Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Education News

ಸರ್ಕಾರಿ ಶಾಲೆಗಳನ್ನು ಮುಚ್ಚುವುದನ್ನು ವಿರೋಧಿಸಿ ಪ್ರತಿಭಟನೆ

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಎಐಡಿಎಸ್ಓ ವಿದ್ಯಾರ್ಥಿ ಸಂಘಟನೆ ನೇತೃತ್ವದಲ್ಲಿ ಕೆಪಿಎಸ್ ಮ್ಯಾಗ್ನೆಟ್ ಶಾಲೆ ಹೆಸರಿನಲ್ಲಿ ಚಿತ್ರದುರ್ಗ ನಗರದ ಸ್ವಾಮಿ ವಿವೇಕಾನಂದ ನಗರ ಹಾಗೂ ಜಟ್ ಪಟ್ ನಗರದ ಸರ್ಕಾರಿ ಶಾಲೆ ಮುಚ್ಚುವುದನ್ನು ವಿರೋಧಿಸಿ ವಿದ್ಯಾರ್ಥಿಗಳ ಪೋಷಕರ ಪ್ರತಿಭಟನೆ ನಡೆಸಲಾಯಿತು.


ಎಐಡಿಎಸ್ಓ ರಾಜ್ಯ ಕಛೇರಿ ಕಾರ್ಯದರ್ಶಿ ಮಹಾಂತೇಶ ಅವರು ಮಾತನಾಡಿ ಸ್ವಾಮಿ ವಿವೇಕಾನಂದರ ನಗರದ ಸರ್ಕಾರಿ ಶಾಲೆಯಲ್ಲಿ 60ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಹಾಗೆ ಜಟ್ ಪಟ್ ನಗರದ ಸರ್ಕಾರಿ ಶಾಲೆಯಲ್ಲಿ 80ಕ್ಕೂ ಹೆಚ್ಚು ಬಡ ಕೂಲಿ ಕಾರ್ಮಿಕರು. ಈ ಶಾಲೆಗಳನ್ನು ಮುಚ್ಚಿದರೆ, ಇಲ್ಲಿರುವ ಬಡ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿದೆ.

ಕೆಪಿಎಸ್ ಮ್ಯಾಗ್ನೆಟ್ ಹೆಸರಿನಲ್ಲಿ ಸರ್ಕಾರಿ ಶಾಲೆಗಳನ್ನು ಮುಚ್ಚುವುದು ಬಿಟ್ಟು, ಸರ್ಕಾರಿ ಶಾಲೆಗಳಿಗೆ ಮೂಲಭೂತ ಸೌಕರ್ಯ ಒದಗಿಸಿ, ಅಭಿವೃದ್ಧಿಗೆ ಮುಂದಾಗಬೇಕು ವಿನಃ ಸರ್ಕಾರಿ ಶಾಲೆಗಳನ್ನು ಮುಚ್ಚಿ ಬಡವರ ಮಕ್ಕಳನ್ನು ಅಜ್ಞಾನಕ್ಕೆ ತಳುತ್ತಿದೆ ಸರ್ಕಾರ. ಕೆಪಿಎಸ್ ಮ್ಯಾಗ್ನೆಟ್ ಯೋಜನೆಯಿಂದ ದೊಡ್ಡ ದೊಡ್ಡ ಶ್ರೀಮಂತರ ಮನೆತನಕ್ಕೆ ಅನುಕೂಲಕರವಾದ ನೀತಿ ಇದು. ಈ ರಾಜ್ಯದ ಶಿಕ್ಷಣ ಮಂತ್ರಿಗಳು ಬರೀ ಮಾಧ್ಯಮಗಳ ಮುಂದೆ ಶಾಲೆ ಮುಚ್ಚುವುದಿಲ್ಲ ಅಂತ ಬರೀ ಬಾಯಿ ಮಾತಿನಲ್ಲಿ ಹೇಳುತ್ತಿದ್ದಾರೆ. ಆದರೆ ಲಿಖಿತ ರೂಪದಲ್ಲಿ ಆದೇಶ ಹೊರಡಿಸುತ್ತಿಲ್ಲ. 

 ಮಹಾತ್ಮ ಜ್ಯೋತಿಬಾ ಫುಲೆ, ಸಾವಿತ್ರಿ ಬಾಯಿ ಅವರು ಶಾಲೆಗಳು ಆರಂಭಿಸಿದಾಗ ಅವರಿಗೆ ಸಾಕಷ್ಟು ಅವಮಾನಗಳನ್ನು ಎದುರಿಸಿದ್ದಾರೆ. ಆದರೂ ಕೂಡ ಅವರು ಎಲ್ಲಾ ವರ್ಗದ ಜನರಿಗೆ ಶಿಕ್ಷಣ ಸಿಗಬೇಕು ಹಾಗೂ ಹೆಣ್ಣು ಮಕ್ಕಳಿಗೆ ಶಾಲೆ ಇರಬೇಕು ಎಂದು ಹೋರಾಡಿದರು. ಆದರೆ ರಾಜ್ಯ ಸರ್ಕಾರವು ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾಗಿದೆ. ಆದ್ದರಿಂದ ಇಲ್ಲಿನ ಜನಗಳು ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿ ರಚಿಸಿಕೊಂಡು, ಒಗ್ಗಟ್ಟಾಗಿ ಹೋರಾಡಬೇಕು ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಎಐಡಿಎಸ್ಓ ಜಿಲ್ಲಾ ಸಂಚಾಲಕರು ಕೆ.ಈರಣ್ಣ, ಎಐಯುಟಿಯುಸಿ ಜಿಲ್ಲಾ ಕಾರ್ಮಿಕ ಮುಖಂಡರು ರವಿಕುಮಾರ್, ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾ ಮುಖಂಡರು ಗಿರಿಜಮ್ಮ ಮತ್ತು ತಿಪ್ಪೇಸ್ವಾಮಿ, ನೇತ್ರಾವತಿ, ಸರಸ್ವತಿ, ಈ.ಶೇಖರ್, ಕೆ.ವೆಂಕನಾಯ್ಕ , ಗಾಯತ್ರಿ ಮತ್ತೀತರರು ಭಾಗವಹಿಸಿದ್ದರು.

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು