Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Feature Article

ಶ್ರೀಕ್ಷೇತ್ರ ಆದಿಚುಂಚನಗಿರಿಯಲ್ಲಿ 'ಶ್ರೀ ಗುರು ಭೈರವೈಕ್ಯ ಮಂದಿರ' ಲೋಕಾರ್ಪಣೆ: ಪ್ರಧಾನಿ ಮೋದಿ ಭಾಗಿ

ಚಂದ್ರವಳ್ಳಿ ನ್ಯೂಸ್, ಮಂಡ್ಯ:
ಶ್ರೀಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪರಮಪೂಜ್ಯ ಜಗದ್ಗುರುಗಳಾದ ಶ್ರೀ ಶ್ರೀ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ ಸ್ಮರಣಾರ್ಥ ನಿರ್ಮಿಸಲಾಗಿರುವ 'ಶ್ರೀ ಗುರು ಭೈರವೈಕ್ಯ ಮಂದಿರ'ವನ್ನು ಗೌರವಾನ್ವಿತ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಲೋಕಾರ್ಪಣೆಗೊಳಿಸಿದರು.

​ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿಯಲ್ಲಿ ನಡೆದ ಈ ಐತಿಹಾಸಿಕ ಸಮಾರಂಭದಲ್ಲಿ ಪ್ರಧಾನಿಯವರು ಶ್ರದ್ಧಾಭಕ್ತಿಯಿಂದ ಪಾಲ್ಗೊಂಡು, ಮಂದಿರವನ್ನು ರಾಷ್ಟ್ರಕ್ಕೆ ಸಮರ್ಪಿಸಿದರು.

​ದಿವ್ಯ ಸಾನ್ನಿಧ್ಯ ಮತ್ತು ಗಣ್ಯರ ಉಪಸ್ಥಿತಿ:
​ಕಾರ್ಯಕ್ರಮವು ಆದಿಚುಂಚನಗಿರಿ ಮಠದ ಜಗದ್ಗುರುಗಳಾದ ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮಿಗಳು ಹಾಗೂ ರಾಜಕೋಟ್‌ನ ಅರ್ಷ ವಿದ್ಯಾಮಂದಿರದ ಶ್ರೀ ಶ್ರೀ ಶ್ರೀ ಸ್ವಾಮಿ ಪರಮಾತ್ಮಾನಂದ ಸರಸ್ವತಿ ಜೀ ಅವರ ದಿವ್ಯ ಸಾನ್ನಿಧ್ಯದಲ್ಲಿ ನೆರವೇರಿತು.

​ಈ ಪುಣ್ಯ ಕಾರ್ಯಕ್ರಮದಲ್ಲಿ ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್, ಮಾಜಿ ಪ್ರಧಾನಮಂತ್ರಿ ಹೆಚ್.ಡಿ. ದೇವೇಗೌಡರು, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

​ಪ್ರಧಾನಿಗಳಿಗೆ ಕೃತಜ್ಞತೆ ಸಲ್ಲಿಸಿದ ಹೆಚ್.ಡಿ. ಕುಮಾರಸ್ವಾಮಿ:
​ತಮ್ಮ ಸ್ವಕ್ಷೇತ್ರವಾದ ಮಂಡ್ಯ ಜಿಲ್ಲೆಗೆ ಆಗಮಿಸಿ ಈ ಲೋಕಾರ್ಪಣಾ ಕಾರ್ಯಕ್ರಮವನ್ನು ನೆರವೇರಿಸಿಕೊಟ್ಟ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಹೃದಯಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ. "ಈ ಪರಮಪುಣ್ಯ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದು ಅತ್ಯಂತ ಸೌಭಾಗ್ಯದ ಸಂಗತಿ" ಎಂದು ಅವರು ಈ ಸಂದರ್ಭದಲ್ಲಿ ಹರ್ಷ ವ್ಯಕ್ತಪಡಿಸಿದರು.
​ಸಮಾರಂಭದಲ್ಲಿ ಸಾವಿರಾರು ಭಕ್ತಾದಿಗಳು ಪಾಲ್ಗೊಂಡು ಗುರು ಸ್ಮರಣೆ ಮಾಡಿದರು.

 

 

 

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು