Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಗೌರವ ಧನ ಹೆಚ್ಚಳಕ್ಕೆ ಆಗ್ರಹಿಸಿ ಬಿಸಿಯೂಟ ತಯಾರಕರ ಪ್ರತಿಭಟನೆ

 ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಬಿಸಿಯೂಟ ತಯಾರಕರು ಮತ್ತು ಸಿಬ್ಬಂದಿ ತಮ್ಮ ಗೌರವಧನ ಹೆಚ್ಚಳ
, ಸಾಮಾಜಿಕ ಭದ್ರತೆ ಹಾಗೂ ಕಾಯಂ ನೌಕರರನ್ನಾಗಿ ಪರಿಗಣಿಸುವಂತೆ ಒತ್ತಾಯಿಸಿ ತಾಲ್ಲೂಕು ಕಚೇರಿ ಪ್ರತಿಭಟನೆ ನಡೆಸಿದರು.

 ಬಿಸಿಯೂಟ ತಯಾರಕರನ್ನು ಸರ್ಕಾರಿ ನೌಕರರೆಂದು ಅಧಿಕೃತವಾಗಿ ಗುರುತಿಸಬೇಕು. ಹಾಗೂ ಕನಿಷ್ಠ ವೇತನ ಜಾರಿಗೊಳಿಸಬೇಕು. 202223ರಿಂದ ನಿವೃತ್ತರಾದ ತಯಾರಕರಿಗೆ ಬಾಕಿ ಇರುವ ಹಣವನ್ನು ಬಿಡುಗಡೆ ಮಾಡಬೇಕು. ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾದ ಕಾರಣ ಕೆಲಸ ಕಳೆದುಕೊಂಡವರಿಗೆ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.

Advertisement

ಅಲ್ಲದೆ ಮೊಟ್ಟೆ ಸುಲಿಯುವ ಕೆಲಸಕ್ಕೆ ಪ್ರತಿ ಮೊಟ್ಟೆಗೆ 1 ನೀಡಬೇಕು. ಬಾಕಿ ಇರುವ ಮೊಟ್ಟೆ ಸುಲಿಯುವ ಹಣವನ್ನು ತಕ್ಷಣ ಪಾವತಿಸಬೇಕು. 100 ವಿದ್ಯಾರ್ಥಿಗಳಿರುವ ಶಾಲೆಗಳಲ್ಲಿ ಇಬ್ಬರ ಬದಲು ಮೂರು ಬಿಸಿಯೂಟ ತಯಾರಕರನ್ನು ನೇಮಿಸಬೇಕು. ಪ್ರತಿ ತಿಂಗಳು ಗೌರವಧನವನ್ನು ಸಮಯಕ್ಕೆ ಸರಿಯಾಗಿ ಬ್ಯಾಂಕ್ ಖಾತೆಗೆ ಜಮಾ ಮಾಡಬೇಕು ಎಂದು ಆಗ್ರಹಿಸಿದರು.

ಬಿಸಿಯೂಟ ತಯಾರಕರಿಗೆ 10 ಲಕ್ಷ ಮರಣ ಪರಿಹಾರ, ನಿವೃತ್ತ ತಯಾರಕರ ಪಿಂಚಣಿ ಹಾಗೂ ಇತರೆ ಸೌಲಭ್ಯಗಳನ್ನು ಹೆಚ್ಚಿಸುವುದು, ಸರ್ಕಾರಿ ಶಾಲೆಗಳ ಬಿಸಿಯೂಟ ಸಿಬ್ಬಂದಿಯನ್ನು ಕೆಲಸದಿಂದ ತೆಗೆದುಹಾಕದೆ ಸೇವೆಯಲ್ಲಿ ಮುಂದುವರಿಸುವುದು ಹಾಗೂ ಬಿಸಿಯೂಟ ತಯಾರಕರಿಗಾಗಿ ಕಲ್ಯಾಣ ಮಂಡಳಿ ರಚಿಸಿ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಕಲ್ಪಿಸುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ಎಐಟಿಯುಸಿ ತಾಲೂಕು ಅಧ್ಯಕ್ಷ ಮಹೇಶ್‌ಕುಮಾರ್ ರಾಜಘಟ್ಟ, ಎಐಟಿಯುಸಿ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಶಾಂತರಾಜ ಜೈನ್, ಭಾನುಪ್ರಕಾಶ್, ಬಿಸಿಯೂಟ ತಯಾರಕರ ಸಂಘದ ಅಧ್ಯಕ್ಷೆ ಮಾಲಾ, ಕಾರ್ಯದರ್ಶಿ ಅಂಜಲಿ ಹಾಗೂ ತಾಲೂಕಿನ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಬಿಸಿಯೂಟ ತಯಾರಕರು ಭಾಗವಹಿಸಿದ್ದರು.

 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು