Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೆಗಳು ಲಭ್ಯ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಇ-ಆಸ್ತಿ ತಂತ್ರಾಶದಲ್ಲಿ ನಗರ ಸ್ಥಳೀಯ ಸಂಸ್ಥೆಗಳ ಆಸ್ತಿಗಳಿಗೆ ಮನೆಯಲ್ಲೇ ಕುಳಿತು ಸುಲಭವಾಗಿ ಇ-ಖಾತಾವನ್ನು ಯಾವುದೇ ಮಧ್ಯವರ್ತಿಗಳು ಹಾಗೂ ಅಧಿಕಾರಿಗಳ ಸಂಪರ್ಕಿಸದೇ ಪಡೆದುಕೊಳ್ಳಲು ಸರ್ಕಾರ ಅವಕಾಶ ಕಲ್ಪಿಸಿದೆ.


ಇ-ಆಸ್ತಿ ತಂತ್ರಾಂಶದೊಂದಿಗೆ ಕಾವೇರಿ 2.0 ಆಧಾರ್ (ಇ-ಕೆವೈಸಿ) ಮತ್ತು ಬೆಸ್ಕಾಂ ತಂತ್ರಾಂಶಗಳು ಸಂಯೋಜನೆಗೊಂಡಿದ್ದು, ಆಸ್ತಿ ಮಾಲೀಕರು ನೈಜ ದಾಖಲೆಗಳನ್ನು ನೇರವಾಗಿ ಪಡೆದುಕೊಳ್ಳಬಹುದಾಗಿದೆ. ಈ ಸಂಬಂದ ಆಸ್ತಿ ಕಣಜದಲ್ಲಿನ ಮಾಹಿತಿ ಆಧಾರದ ಮೇಲೆ ಕರಡು ಇ-ಖಾತಾವನ್ನು ಪ್ರಕಟಿಸಲಾಗಿದೆ. ಈ ಮಾಹಿತಿಗಳ ಬಗ್ಗೆ ತರಕರಾರಿದ್ದಲ್ಲಿ ಸಾರ್ವಜನಿಕರು ಇ-ಆಸ್ತಿ ತಂತ್ರಾಂಶದಲ್ಲಿ ಹೆಚ್ಚಿನ ಮಾಹಿತಿಯನ್ನು ನೇರವಾಗಿ ನಮೂದಿಸಬಹುದು. ಮಾಹಿತಿಯ ನಿಖರತೆಯನ್ನು ನಗರ ಸ್ಥಳೀಯ ಸಂಸ್ಥೆಗಳು ಪರಿಶೀಲಿಸಿ, ಅನುಮೋದಿಸಲಾಗುವುದು. ಅಂತಿಮ ಇ-ಖಾತಾವನ್ನು ಮನೆಗಳಲ್ಲೇ ಕುಳಿತು ಪಡೆಯಬಹುದು.

ಸಾರ್ವಜನಿಕರು ಸರ್ಕಾರ ಅಥವಾ ನಿಗಮ ಮಂಡಳಿಗಳಿಂದ ನೀಡಲಾದ ಹಕ್ಕು ಪತ್ರ, ಮಂಜೂರಾತಿ ಪತ್ರ ಕಂದಾಯ ಇಲಾಖೆಯಿಂದ 94ಸಿಸಿ ಅಡಿ ನೀಡಲಾದ ಹಕ್ಕುಪತ್ರಗಳು, ಸಕ್ಷಮ ಪ್ರಾಧಿಕಾರದಿಂದ ವಿನ್ಯಾಸ ನಕ್ಷೆ ಅನುಮೋದನೆಯಾದ ದೃಢೀಕೃತ ಪ್ರತಿ ಮತ್ತು ನಿವೇಶನಗಳ ಬಿಡುಗಡೆ ಪತ್ರ, ಮಾಲೀಕರ ಭಾವಚಿತ್ರ ಮತ್ತು ಆಧಾರ್, ಆಸ್ತಿ ತೆರಿಗೆ ಎಸ್.ಎ.ಎಸ್ ಚಲನ್ ಸಂಖ್ಯೆ, ಸ್ವ

ತ್ತಿನ ಕ್ರಯ ಅಥವಾ ನೋಂದಾಯಿತ ಪತ್ರ ಸಂಖ್ಯೆ, ವಿದ್ಯುತ್ ಆರ್.ಸಿ.ಸಿ. ಸಂಖ್ಯೆ, ಖಾಲಿ ನಿವೇಶನಗಳಿಗೆ ವಿದ್ಯುತ್ ಆರ್.ಸಿ.ಸಿ ಅಗತ್ಯವಿಲ್ಲ, ಸ್ವತ್ತಿನ ಛಾಯಾಚಿತ್ರ, ಇ.ಸಿ.ನಮೂನೆ 15/16 ದಾಖಲೆಗಳೊಂದಿಗೆ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಿ ನಿಗಧಿತ ಕಾಲಾವಧಿಯೊಳಗೆ ಇ-ಖಾತಾ ಪಡೆಯಬಹುದು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 7259585959 ಅಥವಾ ವೆಬ್‍ಸೈಟ್‍ನ್ನು www.eaasthi.karnataka.gov.in  ಸಂಪರ್ಕಿಸಬಹುದು. ಇದರ ಸದುಪಯೋಗ ಪಡೆದುಕೊಳ್ಳುವಂತೆ ಪ್ರಕಟಣೆ ತಿಳಿಸಿದೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ