Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯಮಟ್ಟದ ಮಹಿಳಾ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಗೆ ಚಾಲನೆ

Advertisement
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ :
ಇಲ್ಲಿನ ಆರ್.ಎಲ್.ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದ ಕ್ರೀಡಾಂಗಣದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯ -ವಿಟಿಯು ರಾಜ್ಯ ಮಟ್ಟದ ಮಹಿಳಾ ಬಾಲ್‌ ಬ್ಯಾಡ್ಮಿಂಟನ್‌ ಚಾಂಪಿಯನ್‌ಷಿಪ್‌ 2026-27ಗೆ ಸೋಮವಾರ ಚಾಲನೆ ನೀಡಲಾಯಿತು.

ಕಾರ್ಯಕ್ರಮ ಉದ್ಘಾಟಿಸಿದ ಶ್ರೀ ದೇವರಾಜ ಅರಸ್‌ ಶಿಕ್ಷಣ ಸಂಸ್ಥೆ ಟ್ರಸ್ಟ್‌ನ ಉಪಾಧ್ಯಕ್ಷ ಜೆ.ರಾಜೇಂದ್ರ ಮಾತನಾಡಿ, ಭಾರತೀಯ ನೆಲಮೂಲದ ಕ್ರೀಡೆಗಳಲ್ಲಿ ಒಂದಾಗಿರುವ ಬಾಲ್‌ಬ್ಯಾಡ್ಮಿಂಟನ್‌ ಕೌಶಲ್ಯಾಧಾರಿತ ಕ್ರೀಡೆಯಾಗಿದ್ದು, ದೈಹಿಕ ಮತ್ತು ಮಾನಸಿಕ ಸಾಮರ್ಥ್ಯ ವೃದ್ದಿಗೆ ಸಹಕಾರಿಯಾಗಿದೆ. ವಿಟಿಯು ರಾಜ್ಯ ಮಟ್ಟದ ಅಂತರ ಕಾಲೇಜು ಕ್ರೀಡಾಕೂಟದಲ್ಲಿ ರಾಜ್ಯದ ವಿವಿದೆಡೆಗಳಿಂದ 11 ತಂಡಗಳು ಆಗಮಿಸಿದ್ದು, ಉತ್ತಮ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಕ್ರೀಡಾಪಟುಗಳು ಸೋಲು-ಗೆಲವುಗಳನ್ನು ಸಮಾನವಾಗಿ ಸ್ವೀಕರಿಸಿ ಕ್ರೀಡಾಸ್ಪೂರ್ತಿಯೊಂದಿಗೆ ಆಟವಾಡಬೇಕು. ಕ್ರೀಡೆ ಎಲ್ಲರನ್ನು ಬೆಸೆಯುವ ವೇದಿಕೆಯಾಗಬೇಕು ಎಂದು ತಿಳಿಸಿದರು.

ಬೆಂಗಳೂರು ಉತ್ತರ ವಿಭಾಗದ ದೈಹಿಕ ಶಿಕ್ಷಣ ನಿರ್ದೇಶಕ ಮಲ್ಲಿಕಾರ್ಜುನಗೌಡ ಬಿ.ಪಾಟೀಲ್‌ ಮಾತನಾಡಿ, ಆಟದ ನಿಯಮಾವಳಿಗಳನ್ನು ಪಾಲನೆ ಮಾಡುವುದು ಎಲ್ಲ ಕ್ರೀಡಾಪಟುಗಳ ಮೊದಲ ಆದ್ಯತೆಯಾಗಬೇಕು. ಶಿಸ್ತು ಮತ್ತು ಕ್ರೀಡಾಸ್ಪೂರ್ತಿಯೊಂದಿಗೆ ಪಂದ್ಯಾವಳಿಯಲ್ಲಿ ಉತ್ತಮ ಪ್ರದರ್ಶನ ನೀಡಬೇಕು ಎಂದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಕಾರ್ಯದರ್ಶಿ ಕೆ.ಜಿ.ಹನುಮಂತರಾಜು, ಪ್ರಾಂಶುಪಾಲ ಡಾ.ಪಿ.ವಿಜಯಕಾರ್ತಿಕ್, ಉಪಪ್ರಾಂಶುಪಾಲ ಡಾ.ಶಿವಪ್ರಸಾದ್, ಡೀನ್‌ ಡಾ.ಶ್ರೀನಿವಾಸರೆಡ್ಡಿ, ಮಾನವ ಸಂಪನ್ಮೂಲ ನಿರ್ದೇಶಕ ಬಾಬುರೆಡ್ಡಿ, ದೈಹಿಕ ಶಿಕ್ಷಣ ನಿರ್ದೇಶಕ ದಾದಾಫೀರ್‌, ಸಲಹೆಗಾರ ಯೋಗೀಶ್‌, ವಿವಿಧ ವಿಭಾಗಗಳ ಮುಖ್ಯಸ್ಥರು, ಪಾಲ್ಗೊಂಡಿದ್ದರು.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ