Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಪ್ರತಾಪ್‌ಸಿಂಹ ಮಾನನಷ್ಟ ಮೊಕದ್ದಮೆ: ಶಾಸಕ ಪ್ರದೀಪ್ ಈಶ್ವರ್‌ಗೆ ಜಾಮೀನು ರಹಿತ ವಾರೆಂಟ್‌ಜಾರಿ!

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬಿಜೆಪಿ ಮಾಜಿ ಸಂಸದ ಪ್ರತಾಪ್‌ಸಿಂಹ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್‌ಗೆ ಕಾನೂನು ಸಂಕಷ್ಟ ಎದುರಾಗಿದೆ. ಪ್ರಕರಣದ ವಿಚಾರಣೆಗೆ ಸುದೀರ್ಘ ಸಮಯದಿಂದ ನ್ಯಾಯಾಲಯಕ್ಕೆ ಗೈರುಹಾಜರಾದ ಹಿನ್ನೆಲೆಯಲ್ಲಿ
, ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಬಂಧನಕ್ಕೆ 'ಜಾಮೀನು ರಹಿತ ವಾರೆಂಟ್‌' ಜಾರಿಗೊಳಿಸಿದೆ.

ಕಳೆದ ವರ್ಷ ಪ್ರತಾಪ್‌ಸಿಂಹ ಮತ್ತು ಪ್ರದೀಪ್ ಈಶ್ವರ್ ನಡುವೆ ತೀವ್ರ ವಾಕ್ಸಮರ ನಡೆದಿತ್ತು. ಈ ವೇಳೆ ಉಂಟಾದ ಪರಸ್ಪರ ನಿಂದನೆಗೆ ಸಂಬಂಧಿಸಿದಂತೆ ಇಬ್ಬರೂ ನ್ಯಾಯಾಲಯದ ಮೊರೆ ಹೋಗಿ ಮಾನನಷ್ಟ ಮೊಕದ್ದಮೆ ಹೂಡಿದ್ದರು. ಪ್ರತಾಪ್ ಸಿಂಹ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸುತ್ತಿರುವ ನ್ಯಾಯಾಧೀಶ ಸಂದೀಪ್ ಪಾಟೀಲ್ ಅವರ ಪೀಠವು ಕಠಿಣ ಕ್ರಮ ಕೈಗೊಂಡಿದ್ದು, ವಾರೆಂಟ್ ಜಾರಿಗೊಳಿಸಿ ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 7 ಕ್ಕೆ ಮುಂದೂಡಿದೆ.

ಏನಿದು ವಾಕ್ಸಮರದ ಹಿನ್ನೆಲೆ?, ಪರಸ್ಪರ ವಾಗ್ದಾಳಿ:
ಮಾಜಿ ಸಂಸದ ಪ್ರತಾಪ್ ಸಿಂಹ ಅವರು ತಮ್ಮನ್ನು
'ಮುಳ್ಳುಹಂದಿ' ಮತ್ತು 'ಕಾಮಿಡಿ ಪೀಸ್' ಎಂದು ಕರೆದಿದ್ದಕ್ಕೆ ತೀವ್ರವಾಗಿ ತಿರುಗೇಟು ನೀಡಿದ್ದ ಪ್ರದೀಪ್ ಈಶ್ವರ್, ವೈಯಕ್ತಿಕ ವಿಚಾರಗಳನ್ನು ಎಳೆತಂದು ವ್ಯಂಗ್ಯವಾಡಿದ್ದರು.

ವೈಯಕ್ತಿಕ ನಿಂದನೆ: "ನಮ್ಮ ತಂದೆ ನಿಮ್ಮ ಊರಿಗೆ ಬರಲಿಲ್ಲ ಅಂತಾ ಬೇಜಾರಾ? ನಾನ್ ಕಳುಹಿಸೋಕೆ ರೆಡಿ ಇಲ್ಲ ಗುರು. ನಮ್ಮದು ಸಂಪ್ರದಾಯಸ್ಥ ಕುಟುಂಬ. ಪ್ರತಾಪ್ ಸಿಂಹ ಅವರ ತಂದೆ-ತಾಯಿ ದೈವ ಭಕ್ತರಿರಬೇಕು, ಅದಕ್ಕೆ 'ಪ್ರತಾಪ' ಅಂತ ಹೆಸರಿಟ್ಟಿದ್ದಾರೆ. ಇಲ್ಲದಿದ್ದರೆ 'ಕೋತಿ' ಅಂತ ಇಡುತ್ತಿದ್ದರು," ಎಂದು ಪ್ರದೀಪ್ ಈಶ್ವರ್ ಲೇವಡಿ ಮಾಡಿದ್ದರು.

ಮಾನನಷ್ಟ ಕೇಸ್: ಈ ಹೇಳಿಕೆಯಿಂದ ತಮ್ಮ ತಂದೆ-ತಾಯಿ ಹಾಗೂ ಕುಟುಂಬಕ್ಕೆ ಅಪಮಾನವಾಗಿದೆ ಎಂದು ಆರೋಪಿಸಿ ಪ್ರತಾಪ್ ಸಿಂಹ ಅವರು ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದರು.

ನ್ಯಾಯಾಲಯವೇ ಈಗ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿರುವುದರಿಂದ ಶಾಸಕ ಪ್ರದೀಪ್ ಈಶ್ವರ್ ಅವರು ಸೆಪ್ಟೆಂಬರ್ 7ರ ಒಳಗಾಗಿ ನ್ಯಾಯಾಲಯಕ್ಕೆ ಹಾಜರಾಗಿ ಜಾಮೀನು ಪಡೆಯುವುದು ಅನಿವಾರ್ಯವಾಗಿದೆ.

 

 

Author
ಸಿ.ಹೆಂಜಾರಪ್ಪ
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಮಿಳುನಾಡಿಗೆ ಮತ್ತೆ ನೀರು ಹರಿಸಲು CWMA ಆದೇಶ, ಕರ್ನಾಟಕಕ್ಕೆ ತೀವ್ರ ಹಿನ್ನಡೆಮನೆ ಮುಂದೆ ವಾಹನ ನಿಲ್ಲಿಸಿದರೆ ಪಾರ್ಕಿಂಗ್ ಶುಲ್ಕ? ಪ್ರಸ್ತಾವನೆಗೆ ಸಚಿವ ರಾಮಲಿಂಗಾರೆಡ್ಡಿ ತೀವ್ರ ವಿರೋಧ: ಸಿಎಂಗೆ ಪತ್ರಅಧಿವೇಶನ ಮುಕ್ತಾಯ ಬೆನ್ನಲ್ಲೇ ಸಚಿವ ಸಂಪುಟ ಪುನಾರಚನೆ ಚರ್ಚೆ ಚುರುಕು: ಸಿಎಂ ಡಿಕೆ ಶಿವಕುಮಾರ್‌ಗೆ ದೆಹಲಿ ಬುಲಾವ್?ಕಾಂಗ್ರೆಸ್ ವೈಫಲ್ಯ ಖಂಡಿಸಿ ಸೆ.1ರಿಂದ ಬಿಜೆಪಿ ಬೃಹತ್ ಪಾದಯಾತ್ರೆ: ವಿಜಯೇಂದ್ರ ಘೋಷಣೆ102 ತಾಲೂಕುಗಳಲ್ಲಿ ಬರ: ಶೀಘ್ರವೇ ಕೇಂದ್ರಕ್ಕೆ ವರದಿ ಸಲ್ಲಿಕೆ - ಡಿಸಿಎಂ ಜಿ. ಪರಮೇಶ್ವರ್ ಸುಳಿವುKPSC ಕಚೇರಿ ಮೇಲೆ ಸಿಐಡಿ ದಾಳಿ, 329 ಅಭ್ಯರ್ಥಿಗಳಿಗೆ ನೋಟಿಸ್!ಸಮಾಜ ಕಲ್ಯಾಣ ಇಲಾಖೆಯ 140 ಶಿಕ್ಷಕರ ಹುದ್ದೆ ಹಾಗೂ KSET ಪರೀಕ್ಷೆಗೆ ಅರ್ಜಿ ಆಹ್ವಾನ!ಸಚಿವ ನಾಗೇಂದ್ರ ವಜಾಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದಿಂದ 'ಬಳ್ಳಾರಿ ಚಲೋ' ಪಾದಯಾತ್ರೆ!ಮಳೆ ಕೊರತೆ ನೀಗಿಸಲು 27 ಕೋಟಿ ವೆಚ್ಚದಲ್ಲಿ ಶೀಘ್ರವೇ ಮೋಡ ಬಿತ್ತನೆ:ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿಯಾಗಲು ಆರೋಪಿ ಪ್ರದೋಷ್‌ಗೆ ಕೋರ್ಟ್ ಗ್ರೀನ್ ಸಿಗ್ನಲ್!