Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರಸನ್ನ ಲಕ್ಷ್ಮಿ ವೆಂಕಟ ರಮಣ ದೇವಾಲಯದಲ್ಲಿ ವೈಕುಂಠ ಏಕಾದಶಿ ಪರ್ವ ದಿನ

Advertisement
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ವೈಕುಂಠ ಏಕಾದಶಿ ಪರ್ವದಿನವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಗ್ರಾಮದ ಇತಿಹಾಸ ಪ್ರಸಿದ್ಧ ಶ್ರೀ ಪ್ರಸನ್ನ ಲಕ್ಷ್ಮೀ ವೆಂಕಟರಮಣ ಸ್ವಾಮಿ ದೇವಸ್ಥಾನದಲ್ಲಿ ಮಂಗಳವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು. ಬೆಳಗಿನ ಜಾವದಿಂದಲೇ ದೇವಾಲಯದಲ್ಲಿ ವಿಶೇಷ ಅಲಂಕಾರ, ಅಭಿಷೇಕ, ಮಹಾಪೂಜೆ ಹಾಗೂ ವೈಕುಂಠ ದ್ವಾರ ದರ್ಶನ ಶ್ರದ್ಧಾಭಕ್ತಿಯಿಂದ ನೆರವೇರಿತು.

 ವೈಕುಂಠ ದ್ವಾರ ದರ್ಶನಕ್ಕಾಗಿ ತೂಬಗೆರೆ, ಸುತ್ತಮುತ್ತಲಿನ ಗ್ರಾಮಗಳು ಹಾಗೂ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಸಾವಿರಾರು ಭಕ್ತರು ಆಗಮಿಸಿದ್ದರು. ದೇವಾಲಯ ಮತ್ತು ಗ್ರಾಮವು ಜಗಮಗಿಸುವ ವಿದ್ಯುತ್ ದೀಪಾಲಂಕಾರದಿಂದ ಹಬ್ಬದ ವಾತಾವರಣವನ್ನು ಸೃಷ್ಟಿಸಿತು. ಭಕ್ತರಿಗೆ ಸುಗಮ ದರ್ಶನ ಒದಗಿಸಲು ಸರತಿ ಸಾಲು ವ್ಯವಸ್ಥೆ, ಕುಡಿಯುವ ನೀರು, ನೆರಳು ಹಾಗೂ ಇತರೆ ಮೂಲಭೂತ ಸೌಲಭ್ಯಗಳನ್ನು ದೇವಸ್ಥಾನ ಆಡಳಿತ ಮಂಡಳಿ ಸಮರ್ಪಕವಾಗಿ ಒದಗಿಸಿತ್ತು.

 ವೈಕುಂಠ ಏಕಾದಶಿ ದಿನ ದೇವಾಲಯದಲ್ಲಿ ನಿರಂತರ ಅನ್ನಪ್ರಸಾದ ವಿನಿಯೋಗ ನಡೆಯಿತು. ಈ ಸಂದರ್ಭದಲ್ಲಿ ಶ್ರೀ ಪ್ರಸನ್ನ ಲಕ್ಷ್ಮೀ ವೆಂಕಟರಮಣ ಸ್ವಾಮಿಗೆ ವಿಶೇಷವಾಗಿ ಅರ್ಪಿಸಲಾದ ತಿರುಪತಿ ಲಡ್ಡು ಪ್ರಸಾದವನ್ನು ಭಕ್ತರಿಗೆ ವಿತರಿಸಲಾಯಿತು. ಶಾಂತಿ, ಶಿಸ್ತು ಮತ್ತು ಭಕ್ತಿಭಾವದಿಂದ ಕಾರ್ಯಕ್ರಮಗಳು ಸಾಂಗವಾಗಿ ನೆರವೇರಿದವು.

 ಇತಿಹಾಸ ಪ್ರಸಿದ್ಧ ಪ್ರಸನ್ನ ಲಕ್ಷ್ಮೀ ವೆಂಕಟರಮಣ ಸ್ವಾಮಿ ದೇವಸ್ಥಾನವು ಸುಮಾರು ಆರು ಶತಮಾನಗಳ ಸುದೀರ್ಘ ಇತಿಹಾಸ ಹೊಂದಿರುವ ಪವಿತ್ರ ಕ್ಷೇತ್ರವಾಗಿದೆ. ಬೆಂಗಳೂರು ಪ್ರಾಂತದ ಅತ್ಯಂತ ಹಳೆಯ ದೇವಾಲಯಗಳಲ್ಲಿ ಒಂದಾಗಿ ಗುರುತಿಸಿಕೊಂಡಿರುವ ಈ ದೇವಾಲಯದಲ್ಲಿ ಪಾಳೇಗಾರರು, ಹೊಯ್ಸಳರು, ಗಂಗರು ಸೇರಿದಂತೆ ಅನೇಕ ರಾಜವಂಶಗಳ ಆಳ್ವಿಕೆಯ ಗುರುತುಗಳು ಕಂಡುಬರುತ್ತವೆ. ಮೂಲತಃ ಇದು ಕಂಬದ ನರಸಿಂಹಸ್ವಾಮಿ ದೇವಾಲಯವಾಗಿದ್ದು, ನಂತರದ ದಿನಗಳಲ್ಲಿ ತಿರುಪತಿಯಿಂದ ರಕ್ತಚಂದನದ ವೆಂಕಟರಮಣನ ಮೂರ್ತಿಯನ್ನು ಕದ್ದುತಂದು ಇಲ್ಲಿ ಲಕ್ಷ್ಮೀ ವೆಂಕಟರಮಣ ಸ್ವಾಮಿಯಾಗಿ ಪ್ರತಿಷ್ಠಾಪಿಸಲಾಗಿದೆ ಎಂಬ ಐತಿಹ್ಯ ಇದೆ.

 ಈ ಕಾರಣದಿಂದಲೇ ತಿರುಪತಿ ವೆಂಕಟರಮಣನ ಮೂಲ ಪ್ರಾಣ ದೇವರು ಇದೇ ಎಂಬ ನಂಬಿಕೆ ಸ್ಥಳೀಯವಾಗಿ ಜನಜನಿತವಾಗಿದೆ. ಪಾಳೇಗಾರರ ಕಾಲದಲ್ಲಿ ಪ್ರತಿಷ್ಠಾಪನೆಯಾದ ಈ ದೇವಾಲಯದಲ್ಲಿ ಪರಂಪರೆಯಂತೆ ಧಾರ್ಮಿಕ ಆಚರಣೆಗಳು ಇಂದಿಗೂ ನಿರಂತರವಾಗಿ ನಡೆಯುತ್ತಿದ್ದು, ವೈಕುಂಠ ಏಕಾದಶಿಯಂತಹ ಮಹತ್ವದ ಪರ್ವಗಳು ಭಕ್ತರ ಭಾರಿ ಸಂಖ್ಯೆಯ ಭಾಗವಹಿಸುವಿಕೆಯಿಂದ ವಿಶೇಷವಾಗಿ ಆಚರಿಸಲ್ಪಡುತ್ತಿವೆ.

 ವೈಕುಂಠ ಏಕಾದಶಿ ಪ್ರಯುಕ್ತ ನಡೆದ ಎಲ್ಲ ಧಾರ್ಮಿಕ ಕಾರ್ಯಕ್ರಮಗಳು ಯಶಸ್ವಿಯಾಗಿ ಮುಕ್ತಾಯಗೊಂಡಿದ್ದು, ಭಕ್ತರು ಶ್ರೀ ಪ್ರಸನ್ನ ಲಕ್ಷ್ಮೀ ವೆಂಕಟರಮಣ ಸ್ವಾಮಿಯ ದಿವ್ಯ ಕೃಪೆಗೆ ಪಾತ್ರರಾದರು. ದೇವಾಲಯ ಆಡಳಿತ ಮಂಡಳಿ ಹಾಗೂ ಸ್ವಯಂಸೇವಕರ ಸಹಕಾರಕ್ಕೆ ಭಕ್ತ ಸಮುದಾಯ ಮೆಚ್ಚುಗೆ ವ್ಯಕ್ತಪಡಿಸಿದೆ.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ