ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ಜಿಲ್ಲಾ ವೀರಶೈವ ಲಿಂಗಾಯತ ಹೇಮರಡ್ಡಿ ಮಲ್ಲಮ್ಮ ಸಮಾಜದಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿದೆ.
೨೦೨೫-೨೬ ನೇ ಸಾಲಿನಲ್ಲಿ ಹತ್ತನೆ ತರಗತಿ ಹಾಗೂ ದ್ವಿತೀಯ ಪಿ.ಯು.ಸಿ.ಯಲ್ಲಿ ಶೇ. ೯೦ ಅಥವಾ ೯೦ ಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದಿರುವ ಜಿಲ್ಲೆಯ ವೀರಶೈವ ರಡ್ಡಿ ಲಿಂಗಾಯಿತ ಸಮಾಜದ ವಿದ್ಯಾರ್ಥಿಗಳು ಅಂಕಪಟ್ಟಿ, ಆಧಾರ್ ಕಾರ್ಡ್, ವರ್ಗಾವಣೆ ಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರ, ಮೊಬೈಲ್ ಸಂಖ್ಯೆ ಹಾಗೂ
ಇತ್ತೀಚಿನ ಎರಡು ಪಾಸ್‌ಪೋರ್ಟ್ ಗಾತ್ರದ ಫೋಟೋಗಳನ್ನು ದಿನಾಂಕ : ೧೩-೫-೨೦೨೬ ರ ಸಂಜೆ ೫ ಗಂಟೆಯೊಳಗಾಗಿ ಚಿತ್ರದುರ್ಗ ಜಿಲ್ಲಾ ವೀರಶೈವ ಲಿಂಗಾಯತ ಹೇಮರಡ್ಡಿ ಮಲ್ಲಮ್ಮ ಸಮಾಜ(ರಿ) ಮೊದಲನೆ ಮಹಡಿ, ಸಿಟಿ ಕ್ಲಬ್ ಬಿಲ್ಡಿಂಗ್, ರೋಟರಿ ಶಾಲೆ ಪಕ್ಕ, ಚಿತ್ರದುರ್ಗ ಇಲ್ಲಿಗೆ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾ ವೀರಶೈವ ಲಿಂಗಾಯತ ಹೇಮರಡ್ಡಿ ಮಲ್ಲಮ್ಮ ಸಮಾಜದ ಪ್ರಧಾನ ಕಾರ್ಯದರ್ಶಿ ಡಿ.ಟಿ.ಶಿವಾನಂದಪ್ಪ, ಸಹ ಕಾರ್ಯದರ್ಶಿ ಜಿ.ನಾಗಭೂಷಣ್ ಇವರುಗಳು ಕೋರಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಮೊ : ೯೪೪೮೪೨೩೨೨೯, ೯೫೯೧೮೧೨೧೦೫ ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ.


