಬೆಂಗಳೂರಿನ ವರ್ತೂರಿನ ನಿವಾಸಿ ಕೆ. ಎನ್. ಮೋಹನ್ ರೆಡ್ಡಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ ಈ ಮಹತ್ವದ ತೀರ್ಪು ನೀಡಿದೆ. 

Advertisement

ಸಮಯ ಮುಗಿಯುವ ಮುನ್ನವೇ ಬಂಧನಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಅರ್ಜಿದಾರರಿಗೆ ಆಗಸ್ಟ್ 27ಕ್ಕೆ ಪೊಲೀಸರು ನೋಟಿಸ್ ನೀಡಿದ್ದರು. ಆದರೆ, ನೀಡಿದ್ದ ಸಮಯಕ್ಕಿಂತ ಎರಡು ದಿನ ಮುಂಚಿತವಾಗಿ, ಅಂದರೆ ಆಗಸ್ಟ್ 25ರಂದೇ ಅವರನ್ನು ಅಕ್ರಮವಾಗಿ ಬಂಧಿಸಲಾಗಿತ್ತು.

ಈ ನಡೆಯನ್ನು ತೀವ್ರವಾಗಿ ಖಂಡಿಸಿದ ನ್ಯಾಯಪೀಠ, "ಪ್ರಕರಣ ಸಂಪೂರ್ಣವಾಗಿ ಸಿವಿಲ್ ಸ್ವಭಾವದ್ದಾಗಿದ್ದು, ಇಲ್ಲಿ ಪೊಲೀಸರ ಮಧ್ಯಪ್ರವೇಶಕ್ಕೆ ಅವಕಾಶವೇ ಇಲ್ಲ. ಆದರೂ ವಿನಾಕಾರಣ ಬಂಧಿಸಿರುವುದನ್ನು ಒಪ್ಪಲು ಸಾಧ್ಯವಿಲ್ಲ" ಎಂದು ಕಟ್ಟುನಿಟ್ಟಾಗಿ ಹೇಳಿದೆ. 

ಪೊಲೀಸ್ ರಾಜ್ಯವಾಗಲು ಬಿಡುವುದಿಲ್ಲ - ಹೈಕೋರ್ಟ್ ಗರಂವಿಚಾರಣೆ ವೇಳೆ ಪೊಲೀಸರ ಕಾರ್ಯವೈಖರಿ ಕಂಡು ಕೆಂಡಾಮಂಡಲವಾದ ನ್ಯಾಯಪೀಠ, "ದೂರುದಾರ ಪ್ರಭಾವಿಯಾಗಿದ್ದರೆ ಸಾಕು, ಯಾರನ್ನು ಬೇಕಾದರೂ ಬಂಧಿಸುತ್ತಿದ್ದಾರೆ. ಕೊಲೆಯಂತಹ ಗಂಭೀರ ಅಪರಾಧಗಳ ತನಿಖೆ ಬಿಟ್ಟು ಸಿವಿಲ್ ವ್ಯಾಜ್ಯಗಳ ಹಿಂದೆ ಬಿದ್ದಿದ್ದಾರೆ.

ದೇಶದಲ್ಲಿ ಕಾನೂನಿನ ಆಡಳಿತವಿದೆಯೇ ಹೊರತು ಇದು ಪೊಲೀಸ್ ರಾಜ್ಯವಲ್ಲ. ರಾಜ್ಯವನ್ನು ಪೊಲೀಸ್ ರಾಜ್ಯವಾಗಲು ನಾವು ಬಿಡುವುದಿಲ್ಲ" ಎಂದು ಖಡಕ್ ಎಚ್ಚರಿಕೆ ನೀಡಿದೆ. 

ಇದೇ ವೇಳೆ ನ್ಯಾಯಾಲಯಕ್ಕೆ ಹಾಜರಿದ್ದ ತನಿಖಾಧಿಕಾರಿ ಪಿಎಸ್‌ಐ ಸುನಿಲ್ ಕುಮಾರ್ ಹಾಗೂ ಮೇಲಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಕೋರ್ಟ್, ಹಿರಿಯ ಅಧಿಕಾರಿಗಳ ಒತ್ತಡಕ್ಕೆ ಮಣಿದು ಬಂಧಿಸಲಾಗಿದೆಯೇ ಎಂದು ಪ್ರಶ್ನಿಸಿತಲ್ಲದೆ ಎಸಿಪಿ ಮತ್ತು ಡಿಸಿಪಿ ಅವರ ನಿರ್ಲಕ್ಷ್ಯದ ಹೊಣೆಗಾರಿಕೆಯನ್ನು ಎತ್ತಿಹಿಡಿಯಿತು.

 ಪೊಲೀಸರು ಹೇಳಿದ್ದನ್ನೆಲ್ಲಾ ವಿಚಾರಣಾ ನ್ಯಾಯಾಲಯಗಳು ಕಣ್ಣು ಮುಚ್ಚಿ ಕೇಳಿ ಆದೇಶ ಹೊರಡಿಸುತ್ತಿರುವುದಕ್ಕೂ ಪೀಠ ತೀವ್ರ ಬೇಸರ ವ್ಯಕ್ತಪಡಿಸಿತು.  ಸ್ವಂತ ಜೇಬಿನಿಂದಲೇ ದಂಡ ಪಾವತಿಸಲು ಆದೇಶ ಅಕ್ರಮವಾಗಿ ಮಧ್ಯಪ್ರವೇಶಿಸಿ ಬಂಧಿಸಿದ್ದಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಂಡ ಹೈಕೋರ್ಟ್, 3 ಲಕ್ಷ ರೂಪಾಯಿ ದಂಡ ವಿಧಿಸಿದ್ದು, ಈ ಮೊತ್ತವನ್ನು ಸರ್ಕಾರದ ಖಜಾನೆಯಿಂದ ಪಾವತಿಸದೆ ತಪ್ಪು ಎಸಗಿದ ಸಂಬಂಧಪಟ್ಟ ತನಿಖಾಧಿಕಾರಿಯೇ ತಮ್ಮ ಸ್ವಂತ ಹಣದಿಂದ ಪಾವತಿಸಬೇಕು ಎಂದು ಆದೇಶಿಸಿದೆ. ಅಲ್ಲದೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲಾಖಾ ತನಿಖೆಗೂ ಸೂಚನೆ ನೀಡಿದೆ. 

 

Author
ಸಿ.ಹೆಂಜಾರಪ್ಪ
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅಜ್ಜ-ಅಜ್ಜಿಯರ ದಿನಾಚರಣೆ: ಹಿರಿಯ ಜೀವಗಳೊಂದಿಗೆ ಮಗುವಾದ ಸಂಭ್ರಮ!ಆತ್ರೇಯ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳ ಅತಂತ್ರ ಭವಿಷ್ಯ: ಸರ್ಕಾರದ ತುರ್ತು ಮಧ್ಯಪ್ರವೇಶಕ್ಕೆ ಬಿ.ಎಸ್.ಚಂದ್ರಶೇಖರ್ ಆಗ್ರಹಸತೀಶ್ ಜಾರಕಿಹೊಳಿ ಮೇಲಿನ ಇ.ಡಿ ದಾಳಿ ರಾಜಕೀಯ ಪ್ರೇರಿತ: ಕಾಂಗ್ರೆಸ್ ಮುಖಂಡರ ತೀವ್ರ ಆಕ್ರೋಶತನ್ನ ಪತ್ನಿಯನ್ನು ಆಕೆಯ ಇಚ್ಛೆಯಂತೆ ಪ್ರಿಯಕರನೊಡನೆ ಮದುವೆ ಮಾಡಿಸಿದ ವಿಶಾಲ ಹೃದಯದ ಪತಿ!ಪತ್ರಕರ್ತ ಜಿ. ಮಹಂತೇಶ್‌ಗೆ ಜೀವ ಬೆದರಿಕೆ ಪ್ರಕರಣ: ವಿಪಕ್ಷಗಳ ತೀವ್ರ ಆಕ್ರೋಶದ ಬೆನ್ನಲ್ಲೇ ಎಫ್‌ಐಆರ್ ದಾಖಲಿಸಿದ ನಂದಿನಿ ಲೇಔಟ್ ಪೊಲೀಸರುಜೈಲಿನಲ್ಲೂ ಮುಂದುವರಿದ ಪ್ರಜ್ವಲ್ ರೇವಣ್ಣ ವಿಕೃತಿ: ಸೆಲ್‌ನಲ್ಲೇ ಪೆನ್ ಡ್ರೈವ್ ಬಳಸಿ ಅಶ್ಲೀಲ ವೀಡಿಯೋ ವೀಕ್ಷಣೆ!ಮಸೀದಿ ಮುಂದೆ ಗಣೇಶ ಮೆರವಣಿಗೆ ನಿಷೇಧ: ವಿವಾದಾತ್ಮಕ ಹೇಳಿಕೆಗೆ ತೀವ್ರ ಆಕ್ರೋಶಭಾರತ-ಚೀನಾ ಸಂಬಂಧಕ್ಕೆ ಹೊಸ ಚೈತನ್ಯ: ಭಾರತ ಭೇಟಿಗಾಗಿ ದೆಹಲಿಗೆ ಆಗಮಿಸಿದ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ಇಂಟರ್ನೆಟ್ ಇಲ್ಲದೆಯೂ ಯುಪಿಐ ಪಾವತಿ: ‘ಟ್ಯಾಪ್‌ಆ್ಯಂಡ್‌ಪೇ’ ಹಾಗೂ ‘ಮೈಯುಪಿಐ’ ಹೊಸ ಫೀಚರ್‌ಪರಿಚಯಿಸಿದ ಆರ್‌ಬಿಐನಮಗೆ ಹಾಕಿರುವ ಬೇಡಿ ಬಿಚ್ಚಿದರೆ ಕರ್ನಾಟಕವನ್ನೇ ಸ್ವಚ್ಛ ಮಾಡುತ್ತೇವೆ: ನ್ಯಾ. ಬಿ. ವೀರಪ್ಪ