Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಾನಸಿಕ ಒತ್ತಡ ನಿವಾರಣೆಯಿಂದ ಧನಾತ್ಮಕ ಚಿಂತನೆ

Advertisement
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ :
ಸದೃಢ ಮಾನಸಿಕ ಆರೋಗ್ಯವನ್ನು ಹೊಂದುವುದರಿಂದ ಬದುಕಿನಲ್ಲಿ ಉನ್ನತ ಸಾಧನೆಗಳನ್ನು ಮಾಡಬಹುದು. ಒತ್ತಡಗಳಿಂದ ಮುಕ್ತವಾದಾಗ ಉತ್ತಮ ಚಿಂತನೆಗಳಿಗೆ ಅವಕಾಶವಿರುತ್ತದೆ ಎಂದು ಲಯನ್ಸ್‌ ಜಿಲ್ಲೆ
317ಎಫ್‌ನ ಮಾನಸಿಕ ಆರೋಗ್ಯ ಸಂಯೋಜಕರಾದ ಅನುಪಮಾ ಹೇಳಿದರು.

ಇಲ್ಲಿನ ಲಯನ್ಸ್‌ ಕ್ಲಬ್‌ ಆಫ್‌ ದೊಡ್ಡಬಳ್ಳಾಪುರ ಆರ್.ಎಲ್.ಜಾಲಪ್ಪ ಇನ್ಸ್‌ಟಿಟ್ಯೂಷನ್ಸ್‌ನ ನೇತೃತ್ವದಲ್ಲಿ ಶ್ರೀ ದೇವರಾಜ ಅರಸ್‌ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯ ಮತ್ತು ಜಾಲಪ್ಪ ಕಾನೂನು ಮಹಾವಿದ್ಯಾಲಯದಲ್ಲಿ ಶನಿವಾರ ಹಮ್ಮಿಕೊಳ್ಳಲಾಗಿದ್ದ ಮಾನಸಿಕ ಆರೋಗ್ಯ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮಾನಸಿಕ ಆರೋಗ್ಯವು ವ್ಯಕ್ತಿಯ ಆಲೋಚನೆಗಳು, ಭಾವನೆಗಳು ಮತ್ತು ನಡವಳಿಕೆಗಳ ಮೇಲೆ ಪರಿಣಾಮ ಬೀರುವ ಅರಿವಿನ, ನಡವಳಿಕೆಯ ಮತ್ತು ಭಾವನಾತ್ಮಕ ಯೋಗಕ್ಷೇಮದ ಸ್ಥಿತಿಯಾಗಿದೆ. ಇದು ನಿಮ್ಮ ಜೀವನದ ಪ್ರಮುಖ ಭಾಗವಾಗಿದೆ ಮತ್ತು ನಿಮ್ಮ ದೈನಂದಿನ ಜೀವನ, ಸಂಬಂಧಗಳು ಮತ್ತು ಒತ್ತಡವನ್ನು ನಿಭಾಯಿಸುವ ಸಾಮರ್ಥ್ಯದ ಮೇಲೆ ಪರಿಣಾಮ ಬೀರುತ್ತದೆ. ಮಾನಸಿಕ ಅಸ್ವಸ್ಥತೆಯ ಲಕ್ಷಣಗಳು ಕಂಡುಬಂದರೆ, ವೃತ್ತಿಪರರ ಸಹಾಯ ಪಡೆಯುವುದು ಮುಖ್ಯ ಎಂದು ತಿಳಿಸಿದರು.

ಮಾನಸಿಕ ಆರೋಗ್ಯ ಕಾಳಜಿ ವಹಿಸುವುದರಿಂದ ವ್ಯಕ್ತಿಗತ ಉತ್ಪಾದಕತೆ ಮತ್ತು ಪರಿಣಾಮಕಾರಿತ್ವ ಹೆಚ್ಚುವುದರ ಜೊತೆಗೆ ಸದೃಢ ಸಂಬಂಧಗಳನ್ನು ಉತ್ತೇಜಿಸುತ್ತದೆ. ಜೀವನದಲ್ಲಿನ ಬದಲಾವಣೆಗಳಿಗೆ ಹೊಂದಿಕೊಳ್ಳಲು ಮತ್ತು ಪ್ರತಿಕೂಲತೆಯನ್ನು ಎದುರಿಸಲು ಸಹಾಯವಾಗುತ್ತದೆ ಎಂದು ವಿವರಿಸಿದರು.

ಅಧ್ಯಕ್ಷತೆ ವಹಿಸಿದ್ದ ಕ್ಲಬ್‌ನ ಅಧ್ಯಕ್ಷ ಪ್ರೊ.ಕೆ.ಆರ್.ರವಿಕಿರಣ್ ಮಾತನಾಡಿ, ಅಂತಾರಾಷ್ಟ್ರೀಯ ಲಯನ್ಸ್‌ ಸಂಸ್ಥೆಯ ವತಿಯಿಂದ ಇದೇ ಅಕ್ಟೋಬರ್‌ 4 ರಿಂದ 12ರವರೆಗೆ ಮೆಂಟಲ್‌ ಹೆಲ್ತ್‌ ಅಂಡ್‌ ವೆಲ್‌ ಬೀಯಿಂಗ್‌ ಪರಿಕಲ್ಪನೆಯ ಅಡಿಯಲ್ಲಿ ವಿಶ್ವಾದ್ಯಂತ ಮಾನಸಿಕ ಆರೋಗ್ಯ ಜಾಗೃತಿ ನಡೆಯುತ್ತಿದೆ. ಅದರ ಭಾಗವಾಗಿ ನಮ್ಮ ಕ್ಲಬ್‌ ವತಿಯಿಂದ ನೂರಾರು ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ನಿರಂತರ ಕಾರ್ಯಕ್ರಮಗಳನ್ನು ನಡೆಸಲು ಯೋಜನೆ ರೂಪಿಸಲಾಗಿದೆ ಎಂದರು.

ಶ್ರೀ ದೇವರಾಜ ಅರಸ್‌ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ಗೌರಪ್ಪ, ಜಾಲಪ್ಪ ಕಾನೂನು ಕಾಲೇಜು ಪ್ರಾಂಶುಪಾಲ ಹನುಮಂತಪ್ಪ ಜಿ.ಟಿ, ಸಂಜೆ ಕಾಲೇಜು ಪ್ರಾಂಶುಪಾಲ ಡಾ.ಚಿಕ್ಕಣ್ಣ, ಲಯನ್ಸ್ ಕ್ಲಬ್‌ ಆಡಳಿತಾಧಿಕಾರಿ ಡಾ.ಶ್ರೀನಿವಾಸರೆಡ್ಡಿ, ಕಾರ್ಯದರ್ಶಿ ಸುಮ ಎ.ಎಸ್, ಉಪಾಧ್ಯಕ್ಷ ಬಾಬು ಸಾಬಿ, ಲಯನ್ ಲತಾ, ಪ್ರಕಾಶ್‌, ಎಲ್.ಎನ್.ನಾಗರಾಜ್ ಮತ್ತಿತರರು ಉಪಸ್ಥಿತರಿದ್ದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ