Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

110 ಕಿ.ಮೀ. ಮಾನವ ಸರಪಳಿ ಯಶಸ್ವಿಗೊಳಿಸಲು ಸಿದ್ಧತೆ- ಸಚಿವ ಸುಧಾಕರ್ ಸೂಚನೆ

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಇದೇ ಸೆ. 15 ರಂದು ರಾಜ್ಯಾದ್ಯಂತ ಬೀದರ್‍ನಿಂದ ಚಾಮರಾಜನಗರ ವರೆಗೆ ಏಕಕಾಲಕ್ಕೆ ಮಾನವ ಸರಪಳಿ ನಿರ್ಮಿಸುವ ಮೂಲಕ ವಿಶಿಷ್ಟವಾಗಿ ಆಚರಿಸಲಾಗುತ್ತಿದ್ದು, ಜಿಲ್ಲೆಯಲ್ಲೂ 110 ಕಿ.ಮೀ. ನಷ್ಟು ಮಾನವ ಸರಪಳಿ ನಿರ್ಮಿಸಿ, ಕಾರ್ಯಕ್ರಮ ಯಶಸ್ವಿಗೊಳಿಸಲು ಅಗತ್ಯವಿರುವ ಎಲ್ಲ ಸಿದ್ಧತೆಗಳನ್ನು ಕೈಗೊಳ್ಳಬೇಕು ಎಂದು ರಾಜ್ಯ ಯೋಜನಾ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ. ಸುಧಾಕರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.


ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಸಂಬಂಧ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.


ಸೆ. 15 ರಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಆಚರಿಸಲಾಗುತ್ತಿದ್ದು, ರಾಜ್ಯದಲ್ಲಿ ಈ ಬಾರಿ ಏಕಕಾಲಕ್ಕೆ ಬೀದರ್ ನಿಂದ ಚಾಮರಾಜನಗರ ವರೆಗೆ ರಾಜ್ಯಾದ್ಯಂತ ಏಕಕಾಲಕ್ಕೆ ಮಾನವ ಸರಪಳಿ ನಿರ್ಮಿಸಿ, ಏಕಕಾಲಕ್ಕೆ ಸಂವಿಧಾನ ಪೀಠಿಕೆ ವಾಚನ ಮಾಡಲಾಗುವುದು.  ಈ ಬೃಹತ್ ಮಾನವ ಸರಪಳಿಗೆ ಚಿತ್ರದುರ್ಗ ಜಿಲ್ಲೆಯಲ್ಲೂ ಕೈ ಜೋಡಿಸಲಾಗುತ್ತಿದ್ದು, ಜಿಲ್ಲೆಯಲ್ಲಿ ಮೊಳಕಾಲ್ಮೂರು ತಾಲ್ಲೂಕು ತಮ್ಮೇನಹಳ್ಳಿ (ಗಡಿಭಾಗ) ಯಿಂದ ಆರಂಭಗೊಳ್ಳುವ ಮಾನವ ಸರಪಳಿಯು ಹಿರಿಯೂರು ತಾಲ್ಲೂಕು ಜವಗೊಂಡನಹಳ್ಳಿ (ಗಡಿಭಾಗ) ವರೆಗೆ 110 ಕಿ.ಮೀ. ವರೆಗೂ ನಿರ್ಮಾಣಗೊಳ್ಳಲಿದೆ.

 ಜಿಲ್ಲೆಯ ಮೊಳಕಾಲ್ಮೂರು, ಚಳ್ಳಕೆರೆ ಮತ್ತು ಹಿರಿಯೂರು ತಾಲ್ಲೂಕುಗಳಲ್ಲಿ ಈ ಮಾನವ ಸರಪಳಿ ನಿರ್ಮಾಣ ಆಗಬೇಕು.  ಇದೊಂದು ವಿಶೇಷ ಮತ್ತು ದೇಶಾಭಿಮಾನದ ಕಾರ್ಯಕ್ರಮವಾಗಿದ್ದು ಎಲ್ಲ ಸಾರ್ವಜನಿಕರು, ಸಂಘ ಸಂಸ್ಥೆಗಳು, ಶಿಕ್ಷಣ ಸಂಸ್ಥೆಗಳು, ಜನಪ್ರತಿನಿಧಿಗಳು, ಸರ್ಕಾರಿ ನೌಕರರು ಸ್ವಯಂ ಪ್ರೇರಿತವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು.  ಮಾನವ ಸರಪಳಿಯು ರಾಷ್ಟ್ರೀಯ ಹೆದ್ದಾರಿಯಲ್ಲಿ ನಿರ್ಮಾಣವಾಗುವುದರಿಂದ, ವಿದ್ಯಾರ್ಥಿಗಳಿಗೆ, ಸಾರ್ವಜನಿಕರಿಗೆ ತೊಂದರೆಯಾಗದ ರೀತಿ ವಾಹನ ಸಂಚಾರ ದಟ್ಟಣೆಯನ್ನು ಪೊಲೀಸ್ ಇಲಾಖೆ ಅಧಿಕಾರಿಗಳು ಸಮರ್ಪಕವಾಗಿ ನಿರ್ವಹಿಸಬೇಕು. ಕಾರ್ಯಕ್ರಮವನ್ನು ಅತ್ಯಂತ ಅಚ್ಚುಕಟ್ಟಾಗಿ ರೂಪಿಸಲು ಅಧಿಕಾರಿಗಳು ಈಗಿನಿಂದಲೇ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕು.  ಸೆ. 06 ರಂದು ಆಯಾ ವಿಧಾನಸಭಾ ಕ್ಷೇತ್ರ ಶಾಸಕರ ನೇತೃತ್ವದಲ್ಲಿ ಅಧಿಕಾರಿಗಳೊಂದಿಗೆ ಏಕಕಾಲಕ್ಕೆ ಸಭೆ ನಡೆಸಿ, ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹೇಳಿದರು.


ಜಿಲ್ಲಾಧಿಕಾರಿ ವೆಂಕಟೇಶ್ ಟಿ. ಅವರು ಕಾರ್ಯಕ್ರಮದ ರೂಪರೇಷೆ ಕುರಿತು ಮಾಹಿತಿ ನೀಡಿ, ಸರ್ಕಾರದ ಸೂಚನೆಯಂತೆ ಈ ಬಾರಿ ಸೆ. 15 ರಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಬೃಹತ್ ಮಾನವ ಸರಪಳಿ ನಿರ್ಮಿಸುವ ಮೂಲಕ ವಿಶಿಷ್ಟವಾಗಿ ಆಚರಿಸಲಾಗುತ್ತಿದೆ.  ಜಿಲ್ಲೆಯಲ್ಲಿ ಒಟ್ಟು 110 ಕಿ.ಮೀ. ಮಾನವ ಸರಪಳಿಯನ್ನು ನಿರ್ಮಿಸಲಾಗುವುದು, ಪ್ರತಿ ಕಿ.ಮೀ. ಗೆ ಸುಮಾರು 850 ಜನರಂತೆ, ಒಟ್ಟು 110 ಕಿ.ಮೀ. ಗೆ ಅಂದಾಜು 95000 ಜನರ ಅಗತ್ಯವಿದೆ.  ಇದಕ್ಕಾಗಿ ಈಗಾಗಲೆ ಸಿದ್ಧತೆಗಳನ್ನು ಪ್ರಾರಂಭಿಸಲಾಗಿದ್ದು, ಸುಮಾರು 35000 ವಿದ್ಯಾರ್ಥಿಗಳು, 25000 ಸ್ವ-ಸಹಾಯ ಸಂಘ ಪ್ರತಿನಿಧಿಗಳು, 2000 ಆಶಾ, ಅಂಗನವಾಡಿ ಕಾರ್ಯಕರ್ತೆಯರು, 4000 ಬೋಧಕ, ಬೋಧಕೇತರ ಸಿಬ್ಬಂದಿಗಳು, ಮಾರ್ಗದ ಅಕ್ಕ-ಪಕ್ಕದ ಗ್ರಾ.ಪಂ. ಗಳಿಂದ ಸುಮಾರು 25000 ಹಾಗೂ ನಗರ, ಸ್ಥಳೀಯ ಸಂಸ್ಥೆ ವ್ಯಾಪ್ತಿಯಲ್ಲಿ ಸುಮಾರು 10000 ಜನರು ಭಾಗಿಯಾಗುವ ನಿರೀಕ್ಷೆಯನ್ನು ಹೊಂದಿದ್ದು, ಅದರಂತೆ ಕಾರ್ಯಕ್ರಮ ರೂಪಿಸಲಾಗಿದೆ. ಇದಕ್ಕಾಗಿ ಖಾಸಗಿ ಶಾಲೆಗಳ ಸುಮಾರು 200 ಕ್ಕೂ ಹೆಚ್ಚು ಬಸ್ ಗಳನ್ನು ಸಾರಿಗೆ ಸಂಪರ್ಕಕ್ಕಾಗಿ ಬಳಸಲು ಯೋಜಿಸಲಾಗಿದೆ.  ಪ್ರತಿ 05 ಕಿ.ಮೀ. ಗೆ ಒಬ್ಬರು ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ನೋಡಲ್ ಅಧಿಕಾರಿಯನ್ನಾಗಿ ನಿಯೋಜಿಸಲಾಗುತ್ತಿದೆ.  ಕಾರ್ಯಕ್ರಮದಲ್ಲಿ ಭಾಗವಹಿಸುವ ಸಾರ್ವಜನಿಕರು, ವಿದ್ಯಾರ್ಥಿಗಳಿಗೆ ಸಾಕಷ್ಟು ಶುದ್ಧ ಕುಡಿಯುವ ನೀರು, ಮುಂಜಾಗ್ರತಾ ಕ್ರಮವಾಗಿ ವೈದ್ಯಕೀಯ ರಕ್ಷಣೆ, ಆಂಬುಲೆನ್ಸ್ ವ್ಯವಸ್ಥೆ ಮಾಡಲಾಗುವುದು ಎಂದರು.

     ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮವು ದೇಶಾಭಿಮಾನ ಬಿಂಬಿಸುವ ವಿಶೇಷ ಕಾರ್ಯಕ್ರಮವಾಗಿದ್ದು, ಎಲ್ಲ ಇಲಾಖೆಗಳ ಅಧಿಕಾರಿ, ಸಿಬ್ಬಂದಿಗಳು ಕಡ್ಡಾಯವಾಗಿ ಪಾಲ್ಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಈ ಸಂದರ್ಭದಲ್ಲಿ ಸೂಚನೆ ನೀಡಿದರು.

     ಸಭೆಯಲ್ಲಿ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಟಿ. ರಘುಮೂರ್ತಿ, ಹೊಳಲ್ಕೆರೆ ಶಾಸಕ ಡಾ. ಎಂ. ಚಂದ್ರಪ್ಪ, ಆದಿಜಾಂಬವ ಅಭಿವೃದ್ಧಿ ನಿಗಮ ಮಂಡಳಿ ಅಧ್ಯಕ್ಷ ಜಿ.ಎಸ್. ಮಂಜುನಾಥ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ತಾಜ್‍ಪೀರ್ ಅವರು ಭಾಗವಹಿಸಿ ಕಾರ್ಯಕ್ರಮದ ಯಶಸ್ವಿಗೆ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು.
ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಬಂಡಾರು, ಉಪವಿಭಾಗಾಧಿಕಾರಿ ಕಾರ್ತಿಕ್, ಸಮಾಜ ಕಲ್ಯಾಣ ಇಲಾಖೆ ಜಂಟಿನಿರ್ದೇಶಕ ಜಗದೀಶ್ ಹೆಬ್ಬಳ್ಳಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ