ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ದೇವನಹಳ್ಳಿಯ ರೆಸಾರ್ಟ್‌ನಲ್ಲಿ OMR ಶೀಟ್ ತಿದ್ದಿದ ಅಧಿಕಾರಿಯನ್ನು ದೆಹಲಿಯಿಂದ ಯಾಕೆ ಕರೆದುಕೊಂಡು ಬಂದು ಕೂರಿಸಿಕೊಂಡಿದ್ದಿರಿ ಎಂದು ಹೆಚ್.ಡಿ. ಕುಮಾರಸ್ವಾಮಿ ಅವರು ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಸಿಐಡಿ ಅಧಿಕಾರಿಗಳ ಮುಂದೆ ಹಾಜರುಪಡಿಸಿ ನಾಟಕವಾಡಿದ್ದೀರಿ ಹಾಗೂ 24 ಅಭ್ಯರ್ಥಿಗಳಿಗೆ ನಿಯಮಬಾಹಿರವಾಗಿ ಕೆಲಸ ಕೊಟ್ಟಿದ್ದೀರಲ್ಲವೇ ಎಂದು ಪ್ರಶ್ನಿಸಿದ ಅವರು, "ನನ್ನ ಬಗ್ಗೆ ಮಾತನಾಡುವ ಮುನ್ನ ಸರಿಯಾದ ಮಾಹಿತಿ ಪಡೆದುಕೊಂಡು ಮಾತನಾಡಿ" ಎಂದು ಖಾರವಾಗಿ ಉತ್ತರಿಸಿದರು.
"ನೀವು ಪ್ರಸ್ತುತ ಗೃಹ ಸಚಿವರಾಗಿದ್ದೀರಿ, ನಿರುದ್ಯೋಗಿ ಯುವಕರ ಭವಿಷ್ಯದ ಜೊತೆ ಚೆಲ್ಲಾಟವಾಡಬೇಡಿ. ಅವರ ಹಿತವನ್ನು ಬಯಸಿ ನಾನು ಮಾತನಾಡುತ್ತಿದ್ದೇನೆಯೇ ಹೊರತು, ಪ್ರಿಯಾಂಕ್ ಖರ್ಗೆ ಅವರ ಮೇಲೆ ನನಗೆ ಯಾವುದೇ ರೀತಿಯ ಅಸೂಯೆ ಇಲ್ಲ" ಎಂದು ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.




