Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹಿರಿಯ ನಾಗರಿಕರ ಬಗ್ಗೆ ಅಸಡ್ಡೆ ಅಸಹನೆ ಮನೋಭಾವ ಸಲ್ಲದು-ಅಧ್ಯಕ್ಷ ರಂಗಪ್ಪ ರೆಡ್ಡಿ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಹಿರಿಯ ನಾಗರಿಕರ ಬಗ್ಗೆ ಅಸಡ್ಡೆ, ಅಸಹ್ಯ ಮನೋಭಾವ ಸಲ್ಲದು ಎಂದು ಎಂದು ಹಿರಿಯ ನಾಗರಿಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರಂಗಪ್ಪ ರೆಡ್ಡಿ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘ, ರೋಟರಿ ಕ್ಲಬ್ ಹಾಗೂ ಹಿರಿಯ ನಾಗರಿಕರ ಸ್ವಯಂ ಸೇವಾ ಸಂಸ್ಥೆಗಳ ವತಿಯಿಂದ ಶುಕ್ರವಾರ ನಗರದ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ಆಯೋಜಿಸಲಾದ ಹಿರಿಯ ನಾಗರಿಕರ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಅಕ್ಟೋಬರ್ 1 ರಂದು ಇಡೀ ವಿಶ್ವದಾದ್ಯಂತ ವಿಶ್ವ ನಾಗರಿಕರ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಇದರ ಅಂಗವಾಗಿ ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಹಿರಿಯ ನಾಗರಿಕರೆಲ್ಲರೂ ಕ್ರೀಡಾಕೂಟದಲ್ಲಿ ಭಾಗವಹಿಸಿ ಪ್ರಶಸ್ತಿಗಳನ್ನು ಪಡೆಯಬೇಕೆಂದೇನು ಇಲ್ಲ. ದೈಹಿಕವಾಗಿ ಚಟುವಟಿಕೆಯಿಂದರಲು ಸಹಕಾರಿಯಾಗಿದೆ. ಸಮಾಜದಲ್ಲಿ ಹಿರಿಯ ನಾಗರಿಕರನ್ನು ಗೌರವದಿಂದ ಕಾಣಬೇಕು ಎಂದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್ ಬಣಕಾರ್ ಮಾತನಾಡಿ, ಪ್ರಸ್ತುತ ದಿನಗಳಲ್ಲಿ 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಕ್ರೀಡೆ ಹಾಗೂ ಸಾಂಕೃತಿಕ ಕ್ಷೇತ್ರದಲ್ಲಿ ಅವಕಾಶಗಳು ಸಿಗುವುದು ಕಡಿಮೆ. ಆದ್ದರಿಂದ ಪ್ರತಿ ವರ್ಷದಂತೆ ಈ ಬಾರಿಯೂ ವಿಶ್ವ ನಾಗರೀಕರ ದಿನಾಚರಣೆಯ ಅಂಗವಾಗಿ ಹಿರಿಯ ನಾಗರೀಕರಿಗೆ ಕ್ರೀಡಾಕೂಟ ಹಾಗೂ ಸಾಂಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ.

ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದರಿಂದ ಮನಸ್ಸಿಗೆ ಉಲ್ಲಾಸ, ಉತ್ಸಾಹ ನೆಮ್ಮದಿಯನ್ನು ನೀಡುವುದರ ಜೊತೆಗೆ, ಹಿರಿಯ ನಾಗರಿಕರ ಸಾಮರ್ಥ್ಯಕ್ಕೆ ಈ ವೇದಿಕೆ ಸಾಕ್ಷಿಯಾಗಲಿದೆ ಎಂದರು.
ಹಿರಿಯ ನಾಗರಿಕರಿಗೆ ಮ್ಯೂಜಿಕಲ್ ಚೇರ್, ಬಿರುಸಿನ ನಡಿಗೆ, ಬಕೆಟ್‌ನಲ್ಲಿ ರಿಂಗ್ ಎಸೆಯುವ ಸ್ಪರ್ಧೆ, ಗಾಯನ ಮತ್ತು ಏಕ ಪಾತ್ರಾಭಿನಯ ಸ್ಪರ್ಧೆಗಳನ್ನು ನಡೆಸಲಾಯಿತು.


ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಡಿ.ಸಿ.ಸೋಮಶೇಖರಯ್ಯ ಸ್ವಾಗತಿಸಿದರು. ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರ ನೋಡಲ್ ಅಧಿಕಾರಿ ಜಿ.ಹರಿಪ್ರಸಾದ್ ವಂದಿಸಿದರು. ಬಾಲಭವನ ನಿರ್ವಾಹಕ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.

 ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಿಲ್ಲಾ ನಿರೂಪಣಾಧಿಕಾರಿ ಎಸ್.ವಿಜಯ್ ಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿ ಪವಿತ್ರ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಎಂ.ವಿ.ವೀಣಾ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸವಿತಾ, ಪರಿವೀಕ್ಷಣಾಧಿಕಾರಿ ಸುರೇಶ್ ಸೇರುದಂತೆ ಸಿಬ್ಬಂದಿ ಉಪಸ್ಥಿತರಿದ್ದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕನ್ನಡಪರ ಹಿರಿಯ ಹೋರಾಟಗಾರ ಡಿ. ವಿ. ಅಶ್ವತಪ್ಪ ನಿಧನಡಿಕೆಶಿ ಹುಟ್ಟುಹಬ್ಬಕ್ಕೆ ‘ದುಗ್ಗಮ್ಮ’ಗೆ 101 ತೆಂಗಿನಕಾಯಿ ಹರಕೆ; ‘ಸಿಎಂ’ ಆಗಲೆಂದು ಅಭಿಮಾನಿಗಳ ವಿಶೇಷ ಪ್ರಾರ್ಥನೆ!‘ನೀಟ್’ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣ: ಪ್ರಮುಖ ಆರೋಪಿ ಧನಂಜಯ್ ಲೋಖಂಡೆ ೬ ದಿನ ಸಿಬಿಐ ಕಸ್ಟಡಿಗೆ!ನಟ ದರ್ಶನ್‌ಗೆ ಬಿಗ್ ಶಾಕ್: ಜಾಮೀನು ನಿರಾಕರಿಸಿದ ಸುಪ್ರೀಂಕೋರ್ಟ್! ’ದಿನಂಪ್ರತಿ ವಿಚಾರಣೆ’ಗೆ ಆದೇಶಜೂನ್ ೨೧ ಕ್ಕೆ ‘ನೀಟ್’ ಮರು ಪರೀಕ್ಷೆ; ಅಧಿಕೃತ ಘೋಷಣೆ!ಮೇ 26ಕ್ಕೆ ಕೇರಳಕ್ಕೆ ಮಾನ್ಸೂನ್ ಎಂಟ್ರಿ! ಆದರೆ ‘ಎಲ್ ನಿನೋ’ ಭೀತಿಭೀಕರ ಅಪಘಾತ: ಸೇತುವೆಯಿಂದ ಕೆಳಕ್ಕೆ ಬಿದ್ದ ಟ್ರ್ಯಾಕ್ಟರ್, ಒಂದೇ ಕುಟುಂಬದ 7 ಸಾವು!ಕೈಮಗ್ಗ ನೇಯ್ಗೆ ಉತ್ತೇಜನಕ್ಕೆ ಸರ್ಕಾರದ ವಿಶೇಷ ಸಹಾಯಧನ: ಸಂಸದೆ ಡಾ. ಪ್ರಭಾಕೈ-ದಳ ನಾಯಕರ ನಡುವಿನ ವಾಕ್ಸಮರಕ್ಕೆ ಹೊಸ ಕಿಡಿ ಹೊತ್ತಿಸಿದ ಡಿಸಿಎಂ ಹೇಳಿಕೆಸಿಎಂ ಕುರ್ಚಿ ಉಳಿಸಿಕೊಳ್ಳಲು ಸಿದ್ದರಾಮಯ್ಯ ಎಲ್ಲದ್ದಕ್ಕೂ ಸಹಿ ಹಾಕುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ