Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೆ.ಎಸ್.ಆರ್.ಟಿ.ಸಿ ಗೆ ಪ್ರತಿಷ್ಠಿತ ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕೆ.ಎಸ್.ಆರ್.ಟಿ.ಸಿ ನಿಗಮವು ತನ್ನ
ಪಾರದರ್ಶಕ ನೇಮಕಾತಿ ಮತ್ತು ಪರಿಣಾಮಕಾರಿ ತರಬೇತಿ ಕಾರ್ಯಕ್ರಮಕ್ಕೆ ಪ್ರತಿಷ್ಠಿತ ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ-2026 ನ್ನು ಪಡೆದಿದೆ.

ಸ್ಕಾಚ್ ಸಂಸ್ಥೆಯು ದೆಹಲಿಯ ಸಿಲ್ವರ್ ಓಕ್ ಹಾಲ್ ಇಂಡಿಯಾ ಹ್ಯಾಬಿಟೇಟ್ ಸೆಂಟರ್‌ನಲ್ಲಿ ಆಯೋಜಿಸಿದ್ದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಅಕ್ರಂ ಪಾಷ ಅವರು ಸ್ಕಾಚ್ ಫೌಂಡೇಶನ್ ಅಧ್ಯಕ್ಷ ಸಮೀರ್ ಕೊಚ್ಚರ್ ಹಾಗೂ ಉಪಾಧ್ಯಕ್ಷ ಡಾ.ಗುರುಚರಣ್ ಧನ್ಚಾಲ್ ಅವರಿಂದ ಪ್ರಶಸ್ತಿ ಸ್ವೀಕರಿಸಿದರು.

ನಿಗಮವು ಅರ್ಜಿ ಸಲ್ಲಿಕೆಯಿಂದ ಆಯ್ಕೆ ಪ್ರಕ್ರಿಯೆಯವರೆಗೆ, ಘಟಕ ನಿಯೋಜನೆವರೆಗೆ ನೇಮಕಾತಿಯಲ್ಲಿ ಪಾರದರ್ಶಕತೆ ಮತ್ತು ಏಕರೂಪತೆಯನ್ನು ಕಾಪಾಡುವ ಮೂಲಕ ಮಾನವ ಹಸ್ತಕ್ಷೇಪವನ್ನು ನಿಲ್ಲಿಸಲಾಗಿದೆ. ತಂತ್ರಜ್ಞಾನ ಆಧಾರಿತ ನೇಮಕಾತಿ ವ್ಯವಸ್ಥೆ, ಸ್ವಯಂ ಚಾಲಿತ ಚಾಲನಾ ಪರೀಕ್ಷೆ, ಆನ್ ಲೈನ್ ಪರೀಕ್ಷೆಗಳು, ದಾಖಲೆಗಳ ಡಿಜಿಟಲ್ ಪರಿಶೀಲನೆ, ವೆಬ್ ಕ್ಯಾಸ್ಟಿಂಗ್, ಆಟೋ ಜನರೇಟಡ್, ಅಂಕಪಟ್ಟಿ ನೀಡುವ ಮೂಲಕ 2000 ಚಾಲಕ/ನಿರ್ವಾಹಕರು, 300 ತಾಂತ್ರಿಕ ಸಿಬ್ಬಂದಿಗಳು, 441 ಅನುಕಂಪ ಆಧಾರದಲ್ಲಿ ಹುದ್ದೆಗಳನ್ನು ನೇಮಕಾತಿ ಮಾಡಲಾಗಿದೆ. ಇದಲ್ಲದೆ ಕಳೆದ ಆರು ತಿಂಗಳಲ್ಲಿ ಸುಮಾರು 12,000ಕ್ಕೂ ಹೆಚ್ಚು ಸಿಬ್ಬಂದಿಗೆ ಪರಿಣಾಮಕಾರಿ ತರಬೇತಿ ನೀಡಲಾಗಿದೆ. ನಿಗಮದ ಸಮಗ್ರ ವಿಷಯ ನಿರೂಪಣೆಯಲ್ಲಿನ ಬದಲಾವಣೆಗೆ ಸಹಕಾರಿಯಾಗಿದೆ.

ದೆಹಲಿ ಮೂಲದ ಸ್ಕಾಚ್ ಸಂಸ್ಥೆಯು ಸ್ವತಂತ್ರ ವಿಚಾರ ತಜ್ಞ ವೇದಿಕಾ ಸಂಸ್ಥೆಯಾಗಿದ್ದು, 1977 ರಲ್ಲಿ ಸ್ಥಾಪಿತವಾಗಿರುತ್ತದೆ. ಈ ಸಂಸ್ಥೆಯು 2003 ರಿಂದ ಸ್ಕಾಚ್ ಪ್ರಶಸ್ತಿಯನ್ನು ದೇಶದ ವಿವಿಧ ಸಂಸ್ಥೆಗಳು ಸಾಧಿಸಿರುವ ಉತ್ತಮ ಆಡಳಿತ ನಿರ್ವಹಣೆ, ಹಣಕಾಸು, ತಾಂತ್ರಿಕತೆ ಅಳವಡಿಕೆ, ಪಾರದರ್ಶಕ ನೀತಿ, ಯೋಜನೆ, ಆಂತರಿಕ ಬೆಳವಣಿಗೆಗಾಗಿ ನೀಡುತ್ತಾ ಬಂದಿರುವ ಕೊಡುಗೆಗಳು. ಉತ್ತಮ ಸಾಧನೆ ಹಾಗೂ ಅವುಗಳಿಂದ ಉಂಟಾಗಿರುವ ಪರಿಣಾಮಗಳನ್ನು ಆಧರಿಸಿ ಆಯ್ಕೆ ಮಾಡಿ ನೀಡಲಾಗುತ್ತದೆ ಎಂದು ನಿಗಮವು ಪ್ರಕಟಣೆಯಲ್ಲಿ ತಿಳಿಸಿದೆ.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ