Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿವಿಧ ಬೇಡಿಕೆ ಈಡೇರಿಕೆಗಾಗಿ ಕ್ವಾರಿ ಕಾರ್ಮಿಕರಿಂದ ಪ್ರತಿಭಟನೆ 

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ನಾಲ್ಕು ಹೊಸ ಕಾರ್ಮಿಕ ಸಂಹಿತೆಗಳನ್ನು ಹಿಂದಕ್ಕೆ ಪಡೆಯುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕರ್ನಾಟಕ ರಾಜ್ಯ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಸಂಘಟನೆಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿ ಉಪ ವಿಭಾಗಾಧಿಕಾರಿ ಮೂಲಕ ದೇಶದ ಪ್ರಧಾನಿ ಹಾಗೂ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಸಲ್ಲಿಸಲಾಯಿತು.


ಕಾರ್ಮಿಕರ ರಕ್ಷಣೆಗಾಗಿ ಸಂಸತ್ತು ೧೯೨೩ ರಿಂದ ೧೯೯೬ ರ ನಡುವೆ ಜಾರಿಗೆ ತಂದ ೪೪ ಕಾರ್ಮಿಕ ಕಾನೂನುಗಳನ್ನು ಪುನಃ ಸ್ಥಾಪಿಸಬೇಕು. ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಾಯ್ದೆ ಮತ್ತು ೧೯೯೬ ಕಟ್ಟಡ ಹಾಗು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಸೆಸ್ ಕಾಯ್ದೆ ೧೯೯೬ ನ್ನು ಪುನಃ ಸ್ಥಾಪಿಸಿ ಪೂರ್ಣವಾಗಿ ಜಾರಿಗೆ ತರಬೇಕು. ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ತಮ್ಮ ಪ್ರಾದೇಶಿಕ ಪರಿಸ್ಥಿತಿಗಳಿಗೆ ಸೂಕ್ತವಾದ ಪ್ರತ್ಯೇಕ ಕಾರ್ಮಿಕ ಕಾನೂನುಗಳನ್ನು ರೂಪಿಸುವ ಹಕ್ಕನ್ನು ಉಳಿಸಿಕೊಳ್ಳಲು ಅವಕಾಶ ನೀಡಬೇಕು. ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ರೂ. ೩೬ ಸಾವಿರ ಮಾಸಿಕ ವೇತನ ನಿಗಧಿಪಡಿಸಿ ಸಮಾನ ಕೆಲಸಕ್ಕೆ ಸಮಾನ ವೇತನ ಖಾತರಿಪಡಿಸಬೇಕು.

೬೦ ವರ್ಷ ತುಂಬಿದ ನಂತರ ತಿಂಗಳಿಗೆ ಆರು ಸಾವಿರ ರೂ. ಪಿಂಚಣಿ ನೀಡಬೇಕು. ಬಿಲ್ಡ್‌ರ್‌ಗಳಿಂದ ಸಂಗ್ರಹಿಸಲಾದ ಕಲ್ಯಾಣ ಸೆಸ್‌ನ್ನು ಶೇ.೨ ಕ್ಕೆ ಹೆಚ್ಚಿಸಬೇಕು. ಸರ್ಕಾರವು ಕಲ್ಯಾಣ ಮಂಡಳಿಗೆ ಸಮಾನವಾದ ಮೊತ್ತ ಕೊಡಬೇಕು. ನಿರ್ಮಾಣ ವಲಯದ ಮಹಿಳಾ ಕಾರ್ಮಿಕರಿಗೆ ಕಾನೂನು ಪ್ರಕಾರ ಆರು ತಿಂಗಳ ವೇತನ ಸಹಿತ ರಜೆ ನೀಡಬೇಕು. ಮನೆ, ನಿವೇಶನ ಹೊಂದಿರದ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ವಸತಿ ಕಲ್ಪಿಸಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಕಾಂ.ಸಿ.ವೈ.ಶಿವರುದ್ರಪ್ಪ, ಕಾಂ.ಜಿ.ಸಿ.ಸುರೇಶ್‌ಬಾಬು, ಕಾಂ.ಜಾಫರ್‌ಶರೀಫ್, ಕಾಂ.ಎನ್.ಸಿ.ಕುಮಾರಸ್ವಾಮಿ, ಕಾಂ.ಟಿ.ಆರ್.ಉಮಾಪತಿ, ಕಾಂ.ಪೆನ್ನಯ್ಯ, ಕಾಂ.ಕೆ.ಇ.ಸತ್ಯಕೀರ್ತಿ, ಕಾಂ.ಎಸ್.ಸಿ.ಕುಮಾರ್, ಕಾಂ.ಬಿ.ರಾಜಣ್ಣ ಇನ್ನು ಅನೇಕರು ಪ್ರತಿಭಟನೆಯಲ್ಲಿ ಹಾಜರಿದ್ದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ