Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ತೆರಿಗೆ ಹಣ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
"ಕರುನಾಡ ಜನರ ತೆರಿಗೆ ಹಣ ಲೂಟಿಗೆ ಮುಂದಾಗಿರುವ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ" ತೆರಿಗೆ ಹಣವನ್ನು ದುರುಪಯೋಗ ಮಾಡುತ್ತಿರುವ ಕಾಂಗ್ರೆಸ್‌ ಸರ್ಕಾರದ ವಿರುದ್ಧ ವಿಧಾನ ಸೌಧದ ಕೆಂಗಲ್ ಹನುಮಂತಯ್ಯ ಪ್ರತಿಮೆ ಬಳಿ ಬಿಜೆಪಿ ಹಾಗೂ ಜೆಡಿಎಸ್ ಶಾಸಕರೊಂದಿಗೆ ಪ್ರತಿಭಟನೆ ನಡೆಸಲಾಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರವು ಗ್ಯಾರಂಟಿ ಅನುಷ್ಠಾನ ಸಮಿತಿಗಳನ್ನು ರಚಿಸಿ ಈ ಸಮಿತಿಗೆ ಸಂಬಳ ನೀಡುವ ಮೂಲಕ ರಾಜ್ಯದ ಜನರ ತೆರಿಗೆ ಹಣವನ್ನು ಪೋಲು ಮಾಡುತ್ತಿರುವುದು ನಾಚಿಗೆಗೇಡಿನ ಸಂಗತಿ.

ವಿಧಾನಸಭಾ ಕ್ಷೇತ್ರ, ಜಿಲ್ಲೆ, ರಾಜ್ಯಕ್ಕೆ ಒಬ್ಬರೆಂಬಂತೆ ನೇಮಿಸಿದ್ದು ರಾಜ್ಯ ಅಧ್ಯಕ್ಷರಿಗೆ ಲಕ್ಷಾಂತರ ವೇತನ, ಕ್ಯಾಬಿನೆಟ್ ದರ್ಜೆ ನೀಡಿರುವುದು ಅತ್ಯಂತ ಖಂಡನೀಯ. ಅಂಗನವಾಡಿ ಕಾರ್ಯಕರ್ತೆಯರು, ಶಿಕ್ಷಕರ ಗೌರವಧನ ಹೆಚ್ಚಿಸಲು ಸಾಧ್ಯವಾಗುತ್ತಿಲ್ಲ, ಬಿಸಿಯೂಟ ಅಡುಗೆ ಮಾಡುವವರು, ದಾದಿಯರು, ಆಶಾ ಕಾರ್ಯಕರ್ತರ ಗೌರವಧನ ಹೆಚ್ಚಳ ಮಾಡದ ಈ ಸರ್ಕಾರದ ಜನವಿರೋಧಿ ನಿಲುವುಗಳನ್ನು ಖಂಡಿಸಲಾಯಿತು.

ಈ ಸಂದರ್ಭದಲ್ಲಿ ಪ್ರತಿಪಕ್ಷ ನಾಯಕ ಆರ್.‌ಅಶೋಕ್‌, ವಿಧಾನ ಪರಿಷತ್‌ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾದ ಸುರೇಶ್ ಬಾಬು, ಜೆಡಿಎಸ್ ವಿಧಾನ ಪರಿಷತ್‌ನ ನಾಯಕ ಭೋಜೆಗೌಡ, ಸೇರಿದಂತೆ ಬಿಜೆಪಿ ಮತ್ತು ಜೆಡಿಎಸ ಪಕ್ಷಗಳ ಶಾಸಕರುಗಳು, ವಿಧಾನ ಪರಿಷತ್ ಸದಸ್ಯರು ಉಪಸ್ಥಿತರಿದ್ದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ