Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪೊಂಗಲ್ ಹಬ್ಬಕ್ಕೆ ವಿಶೇಷ ಎಕ್ಸ್ ಪ್ರೆಸ್ ರೈಲುಗಳ ಸಂಚಾರ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಪೊಂಗಲ್ ಹಬ್ಬದ ಪ್ರಯುಕ್ತ ನೈಋತ್ಯ ರೈಲ್ವೆಯಿಂದ ವಿಶೇಷ ಎಕ್ಸ್ ಪ್ರೆಸ್ ರೈಲುಗಳ ಸಂಚಾರ


ಪೊಂಗಲ್ ಹಬ್ಬದ ಸಂದರ್ಭದಲ್ಲಿ ಹೆಚ್ಚಿನ ಪ್ರಯಾಣಿಕರ ದಟ್ಟಣೆಯನ್ನು ನಿರ್ವಹಿಸಲು ನೈಋತ್ಯ ರೈಲ್ವೆ ಕೆಎಸ್ಆರ್ ಬೆಂಗಳೂರು-ಡಾ. ಎಂಜಿಆರ್ ಚೆನ್ನೈ ಸೆಂಟ್ರಲ್,   ಎಸ್ಎಂವಿಟಿ ಬೆಂಗಳೂರು-ಟುಟಿಕೋರಿನ್-ಮೈಸೂರು ನಿಲ್ದಾಣಗಳ ನಡುವೆ ವಿಶೇಷ ಎಕ್ಸ್ ಪ್ರೆಸ್ ರೈಲುಗಳನ್ನು ಓಡಿಸಲಿದೆ. ವಿವರಗಳು ಈ ಕೆಳಗಿನಂತಿವೆ:

ರೈಲು ಸಂಖ್ಯೆ 07319/07320 ಕೆಎಸ್ಆರ್ ಬೆಂಗಳೂರು-ಡಾ.ಎಂಜಿಆರ್ ಚೆನ್ನೈ ಸೆಂಟ್ರಲ್-ಕೆಎಸ್ಆರ್ ಬೆಂಗಳೂರು ವಿಶೇಷ  ಎಕ್ಸ್ ಪ್ರೆಸ್ ರೈಲು (1 ಟ್ರಿಪ್):

ರೈಲು ಸಂಖ್ಯೆ 07319 ಕೆಎಸ್ಆರ್ ಬೆಂಗಳೂರು-ಡಾ.ಎಂಜಿಆರ್ ಚೆನ್ನೈ ಸೆಂಟ್ರಲ್ ವಿಶೇಷ ಎಕ್ಸ್ ಪ್ರೆಸ್ ರೈಲು ಜನವರಿ 10, 2025 ರಂದು ಬೆಳಿಗ್ಗೆ 08:05 ಕ್ಕೆ ಕೆಎಸ್ಆರ್ ಬೆಂಗಳೂರಿನಿಂದ ಹೊರಟು, ಅದೇ ದಿನ ಮಧ್ಯಾಹ್ನ 02:40 ಕ್ಕೆ ಡಾ.ಎಂಜಿಆರ್ ಚೆನ್ನೈ ಸೆಂಟ್ರಲ್ ತಲುಪಲಿದೆ.

ಪುನಃ ಇದೆ ರೈಲು (07320) ಜನವರಿ 10, 2025 ರಂದು ಡಾ.ಎಂಜಿಆರ್ ಚೆನ್ನೈ ಸೆಂಟ್ರಲ್ ನಿಲ್ದಾಣದಿಂದ ಮಧ್ಯಾಹ್ನ 03:40 ಕ್ಕೆ ಹೊರಟು, ಅದೇ ದಿನ ರಾತ್ರಿ 10:50 ಕ್ಕೆ ಕೆಎಸ್ಆರ್ ಬೆಂಗಳೂರು ನಿಲ್ದಾಣಕ್ಕೆ ಆಗಮಿಸಲಿದೆ.

ಈ ರೈಲು ಎರಡೂ ಮಾರ್ಗಗಳಲ್ಲಿ ಯಶವಂತಪುರ, ಕೃಷ್ಣರಾಜಪುರಂ, ಬಂಗಾರಪೇಟೆ, ಜೋಲಾರ್ ಪೆಟ್ಟೈ, ಅಂಬೂರು, ಗುಡಿಯಾಟ್ಟಂ, ಕಟಪಾಡಿ, ಶೋಲಿಂಗೂರ್, ಅರಕ್ಕೋಣಂ, ತಿರುವಳ್ಳೂರು ಮತ್ತು ಪೆರಂಬೂರಿನಲ್ಲಿ  ನಿಲ್ಲಲಿದೆ.

ಈ ರೈಲು 1 ಎಸಿ- ತ್ರಿ ಟೈರ್, 11 ಸ್ಲೀಪರ್ ಕ್ಲಾಸ್, 2 ಸಾಮಾನ್ಯ ದ್ವಿತೀಯ ದರ್ಜೆ ಬೋಗಿಗಳು ಮತ್ತು 2 ಎಸ್ಎಲ್ಆರ್ ಡಿ ಸೇರಿದಂತೆ 17 ಬೋಗಿಗಳನ್ನು ಒಳಗೊಂಡಿರುತ್ತದೆ.

ರೈಲು ಸಂಖ್ಯೆ 06569/06570 ಎಸ್ಎಂವಿಟಿ ಬೆಂಗಳೂರು-ಟುಟಿಕೋರಿನ್-ಮೈಸೂರು ವಿಶೇಷ ಎಕ್ಸ್ ಪ್ರೆಸ್ ರೈಲು (1 ಟ್ರಿಪ್):

ರೈಲು ಸಂಖ್ಯೆ 06569 ಎಸ್ಎಂವಿಟಿ ಬೆಂಗಳೂರು-ಟುಟಿಕೋರಿನ್ ವಿಶೇಷ ಎಕ್ಸ್ ಪ್ರೆಸ್ ರೈಲು ಜನವರಿ 10, 2025 ರಂದು ರಾತ್ರಿ 10:00 ಗಂಟೆಗೆ ಎಸ್ಎಂವಿಟಿ ಬೆಂಗಳೂರಿನಿಂದ ಹೊರಟು, ಜನವರಿ 11, 2025 ರಂದು ಬೆಳಿಗ್ಗೆ 11:00 ಗಂಟೆಗೆ ಟ್ಯುಟಿಕೋರಿನ್ ತಲುಪಲಿದೆ. ಈ ರೈಲು ಕೃಷ್ಣರಾಜಪುರಂ, ಬಂಗಾರಪೇಟೆ, ಸೇಲಂ, ನಾಮಕ್ಕಲ್, ಕರೂರ್, ದಿಂಡಿಗಲ್, ಮಧುರೈ, ವಿರುಡುನಗರ, ಸಾತೂರ್ ಮತ್ತು ಕೋವಿಲ್ಪಟ್ಟಿಯಲ್ಲಿ ನಿಲ್ಲಲಿದೆ.

ರೈಲು ಸಂಖ್ಯೆ 06570 ಜನವರಿ 11, 2025 ರಂದು ಮಧ್ಯಾಹ್ನ 01:00 ಕ್ಕೆ ಟುಟಿಕೋರಿನ್ ನಿಂದ ಹೊರಟು, ಜನವರಿ 12, 2025 ರಂದು ಬೆಳಿಗ್ಗೆ 06:30 ಕ್ಕೆ ಮೈಸೂರಿಗೆ ತಲುಪಲಿದೆ. ಈ ರೈಲು ಕೋವಿಲ್ಪಟ್ಟಿ, ಸಾತೂರ್, ವಿರುಡುನಗರ, ಮಧುರೈ, ದಿಂಡಿಗಲ್, ಕರೂರ್, ನಾಮಕ್ಕಲ್, ಸೇಲಂ, ಬಂಗಾರಪೇಟೆ, ಕೃಷ್ಣರಾಜಪುರಂ, ಕೆಎಸ್ಆರ್ ಬೆಂಗಳೂರು ಮತ್ತು ಮಂಡ್ಯ ನಿಲ್ದಾಣಗಳಲ್ಲಿ ನಿಲ್ಲಲಿದೆ.

ಈ ರೈಲು 13 ಎಸಿ ತ್ರಿ ಟೈರ್, 3 ಸ್ಲೀಪರ್ ಕ್ಲಾಸ್, 2 ಸಾಮಾನ್ಯ ದ್ವಿತೀಯ ದರ್ಜೆ ಬೋಗಿಗಳು ಮತ್ತು 2 ಲಗೇಜ್ / ಜನರೇಟರ್ / ಬ್ರೇಕ್ ವ್ಯಾನ್ಗಳು ಸೇರಿದಂತೆ 19 ಬೋಗಿಗಳನ್ನು ಒಳಗೊಂಡಿರುತ್ತದೆ.

 ಈ ರೈಲುಗಳ ಪ್ರತಿ ನಿಲ್ದಾಣದ ಆಗಮನ, ನಿರ್ಗಮನ ಸಮಯಕ್ಕಾಗಿ, ಪ್ರಯಾಣಿಕರು ಭಾರತೀಯ ರೈಲ್ವೆ ಜಾಲತಾಣ www.enquiry.indianrail.gov.in ಗೆ ಭೇಟಿ ನೀಡಿ ಅಥವಾ ಸಹಾಯವಾಣಿ 139ಕ್ಕೆ ಕರೆ ಮಾಡುವ ಮೂಲಕ ಮಾಹಿತಿ ಪಡೆದುಕೊಳ್ಳಬಹುದು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ