Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೋಲಿ, ಕಬ್ಬಲಿಗ, ಅಂಬಿಗ, ಬೆಸ್ತ ಜಾತಿಗಳ ಎಸ್ಟಿಗೆ ಸೇರಿಸಲು ಪ್ರಸ್ತಾವನೆ ಸ್ವೀಕೃತ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕೋಲಿ
, ಕಬ್ಬಲಿಗ, ಅಂಬಿಗ, ಬೆಸ್ತ ಜಾತಿಗಳನ್ನು ಈಗಾಗಲೇ ಕರ್ನಾಟಕದ ಪರಿಶಿಷ್ಟ ಪಂಗಡದ ಪಟ್ಟಿಯಲ್ಲಿರುವ ಜಾತಿಗಳಾದ ಟೋಕರೆ ಕೋಲಿ, ಕೋಯಾ ಕೋಲಿಡೋರ, ಕೋಲ್ಲಾ, ಜಾತಿಗಳ ಪರ್ಯಾಯ ಪದಗಳೆಂದು ಪರಿಗಣಿಸಲು ಹೊಸದಾಗಿ ಕುಲಶಾಸ್ತ್ರೀಯ ಅಧ್ಯಯನವನ್ನು ಕೈಗೊಳ್ಳಲು ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ ಮೈಸೂರು ರವರಿಂದ ದಿನಾಂಕ:19.02.2026 ಪ್ರಸ್ತಾವನೆ ಸ್ವೀಕೃತವಾಗಿದ್ದು, ಸರ್ಕಾರದ ಹಂತದಲ್ಲಿ ಪರಿಶೀಲಿಸಲಾಗುತ್ತಿದೆ ಎಂದು ಸಭಾನಾಯಕ ಹಾಗೂ ಸಣ್ಣ ನೀರಾವರಿ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಭೋಸರಾಜು ಅವರು ತಿಳಿಸಿದರು.

ರಾಜ್ಯ ಸರ್ಕಾರ ಈ ಹಿಂದೆ 2010 ರಲ್ಲಿ ಹೊರಡಿಸಿರುವ ಆದೇಶದಲ್ಲಿ ರಾಜ್ಯದಲ್ಲಿನ ಗಂಗಾಮತ ಮತ್ತು ಅದರ ಉಪ ಜಾತಿಗಳ (ಕೋಲಿ, ಕಬ್ಬಲಿಗ, ಬೆನ್ನ ಅಂಬಿಗ ಮತ್ತು ಬಾರ್ಕಿ ಒಳಗೊಂಡಂತೆ) ರಾಜ್ಯದ ಪರಿಶಿಷ್ಟ ಪಂಗಡದ ಪಟ್ಟಿಗೆ ಸೇರಿಸಲು ಕನ್ನಡ ವಿಶ್ವವಿದ್ಯಾಲಯ ಹಂಪಿ ಇವರ ಮೂಲಕ ಕುಲಶಾಸ್ತ್ರೀಯ ಅಧ್ಯಯನ ಕೈಗೊಂಡು ವರದಿ ಪಡೆದು ಸಲ್ಲಿಸಲು ಆದೇಶಿಸಲಾಗಿತ್ತು ಎಂದರು.

ಮುಖ್ಯಮಂತ್ರಿಗಳ ಪರವಾಗಿ ವಿಧಾನ ಪರಿಷತ್ತಿನ ಸದಸ್ಯರಾದ ತಿಪ್ಪಣಪ್ಪ ಕಮಕನೂರ ಅವರ  ಗಮನ ಸೆಳೆಯುವ ಸೂಚನೆಗೆ ಉತ್ತರಿಸಿದ ಸಚಿವರು ಸರ್ಕಾರದ ಆದೇಶದನ್ವಯ ಗಂಗಾಮತ ಮತ್ತು ಅದರ ಉಪ ಜಾತಿಗಳ ಕುಲಶಾಸ್ತ್ರೀಯ ಅಧ್ಯಯನವನ್ನು ಕನ್ನಡ ವಿಶ್ವವಿದ್ಯಾಲಯ, ಹಂಪಿ ಇವರ ಮೂಲಕ ಕೈಗೊಂಡು ಅಂತಿಮ ವರದಿಯನ್ನು 2014 ರಲ್ಲಿ ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ ಮೈಸೂರು ರವರ ಮೂಲಕ ಸರ್ಕಾರಕ್ಕೆ ಸಲ್ಲಿಸಲಾಗಿತ್ತು. ರಾಜ್ಯ ಸರ್ಕಾರದ ಶಿಫಾರಸ್ಸಿನೊಂದಿಗೆ ಕೇಂದ್ರ ಬುಡಕಟ್ಟು, ವ್ಯವಹಾರಗಳ ಮಂತ್ರಾಲಯ ನವದೆಹಲಿ ಇವರಿಗೆ ದಿನಾಂಕ:03/03/2014 ರಲ್ಲಿ, ಮೊದಲ ಬಾರಿಗೆ ಕಳುಹಿಸಲಾಗಿರುತ್ತದೆ.

ಕರ್ನಾಟಕ ರಾಜ್ಯದಲ್ಲಿ ಗಂಗಾಮತ ಮತ್ತು ಅದರ ಉಪ ಜಾತಿಗಳನ್ನು ಪರಿಶಿಷ್ಟ ಪಂಗಡದ ಪಟ್ಟಿಗೆ ಸೇರಿಸುವ ಬಗ್ಗೆ ಸಲ್ಲಿಸಲಾದ ಪ್ರಸ್ತಾವನೆಗೆ ಕೇಂದ್ರ ರಿಜಿಸ್ಟ್ರಾರ್ ಜನರಲ್ ಆಫ್ ಇಂಡಿಯಾ ರವರು ಪ್ರಸ್ತಾಪಿಸಿರುವ ಅಂಶಗಳ ಬಗ್ಗೆ ಪರಿಶೀಲಿಸಿ ಸಮರ್ಥನೆ/ಸ್ಪಷ್ಟಿಕರಣ/ದಾಖಲಾತಿಗಳೊಂದಿಗೆ ವರದಿಗಳನ್ನು ದಿನಾಂಕ:16.02.2018, 23.07.2018 ಮತ್ತು 02.02.2021ರಲ್ಲಿ ಸಲ್ಲಿಸಲಾಗಿರುತ್ತದೆ.

ಅಂತಿಮವಾಗಿ ಕೇಂದ್ರ ರಿಜಿಸ್ಟ್ರಾರ್ ಜನರಲ್ ಆಫ್ ಇಂಡಿಯಾ ರವರು ದಿನಾಂಕ:30.10.2023ರ ಪತ್ರದಲ್ಲಿ ಪ್ರಸ್ತಾಪಿಸಿರುವ ಅಂಶಗಳ ಬಗ್ಗೆ ಪರಿಶೀಲಿಸಿ ಮತ್ತೊಮ್ಮೆ ಸೂಕ್ತ ಸಮರ್ಥನೆ/ಸೃಷ್ಟಿಕರಣ/ದಾಖಲಾತಿಗಳೊಂದಿಗೆ ವರದಿಯನ್ನು ಸಲ್ಲಿಸುವಂತೆ ಕುಲಸಚಿವರು, ಕನ್ನಡ ವಿಶ್ವ ವಿದ್ಯಾಲಯ, ಹಂಪಿ ರವರಿಗೆ ಕೋರಲಾಗಿದ್ದು, ಕುಲಸಚಿವರು, ಕನ್ನಡ ವಿಶ್ವ ವಿದ್ಯಾಲಯ, ಹಂಪಿ ರವರಿಂದ ವರದಿ ಬಂದ ತಕ್ಷಣ ಸರ್ಕಾರಕ್ಕೆ ಮಾಹಿತಿಯನ್ನು ಸಲ್ಲಿಸಲಾಗುವುದು ಎಂದು ಹೇಳಿದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ