Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹಾಲು ಉತ್ಪಾದನೆಗೆ ಆದ್ಯತೆ ನೀಡಿ

Advertisement
ಚಂದ್ರವಳ್ಳಿ ನ್ಯೂಸ್ ಹಿರಿಯೂರು :
ಸೊಂಡೆಕೆರೆ ಹಾಲು ಉತ್ಪಾದಕರ ಸಹಕಾರ ಸಂಘದ ಕೆಲವು ಲೋಪ ದೋಷಗಳನ್ನು ಸರಿಪಡಿಸಿಕೊಂಡು ಗ್ರಾಮದ ಸಹಕಾರದೊಂದಿಗೆ ಹಾಲು ಉತ್ಪಾದನೆ ಹೆಚ್ಚಿಸುವತ್ತ ಗಮನ ಹರಿಸಬೇಕು ಎಂದು ಶಿವಮೊಗ್ಗ
, ದಾವಣಗೆರೆ ಹಾಗೂ ಚಿತ್ರದುರ್ಗ ಹಾಲು ಒಕ್ಕೂಟ ಸಹಕಾರ ಸಂಘದ ನಿರ್ದೇಶಕ ಬಿಸಿ ಸಂಜೀವಮೂರ್ತಿ ತಿಳಿಸಿದರು.

ತಾಲೂಕಿನ ಐಮಂಗಲ ಹೋಬಳಿಯ ಸೊಂಡೆಕೆರೆ ಗ್ರಾಮದ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ 2024 ಮತ್ತು 2025 ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

 ಹಾಲು ಉತ್ಪಾದನೆಯಲ್ಲಿ ಜಿಲ್ಲೆಗೆ ಹಿರಿಯೂರು ಎರಡನೇ ಸ್ಥಾನ ಪಡೆದಿದೆ. ಇಂತಹ ಸಂದರ್ಭದಲ್ಲಿ ತಾವುಗಳು ಹೆಚ್ಚಿನ ಹಾಲು ಉತ್ಪಾದನೆ ಕಡೆ ಗಮನ ಹರಿಸಿ, ಸಂಘವನ್ನು ಲಾಭಾಂಶದತ್ತ ಕೊಂಡೊಯ್ಯುವ ಗಮನ ಹರಿಸಿ, ಟೆಸ್ಟರ್ ಮೂಲಕ ಹಾಲನ್ನು ಪರೀಕ್ಷೆ ಮಾಡಬೇಕು. ಯಾವುದೇ ಮುಲಾಜಿಲ್ಲದೆ ಗುಣಮಟ್ಟವಿಲ್ಲದ ಹಾಲನ್ನು ವಾಪಸ್ ಕಳುಹಿಸಿ, ಸಂಬಂಧಗಳನ್ನು ಬದಿಗೊತ್ತಿ, ಇಂದಿನಿಂದಲೇ ಟೆಸ್ಟಿಂಗ್ ಮಾಡಿ, ಕ್ವಾಲಿಟಿ ಹಾಲು ನೀಡಬೇಕು. ಸಂಘಕ್ಕೆ ಬೇಕಾದ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎಂದರು.

ಸಂಘದಲ್ಲಿ ಯಾವುದೇ ಕುಂದು ಕೊರತೆಗಳು ಹಾಗೂ ಸಮಸ್ಯೆಗಳು ಕಂಡುಬಂದಲ್ಲಿ ಶಿಮುಲ್ ನಿರ್ದೇಶಕರ ಗಮನಕ್ಕೆ ಅಥವಾ ಅಧಿಕಾರಿಗಳ ಗಮನಕ್ಕೆ ತಿಳಿಸಬೇಕು ಎಂದು ಕಿವಿಮಾತು ಹೇಳಿದರು.

ಮೂರ್ನಾಲ್ಕು ಜನರಿಂದ ಸಂಘವನ್ನು ಡ್ಯಾಮೇಜ್ ಆಗಬಾರದು. ಸಂಘದ ಕಾರ್ಯದರ್ಶಿಗಳು ಹಾಗೂ ಆಡಳಿತ ಮಂಡಳಿಯವರು ಎಚ್ಚರಿಕೆ ವಹಿಸಬೇಕು. ಸಂಘವ ಉಳಿಯಬೇಕಾದರೆ  ಕೆಲಸದಲ್ಲಿ ಬದಲಾವಣೆ ಆಗಬೇಕು ಎಂದರು.

ಸೊಂಡೆಕೆರೆ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷೆ ಎಲ್. ಕೆಂಚಮ್ಮ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷೆ ಭಾಗ್ಯಮ್ಮಶಿಮುಲ್ ಮಾರ್ಗ ವಿಸ್ತರಣಾಧಿಕಾರಿ ನಯಾಜ್ ಬೇಗ್, ಕಾರ್ಯದರ್ಶಿ ಚೈತ್ರ, ಸಂಘದ ನಿರ್ದೇಶಕರಾದ ಲಕ್ಷ್ಮೀ, ರೇಣುಕಮ್ಮ, ಶೃತಿ, ರತ್ನಮ್ಮ, ಮಂಜುಳಾ, ಮುಖಂಡರಾದ ಮಂಜಣ್ಣ, ನಾಗಣ್ಣ ಹಾಗೂ ಗ್ರಾಮಸ್ಥರಿದ್ದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ