Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪೊಲೀಸರ ಮಿಂಚಿನ ಕಾರ್ಯಾಚರಣೆ ವಿದೇಶಿ ಪ್ರಜೆಗಳಿಂದ 4.5 ಕೋಟಿ ಮೌಲ್ಯದ ಮಾದಕ ದ್ರವ್ಯ ವಶ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು :
ಖಚಿತ ಮಾಹಿತಿ ಮೇರೆಗೆ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ಮೂವರು ವಿದೇಶಿ ಪ್ರಜೆಗಳನ್ನು ಬಂಧಿಸುವ ಮೂಲಕ ಡ್ರಗ್ಸ್ ಜಾಲವನ್ನು ಪತ್ತೆ ಮಾಡಿ ಬಂಧಿತ ಆರೋಪಿಗಳಿಂದ
4.5 ಕೋಟಿ ಮೌಲ್ಯದ ಮಾದಕ ದ್ರವ್ಯಗಳನ್ನು ರಾಜಾನುಕುಂಟೆ ಪೊಲೀಸರು ಜಪ್ತಿ ಮಾಡಿದ್ದಾರೆ.

ಯಲಹಂಕ ತಾಲೂಕು ರಾಜಾನುಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯ ಅದ್ದಿಗಾನಹಳ್ಳಿಯ ಬಾಡಿಗೆ ಮನೆಯೊಂದರಲ್ಲಿ ವಿದೇಶಿ ಪ್ರಜೆಗಳು ವಾಸವಾಗಿದ್ದು, ಅವರ ಚಲನವಲನದ ಬಗ್ಗೆ ಪೊಲೀಸರಿಗೆ ಸಂಶಯ ಇತ್ತು. ಹೀಗಾಗಿ ಖಚಿತ ಮಾಹಿತಿ ಪಡೆದ ಮೇರೆಗೆ ರಾಜಾನುಕುಂಟೆ ಪೊಲೀಸರು ಅವರ ಮನೆ ಮೇಲೆ ದಾಳಿ ಮೂವರು ವಿದೇಶಿ ಪ್ರಜೆಗಳು ವಾಸವಾಗಿರುವುದು ಪತ್ತೆಯಾಗಿದೆ. ಮಾದಕ ದ್ರವ್ಯವೂ ಸಿಕ್ಕಿದೆ. ಹೀಗಾಗಿ ಅವರನ್ನು ಬಂಧಿಸಿ, NDPS ಕಾಯ್ದೆಯಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.


ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ. ಕೆ. ಬಾಬಾ ಈ ಕುರಿತು ಮಾತನಾಡಿ, ನೈಜೀರಿಯಾ ಮೂಲದ ಮೂವರು ವಿದೇಶಿ ಪ್ರಜೆಗಳನ್ನು ಬಂಧಿಸಲಾಗಿದೆ. ಆರೋಪಿಗಳು ಮೆಡಿಕಲ್ ಕಾರಣಕ್ಕಾಗಿ ದೆಹಲಿಗೆ ಬಂದಿದ್ದರು. ಅಲ್ಲಿಂದ ಬೆಂಗಳೂರಿನ ಅದಿಗಾನಹಳ್ಳಿಗೆ ಆಗಮಿಸಿ ಬಾಡಿಗೆ ಮನೆ ಪಡೆದು ವಾಸವಾಗಿದ್ದರು ಎಂದು ಮಾಹಿತಿ ನೀಡಿದ್ದಾರೆ.

ಆರೋಪಿಗಳಿಂದ ಅಕ್ರಮವಾಗಿ ಶೇಖರಿಸಿ ಇಟ್ಟಿದ್ದ ನಿಷೇಧಿತ ಮಾದಕ ವಸ್ತುಗಳಾದ MDMA Crystal 2 ಕೆಜಿ 820 ಗ್ರಾಂ, 07 ಮೊಬೈಲ್ ಫೋನ್​ಗಳು, 02 ತೂಕದ ಯಂತ್ರ ಮತ್ತು 2,06,870 ಲಕ್ಷ ರೂಪಾಯಿ ನಗದು ಜಪ್ತಿ ಮಾಡಲಾಗಿದೆ. ಒಟ್ಟು ಮೌಲ್ಯ 04.50 ಕೋಟಿ ಮೌಲ್ಯದ ಮಾದಕ ದ್ರವ್ಯ ಜಪ್ತಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಯಾರಿಗೂ ಅನುಮಾನ ಬಾರದಂತೆ ರೆಡಿಮೆಡ್ ಬಟ್ಟೆಗಳ ಪ್ಯಾಕ್​​ಗಳಲ್ಲಿ ಆರೋಪಿಗಳು ಡ್ರಗ್ ತುಂಬಿ ಮಾರಾಟ ಮಾಡ್ತಿದ್ದರು. ಶರ್ಟ್, ಪ್ಯಾಂಟ್​​ಗಳಲ್ಲಿ ಬಳಸುವ ಕಾರ್ಡ್ ಬೋರ್ಡ್​ಗಳಲ್ಲಿ ಮಾದಕ ವಸ್ತುಗಳನ್ನ ಇಟ್ಟು ಮಾರಾಟ ಮಾಡುತ್ತಿದ್ದರು.

ಅಕ್ಕಪಕ್ಕದವರಿಗೆ ಅನುಮಾನ ಬಾರದೆಂಬ ಕಾರಣಕ್ಕೆ ಸೆಕ್ಯೂರಿಟ್ ಕೆಲಸದ ಬಟ್ಟೆಗಳನ್ನ ಹಾಕಿಕೊಂಡು ಮನೆಗೆ ಬಂದು ಹೋಗುತ್ತಿದ್ದರು. ಆರೋಪಿಗಳ ವಿಚಾರಣೆ ಮುಂದುವರೆಸಲಾಗಿದ್ದು, ಇವರಿಂದ ಮತ್ತಷ್ಟು ಮಾಹಿತಿಗಳನ್ನ ಕಲೆಹಾಕಿ ಡ್ರಗ್ಸ್ ಜಾಲವನ್ನ ಭೇದಿಸುವುದಾಗಿ ಎಸ್ಪಿ ಅವರು ತಿಳಿಸಿದ್ದಾರೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ