Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕ್ರೀಡಾಕೂಟದಲ್ಲಿ ವಿಜೇತರಾದವರಿಗೆ ಅ-1 ರಂದು ಬಹುಮಾನ ವಿತರಣೆ

Advertisement
 ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
"
ವಿಶ್ವ ಹಿರಿಯ ನಾಗರಿಕರ ದಿನಾಚರಣೆ-2024 ಅಂಗವಾಗಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖಾ ವತಿಯಿಂದ ರಾಜ್ಯ ಮಟ್ಟದ ಕ್ರೀಡಾಕೂಟವನ್ನು ಸೆಪ್ಟೆಂಬರ್ 23 ರಂದು ಬೆಂಗಳೂರಿನ ಶ್ರೀ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ಏರ್ಪಡಿಸಿ ಯಶಸ್ವಿಯಾಗಿ ನೆರವೇರಿಸಲಾಗಿರುತ್ತದೆ.

ಕ್ರೀಡಾಕೂಟದಲ್ಲಿ ವಿಜೇತರಾದ 60-70 ವರ್ಷದ ಮಹಿಳೆಯರಿಗೆ ಮ್ಯೂಸಿಕಲ್ ಚೇರ್ ಮತ್ತು 60-69 ವರ್ಷದ ಪುರುಷರಿಗೆ ಬಿರುಸಿನ ನಡಿಗೆ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಮ್ಯೂಸಿಕಲ್ ಚೇರ್ ಸ್ಪರ್ಧೆಯಲ್ಲಿ ಶ್ರೀಮತಿ ವಿಜಯ.ಎಸ್.ಜಿ. ಮಂಡ್ಯ ಜಿಲ್ಲೆ ಪಿ.ಎನ್.ಅಂಬಿಕಾ ಮಹೇಶ್ವರ,

ತುಮಕೂರು ಜಿಲ್ಲೆ ಮತ್ತು ಟಿ.ವಿ ಕೌಸಲ್ಯಬಾಯಿ, ರಾಮನಗರ ಜಿಲ್ಲೆ ಇವರುಗಳು ಕ್ರಮವಾಗಿ ಪ್ರಥಮ, ದ್ವಿತೀಯ ಮತ್ತು ತೃತೀಯ ಸ್ಥಾನಗಳನ್ನು ಪಡೆದಿರುತ್ತಾರೆ. ಬಿರುಸಿನ ನಡಿಗೆ ಸ್ಪರ್ಧೆಯಲ್ಲಿ ವಿಠಲ ಶೆಟ್ಟಿಗಾರ್ ಬಿನ್ ಮಂಜುನಾಥ್ ಶೆಟ್ಟಿಗಾರ್, ಉಡುಪಿ ಜಿಲ್ಲೆ ಅಗಜಾನನ ಮೂರ್ತಿ, ಚಿಕ್ಕಬಳ್ಳಾಪುರ ಜಿಲ್ಲೆ ಮತ್ತು ಅಬ್ದುಲ್ ಹಲೀಂ, ದಕ್ಷಿಣ ಕನ್ನಡ ಜಿಲ್ಲೆ ಇವರುಗಳು ಕ್ರಮವಾಗಿ ಪ್ರಥಮ, ದ್ವಿತೀಯ ಮತ್ತು ತೃತೀಯ ಸ್ಥಾನಗಳನ್ನು ಪಡೆದಿರುತ್ತಾರೆ.

ರಾಜ್ಯ ಮಟ್ಟದ ಕ್ರೀಡೆಯಲ್ಲಿ ವಿಜೇತರಾದವರಿಗೆ ಅಕ್ಟೋಬರ್ 1 ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯುವ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಸಮಾರಂಭದ ದಿನ ಬಹುಮಾನಗಳನ್ನು ವಿತರಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

 



Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ