ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಹಿರಿಯೂರು ನಗರದ ನೆಹರು ಮೈದಾನದಲ್ಲಿ ಸೆಪ್ಟೆಂಬರ್ 05ರಂದು ಬೆಳಿಗ್ಗೆ 11ಕ್ಕೆ ಪ್ರಜಾಸೇವಾ ಆಂದೋಲನ ಸಭೆ ಆಯೋಜಿಸಲಾಗಿದೆ.
ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಟಿ.ರಘುಮೂರ್ತಿ ಅವರ ಅಧ್ಯಕ್ಷತೆಯಲ್ಲಿ ಹಿರಿಯೂರು ಕೇಂದ್ರ ಸ್ಥಾನದಲ್ಲಿ ಪ್ರಜಾಸೇವಾ ಆಂದೋಲನ ಸಭೆ ನಡೆಯಲಿದೆ.
ಸಾರ್ವಜನಿಕರು, ರೈತರು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ತಿಳಿಸಿದ್ದಾರೆ.




