Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮೇ 19ಕ್ಕೆ 'ಪ್ರಗತಿಯತ್ತ ಕರ್ನಾಟಕ' ಸಮಾವೇಶ: ಡಿಕೆಶಿಗೆ ಆಹ್ವಾನ ನೀಡಿದ ಪರಮೇಶ್ವರ್

Advertisement
Advertisement

ಚಂದ್ರವಳ್ಳಿ ನ್ಯೂಸ್, ​ಬೆಂಗಳೂರು:
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಮೂರು ವರ್ಷಗಳು ಯಶಸ್ವಿಯಾಗಿ ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಮೇ 19ರಂದು ತುಮಕೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ಬೃಹತ್ ಸಮಾವೇಶಕ್ಕೆ ಸಿದ್ಧತೆಗಳು ಚುರುಕಾಗಿವೆ.

​'ಪ್ರಗತಿಯತ್ತ ಕರ್ನಾಟಕ: ಸಾರ್ಥಕ ಸೇವೆಯ ಸಮರ್ಪಣೆ' ಹೆಸರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಮಾವೇಶಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಅಧಿಕೃತ ಆಹ್ವಾನ ನೀಡಲಾಗಿದೆ.

​ಶನಿವಾರ ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿ.ಕೆ. ಶಿವಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿದ ಗೃಹ ಸಚಿವ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ಅವರು, ಸಮಾವೇಶದ ಆಹ್ವಾನ ಪತ್ರಿಕೆಯನ್ನು ಹಸ್ತಾಂತರಿಸಿ ಕಾರ್ಯಕ್ರಮಕ್ಕೆ ಆತ್ಮೀಯವಾಗಿ ಆಹ್ವಾನಿಸಿದರು.​​

​ಈ ಸಂದರ್ಭದಲ್ಲಿ ಮಾತನಾಡಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ಸರ್ಕಾರ ಮೂರು ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ತುಮಕೂರಿನಲ್ಲಿ ನಡೆಯಲಿರುವ ಈ ಸಮಾವೇಶವು ಸರ್ಕಾರದ ಜನಪರ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸುವಲ್ಲಿ ಪ್ರಮುಖ ಮೈಲಿಗಲ್ಲಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಕಾರ್ಯಕ್ರಮದ ಯಶಸ್ಸಿಗೆ ಎಲ್ಲ ನಾಯಕರು ಒಟ್ಟಾಗಿ ಶ್ರಮಿಸಲಿದ್ದಾರೆ ಎಂದು ತಿಳಿಸಿದರು.

 

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೊದಲ ದಿನವೇ 32,797 ಗಣತಿ ನಮೂನೆಗಳ ವಿತರಣೆ: ಜಿಲ್ಲಾ ಚುನಾವಣಾಧಿಕಾರಿ ಟಿ.ವೆಂಕಟೇಶ್ವಿಶಿಷ್ಟ ಗೋಡೆ ಪತ್ರಿಕೆ ಅನಾವರಣವೈದ್ಯರಿಗೆ ನಮನ ​ಚಾಮರಾಜನಗರ ವಿಶ್ವವಿದ್ಯಾಲಯದ  ಕುಲಪತಿ ಪ್ರೊ. ಎಂ. ಆರ್. ಗಂಗಾಧರ ಅವರು ಪ್ರದರ್ಶನ ಉದ್ಘಾಟಿಸಿದರು.ಬೆಂಗಳೂರು ನಿಧಿ ಹಂಚಿಕೆಯಲ್ಲಿ ತಾರತಮ್ಯ: ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಆರ್‌ಅಶೋಕ್ ತೀವ್ರ ವಾಗ್ದಾಳಿ!ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಅಪಾರದರ್ಶಕತೆ: ಚುನಾವಣಾ ಆಯೋಗಕ್ಕೆ ಕರ್ನಾಟಕ ಸಚಿವ ಸಂಪುಟದ ಬಿಗಿ ಷರತ್ತುಗಳು!ಖ್ಯಾತ ಹಿರಿಯ ಚಿತ್ರ ಕಲಾವಿದ ಕೆ.ಟಿ ಶಿವಪ್ರಸಾದ್ ನಿಧನ!ಧರ್ಮಸ್ಥಳ ಮಂಜುನಾಥನ ಸನ್ನಿಧಿಯಲ್ಲಿ ಬೇಲೂರು ಶಾಸಕ ಆಣೆ ಪ್ರಮಾಣ!ಜಿಲ್ಲಾಸ್ಪತ್ರೆಯಲ್ಲಿ ಭೀಕರ ಸಿಲಿಂಡರ್ ಸ್ಫೋಟ: ಕೋಟ್ಯಂತರ ಮೌಲ್ಯದ ಸಲಕರಣೆ ಭಸ್ಮ, ಕೂದಲೆಳೆ ಅಂತರದಲ್ಲಿ ತಪ್ಪಿದ ಪ್ರಾಣಾಪಾಯ!ವಿಚಾರಣೆ ನೆಪದಲ್ಲಿ ಅಪ್ರಾಪ್ತರಿಗೆ ಲೈಂಗಿಕ ಕಿರುಕುಳ: ಪಿಎಸ್‌ಐ ಪೋಕ್ಸೋ ಕಾಯ್ದೆಯಡಿ ಬಂಧನ!