ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಸಾರ್ವಜನಿಕರ ಕುಂದುಕೊರತೆಗಳನ್ನು ಸ್ಥಳದಲ್ಲೇ ಪರಿಹರಿಸುವ ಉದ್ದೇಶದಿಂದ ರಾಜ್ಯಾದ್ಯಂತ ಪ್ರತಿ ಜಿಲ್ಲೆಗಳಲ್ಲಿ 'ಪ್ರಜಾಸೇವಾ ಆಂದೋಲನ' ಸಭೆಗಳನ್ನು ನಡೆಸಲು ಕರ್ನಾಟಕ ಸರ್ಕಾರ ಸೂಚನೆ ನೀಡಿದೆ. ಅದರಂತೆ ಹಿರಿಯೂರು ತಾಲೂಕು ಮಟ್ಟದ 'ಪ್ರಜಾಸೇವಾ ಆಂದೋಲನ' ಕಾರ್ಯಕ್ರಮವನ್ನು ಬರುವ ಸೆಪ್ಟೆಂಬರ್ 05, 2026 ರಂದು ಬೆಳಿಗ್ಗೆ 11:00 ಗಂಟೆಗೆ ಹಿರಿಯೂರಿನ ನೆಹರೂ ಮೈದಾನದ (ಕಡ್ಲೆಕಾಯಿ ಮಂಡಿ) ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ತಹಶೀಲ್ದಾರ್ ಎಂ. ಸಿದ್ದೇಶ ತಿಳಿಸಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆ: ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಟಿ. ರಘುಮೂರ್ತಿ ಅವರ ಅಧ್ಯಕ್ಷತೆಯಲ್ಲಿ ಹಾಗೂ ಸ್ಥಳೀಯ ಜನಪ್ರತಿನಿಧಿಗಳ ಸಮ್ಮುಖದಲ್ಲಿ ಸರ್ಕಾರದ ಮಾರ್ಗಸೂಚಿಗಳಂತೆ ಈ ಪ್ರಜಾಸೇವಾ ಆಂದೋಲನ ನಡೆಯಲಿದೆ.
ಸರ್ಕಾರದ ಪ್ರಮುಖ ಮಾರ್ಗದರ್ಶನ: ಮುಖ್ಯಮಂತ್ರಿಗಳ ನಿರ್ದೇಶನದಂತೆ, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸ್ಥಳೀಯ ಶಾಸಕರ ನೇತೃತ್ವದಲ್ಲಿ ಪ್ರತಿ ತಿಂಗಳ 2ನೇ ಮತ್ತು 4ನೇ ಶನಿವಾರವೂ ಸೇರಿದಂತೆ ಎಲ್ಲಾ ಶನಿವಾರಗಳಂದು ತಾಲೂಕು ಮತ್ತು ಹೋಬಳಿ ಮಟ್ಟದಲ್ಲಿ ಪ್ರಜಾಸೇವಾ ಆಂದೋಲನ ಸಭೆಗಳನ್ನು ಕಡ್ಡಾಯವಾಗಿ ಆಯೋಜಿಸಲು ಸರ್ಕಾರ ಸೂಚಿಸಿದೆ.
ಸಾರ್ವಜನಿಕರು ಹಾಗೂ ತಾಲೂಕಿನ ಸಾರ್ವಜನಿಕರು ಈ ಪ್ರಜಾಸೇವಾ ಆಂದೋಲನದಲ್ಲಿ ಭಾಗವಹಿಸಿ ತಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಂತೆ ಹಾಗೂ ಈ ಮಾಹಿತಿಯನ್ನು ಮಾಧ್ಯಮಗಳು ವ್ಯಾಪಕವಾಗಿ ಪ್ರಚಾರ ಪಡಿಸುವಂತೆ ತಹಶೀಲ್ದಾರರು ಪತ್ರಿಕಾ ಪ್ರಕಟಣೆಯ ಮೂಲಕ ಕೋರಿದ್ದಾರೆ.




