Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Education News

ಸರ್ಕಾರಿ ಆಸ್ಪತ್ರೆಗಳ ಖಾಸಗಿ ಕರಣದ ವಿರುದ್ಧ ವಿವಿಧ ಸಂಘಟನೆಗಳ ಪ್ರತಿಭಟನೆ

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ :
ಸರ್ಕಾರ ರಾಜ್ಯದ 8 ಜಿಲ್ಲಾ ಆಸ್ಪತ್ರೆಗಳನ್ನು ಖಾಸಗಿ (ಪಿಪಿಪಿ) ಸಹಭಾಗಿತ್ವದಲ್ಲಿ ಆರೋಗ್ಯ ಸೇವೆಯನ್ನು ಖಾಸಗೀಕರಣ ಮಾಡಲು ಮುಂದಾಗಿದ್ದು  (ತುಮಕೂರು
, ವಿಜಯಪುರ, ಕೋಲಾರ, ವಿಜಯನಗರಬೆಂಗಳೂರು ಗ್ರಾಮಾಂತರ, ದಾವಣಗೆರೆ, ದಕ್ಷಿಣ-ಕನ್ನಡ, ಮತ್ತು ಉಡುಪಿ), ಇದು ಜನ ವಿರೋಧಿ, ಸಂವಿಧಾನ ವಿರೋಧಿಯಾಗಿದ್ದು ರಾಜ್ಯ ಸರ್ಕಾರ ಈ ಕೂಡಲೆ  ಸರ್ಕಾರಿ ಆಸ್ಪತ್ರೆಗಳ ಖಾಸಗೀಕರಣವನ್ನು ಸಂಪೂರ್ಣವಾಗಿ ಕೈಬಿಡಬೇಕು , ಆರೋಗ್ಯ ಸೇವೆ ನಾಗರೀಕರ ಮೂಲಭೂತ ಹಕ್ಕಾಗಬೇಕು ಎಂದು ಒತ್ತಾಯಿಸಿ ಹಲವಾರು ಸಂಘಟನೆಗಳ ಸಹಭಾಗಿತ್ವದಲ್ಲಿ ರಾಜ್ಯಾದ್ಯಂತ ಜಾಥಾ ನಡೆಯುತ್ತಿದೆ.

ಇಂದು ದೊಡ್ಡಬಳ್ಳಾಪುರ ನಗರದ ತಾಲ್ಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು ಉಪವಿಭಾಗಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಪ್ರತಿಭಟನೆ ವೇಳೆ ಮಾತನಾಡಿದ ಮುಖಂಡರುಆರೋಗ್ಯ ಸೇವೆಯನ್ನು ಖಾಸಗಿಯವರಿಗೆ ಕೊಟ್ಟರೆ, ಸರ್ಕಾರಿ ಆಸ್ಪತ್ರೆಗಳನ್ನು ಅವಲಂಬಿಸಿರುವ ಬಡ ಜನರ ಆರೋಗ್ಯವನ್ನು ಕಾಪಾಡಬೇಕಾದ ಸರ್ಕಾರವೆ ಬಡವರನ್ನು ಕೊಂದಂತೆ ಆಗುತ್ತದೆ.  ಜೊತೆಗೆ ಜನರ ಆರೋಗ್ಯ ಸೇವೆ ಕಲ್ಪಿಸುವುದರಿಂದ ಸರ್ಕಾರ ಕೈ ತೊಳೆದುಕೊಳ್ಳುತ್ತಿದೆ. ಇದು ಆಶಕ್ತರಿಗೆ ಸೂಕ್ತ ಚಿಕಿತ್ಸೆಯ ನಿರಾಕರಣೆ ಮತ್ತು ಚಿಕಿತ್ಸೆ ದುಬಾರಿಯಾಗುದಕ್ಕೆ ದಾರಿ ಮಾಡಿಕೊಡುತ್ತದೆ ಎಂದು ಆರೋಪಿಸಿದರು.

ವಿಜಯಪುರದಲ್ಲಿ ಈ ಖಾಸಗೀಕರಣವನ್ನು ಕೈಬಿಡುವುದಾಗಿ ಭರವಸೆ ನೀಡಿದ್ದೀರಾ. ಇದನ್ನು ನಾವು ಸ್ವಾಗತ ಮಾಡುತ್ತೇವೆ. ಹೀಗೆ ಎಲ್ಲಾ ಜಿಲ್ಲೆಗಳಲ್ಲೂ ಸಹ ಖಾಸಗೀಕರಣವನ್ನು ಕೈ ಬಿಡಬೇಕು ಹಾಗೂ ಮುಂಬರುವ ಬಜೆಟ್ ನಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜಿಗೆ ಅನುಧಾನ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.

ಸ್ವಾತಂತ್ರ್ಯ ಬಂದು 78 ವರ್ಷಗಳು ಕಳೆದರೂ ಕರ್ನಾಟಕ ಸೇರಿದಂತೆ ದೇಶದ ಹಲವಾರು ರಾಜ್ಯಗಳಲ್ಲಿ ಆರೋಗ್ಯದ ಹಕ್ಕು ಇನ್ನೂ ಜಾರಿಯಾಗಿಲ್ಲ, ದೇಶದಲ್ಲಿ ಪ್ರತಿ ವರ್ಷ ಆರೋಗ್ಯ ಚಿಕಿತ್ಸೆಯ ಖರ್ಚುಗಳಿಂದಾಗಿ 10 ಕೋಟಿ ಜನರು ಬಡತನಕ್ಕೆ ತಳ್ಳಲ್ಪಡುತ್ತಿದ್ದಾರೆ. ಆರೋಗ್ಯ ಸೇವೆ ಹಾಗು ಚಿಕಿತ್ಸೆ ವೆಚ್ಚಗಳು ದಿನದಿಂದ ದಿನಕ್ಕೆ ದುಬಾರಿಯಾಗುತ್ತಿದ್ದು, ಖರ್ಚು ಭರಿಸಲಾಗದೆ ಎಷ್ಟೋ ಜನರು ಸಾವನ್ನಪ್ಪುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ, ನಮ್ಮ ಜಿಲ್ಲಾಸ್ಪತ್ರೆಗಳು ಮತ್ತು ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಬಲಪಡಿಸುವ ಬದಲು, ಸರ್ಕಾರ ಆರೋಗ್ಯ ಸೇವೆಯನ್ನು ಖಾಸಗೀಕರಣಗೊಳಿಸಲು ಚಿಂತನೆ ನಡೆಸಿದೆ. ಇದನ್ನು ಖಂಡಿಸಲು ಹಾಗೂ ನಮ್ಮ ಆರೋಗ್ಯ ಹಕ್ಕನ್ನು ಪಡೆಯಲು ನಾವು ರಾಜ್ಯಾದ್ಯಂತ ಇಂದು ಬೀದಿಗೆ ಇಳಿಯಬೇಕಾಗಿದೆ ಎಂದರು.

ಬೇರು ಬೆವರುರು ಸಾಂಸ್ಕೃತಿಕ ಕಲಾ ಬಳಗ- ಕರ್ನಾಟಕದ ಚಂದ್ರಶೇಖರ್ ನೇತೃತ್ವದ ಕಲಾತಂಡದಿಂದ ಜಾಗೃತಿ ಗೀತ ಗಾಯನ, ಮತ್ತು ಬೀದಿ ನಾಟಕ  ನಡೆಯಿತು.

 ಹಕ್ಕೊತ್ತಾಯಗಳು-
1. ಈ ಕೂಡಲೇ ಸರ್ಕಾರಿ ಆಸ್ಪತ್ರೆ ಖಾಸಗೀಕರಣ (ಪಿಪಿಪಿ) ಮಾಡುವ ಯೋಜನೆ ಕೈಬಿಡಬೇಕು. ಯಾವುದೇ ಕಾರಣಕ್ಕೂ ಸರ್ಕಾರಿ ಆಸ್ಪತ್ರೆ ಖಾಸಗಿಯವರಿಗೆ ಹಸ್ತಾಂತರ ಮಾಡಬಾರದು. ಹಾಗೂ ಸಾರ್ವಜನಿಕ ಆರೋಗ್ಯ ಸೇವೆಯನ್ನು ಬಲಪಡಿಸಬೇಕು.


  1. ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಪ್ರತಿಯೊಬ್ಬರಿಗೂ ಗುಣಮಟ್ಟ ಔಷಧಗಳು ಉಚಿತವಾಗಿ ಲಭ್ಯವಾಗಬೇಕು. ಸರ್ಕಾರಿ ಆಸ್ಪತ್ರೆ ವೈದ್ಯರು ಯಾವುದೇ ಕಾರಣಕ್ಕೂ ಔಷಧಗಳನ್ನು ಹೊರಗಡೆ ಖರೀದಿಸಲು ಚೀಟಿಯನ್ನು ಬರೆದು ಕೊಡಬಾರದು

  2. ಕರ್ನಾಟಕದಲ್ಲಿ ಆರೋಗ್ಯ ಹಕ್ಕಿನ ಕಾಯ್ದೆಯನ್ನು ಜಾರಿಗೆ ತರಬೇಕು: ನಮಗೆ ಆರೋಗ್ಯ ರಕ್ಷಣೆಯನ್ನು ಮೂಲಭೂತ ಹಕ್ಕನ್ನಾಗಿ ಮಾಡುವ ಕಾನೂನು ಬೇಕಾಗಿದೆ, ಯಾವುದೇ ಸರ್ಕಾರವು ಹಿಂತೆಗೆದುಕೊಳ್ಳಬಹುದಾದ "ಯೋಜನೆ"ಯಲ್ಲ

  3. ಖಾಸಗಿ ವಲಯದಲ್ಲಿ ಆಸ್ಪತ್ರೆಗಳ ಶುಲ್ಕವನ್ನು ನಿಯಂತ್ರಿಸಬೇಕು


ಪ್ರತಿಭಟನೆಯಲ್ಲಿ ಪ್ರಗತಿಪರ ಸಂಘಟನೆಗಳ ಮುಖಂಡರಾದ

 ಸಾರ್ವತ್ರಿಕ ಆರೋಗ್ಯ ಆಂದೋಲನ ಕರ್ನಾಟಕದ ಡಾ. ಸ್ವಾತಿ, ಅಕ್ಷಯ್, ಜನ ಚಳುವಳಿಗಳ  ರಾಷ್ಟ್ರೀಯ ಒಕ್ಕೂಟ ಮುಖಂಡರಾದ ವೀರ ಸಂಗ ಮಿತ್ರ, ಕನ್ನಡ ಪಕ್ಷದ ಮುಖಂಡ ಸಂಜೀವ್ ನಾಯಕ್, ಪ್ರಾಂತ ರೈತ ಸಂಘದ ಆರ್ ಚಂದ್ರ ತೇಜಸ್ವಿ, ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ.ಎ.ವೆಂಕಟೇಶ್, ಡಾಬಸ್ ಪೇಟೆ ಕಾರ್ಮಿಕ ಮುಖಂಡರಾದ ಎನ್ ಕೆ ಬಸವರಾಜು, ನೆಲಮಂಗಲ ಕಾರ್ಮಿಕ ಮುಖಂಡರಾದ ಅಂಜುಮ್ ಖಾನ್, ವಿನಯ್ ಕುಮಾರ್, ಡಿಎಸ್ಎಸ್ (ಅಂಬೇಡ್ಕರ್ ವಾದ) ಮುಖಂಡ ಪಿ.ಎಂ. ಚಿನ್ನಸ್ವಾಮಿ, ಎಂ ವೆಂಕಟೇಶ್ಹೊಸಕೋಟೆ ಕಾರ್ಮಿಕ ಮುಖಂಡ ಎಂ ವೆಂಕಟರಾಜು, ಚನ್ನರಾಯಪಟ್ಟಣದ ರೈತ ಮುಖಂಡ ಕಾರಹಳ್ಳಿ ಶ್ರೀನಿವಾಸ್, ಸಿಪಿಐಎಂ ಮುಖಂಡರಾದ ಎಸ್ ರುದ್ರರಾಧ್ಯ, ಯುವ ಸಂಚಲನದ ಚಿದಾನಂದ, ಕಾರ್ಮಿಕ ಮುಖಂಡರಾದ ರೇಣುಕಾರಾಧ್ಯ, ಅನಿಲ್ ಗುಪ್ತ, ಸಾಧಿಕ್ ಪಾಷಾ, ನೇಕಾರರ ಹಿತರಕ್ಷಣಾ ಸಮಿತಿ ಮುಖಂಡ ಎಂ ಚೌಡಯ್ಯ ಮುಂತಾದವರು ಪಾಲ್ಗೊಂಡಿದ್ದರು.

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು