Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರಧಾನಿ ಮೋದಿ ಅವರ ಭೇಟಿ ಪಕ್ಷ ಬಲವರ್ಧನೆಗೆ ದೊರೆತ ಪ್ರೇರಣೆ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯಾಧ್ಯಕ್ಷ ಸ್ಥಾನದ ಜವಾಬ್ದಾರಿ ವಹಿಸಿಕೊಂಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ದೆಹಲಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಭೇಟಿಯಾಗಿ ಆಶೀರ್ವಾದ ಪಡೆದರು.


ವಿಕಸಿತ ಭಾರತ ನಿರ್ಮಾಣಕ್ಕಾಗಿ ಮಹಾಸಂಕಲ್ಪ ತೊಟ್ಟು ತಪಸ್ವಿ ಸಾಧಕರಂತೆ ದೇಶ ಕಟ್ಟುವ ಕಾಯಕದಲ್ಲಿ ತಮ್ಮನ್ನು ಸಮರ್ಪಿಸಿಕೊಂಡಿರುವ ಹೆಮ್ಮೆಯ ಪ್ರಧಾನಿ ಮೋದಿಯವರ ಕಾರ್ಯ ಶೈಲಿ ನಮ್ಮಂಥ ಕಾರ್ಯಕರ್ತರಿಗೆ ನಿತ್ಯ ಚೈತನ್ಯದ ಚಿಲುಮೆಯಾಗಿದೆ ಎಂದು ವಿಜಯೇಂದ್ರ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮೋದಿ ಅವರ ಆಶೀರ್ವಾದ ಮಾರ್ಗದರ್ಶನ ರಾಜ್ಯದಲ್ಲಿ ಪಕ್ಷ ಕಟ್ಟುವ ಕಾರ್ಯಕ್ಕೆ ಅದಮ್ಯ ಉತ್ಸಾಹ ತುಂಬಿದೆ, ಇಂದಿನ ಅವರ ಭೇಟಿಯ ಸಂದರ್ಭದ ಮಾತುಗಳು ಸಂಘಟನೆಯ ಬಲವೃದ್ಧಿಯ ಜೊತೆ ಜೊತೆಗೇ ರಾಷ್ಟ್ರ ಬಲಿಷ್ಠಗೊಳಿಸುವ ಮಹಾ ಕಾರ್ಯದಲ್ಲಿ ಯುವಜನರ ಸಹಭಾಗಿತ್ವ ನಿರೀಕ್ಷೆ ಮೀರಿ ತೊಡಗಿಸಿಕೊಳ್ಳುವಂತೆ ಕಾರ್ಯಕ್ರಮಗಳನ್ನು ರೂಪಿಸಲು ಪ್ರೇರಣೆ ನೀಡಿತು ಎಂದು ಅವರು ತಿಳಿಸಿದ್ದಾರೆ.

ಭಾರತದ ಆರ್ಥಿಕ, ಔದ್ಯೋಗಿಕ, ಶೈಕ್ಷಣಿಕ ಕ್ಷೇತ್ರಗಳ ಪ್ರಗತಿ ಜಾಗತಿಕ ಮಟ್ಟದಲ್ಲಿ ಅಗ್ರ ಸಾಧನೆಗೈಯಲು ಮಹತ್ವದ ಪಾತ್ರ ವಹಿಸಲಿದ್ದು ಈ ನಿಟ್ಟಿನಲ್ಲಿ ಕರ್ನಾಟಕದ ಕೊಡುಗೆ ಮುಂಚೂಣಿ ಸ್ಥಾನದಲ್ಲಿರುವಂತೆ ಕಾಳಜಿ ವಹಿಸಲು ಕೇಂದ್ರ ಸರ್ಕಾರದ ಯೋಜನೆಗಳು ಜನರಿಗೆ ತಲುಪುವಂತಾಗಬೇಕು, ಇದಕ್ಕಾಗಿ ಪಕ್ಷದ ಕಾರ್ಯಕರ್ತರು ಯೋಜಿತವಾಗಿ ತೊಡಗಿಸಿಕೊಳ್ಳಲು ಕಾರ್ಯಕ್ರಮ ರೂಪಿಸಲು ಪ್ರಧಾನಿಗಳು ಸೂಚಿಸಿದರು ಎಂದು ವಿಜಯೇಂದ್ರ ತಿಳಿಸಿದ್ದಾರೆ.

ಪ್ರಧಾನಿ ಮೋದಿ ಅವರ ಭೇಟಿಯ ಅಪೂರ್ವ ಕ್ಷಣಗಳು-ಪಕ್ಷ ಬಲವರ್ಧನೆಗೆ ದೊರೆತ ಪ್ರೇರಣೆಯ ಕಿರಣಗಳು ಎಂದು ಬಿಜೆಪಿ ರಾಜ್ಯಾಧ್ಯಕ್ಷರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ