Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿವಿಧ ಬೇಡಿಕೆ ಈಡೇರಿಕೆಗೆ ಸೀಡ್ಸ್ ಕೆಮಿಕಲ್ಸ್ ಫರ್ಟಿಲೈಜರ್‍ಸ್ ಮತ್ತು ಪೆಸ್ಟಿಸೈಡ್ಸ್ ಮಾರಾಟಗಾರರ ಪ್ರತಿಭಟನೆ

Advertisement

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ : 
ಡಿಎಪಿ ಮತ್ತು ಯೂರಿಯಾ ಗೊಬ್ಬರದ ಜೊತೆಗೆ ಒತ್ತಾಯವಾಗಿ ಬೇರೆ ಉತ್ಪಾದನೆಗಳನ್ನು ಲಿಂಕ್‌ಗೊಳಿಸುವುದನ್ನು ನಿಲ್ಲಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸೀಡ್ಸ್ ಕೆಮಿಕಲ್ಸ್ ಫರ್ಟಿಲೈಜರ್‍ಸ್ ಮತ್ತು ಪೆಸ್ಟಿಸೈಡ್ಸ್ ಮಾರಾಟಗಾರರ ಸಂಘದಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು.

ಎಲ್ಲಾ ರಸಗೊಬ್ಬರಗಳ ಎಂಆರ್‌ಪಿ. ಮೇಲೆ ಎಂಟು ಪರ್ಸೆಂಟ್ ಡೀಲರ್ ಲಾಭಾಂಶವಿರುವಂತೆ ನೋಡಿಕೊಳ್ಳಬೇಕು. ಗೊಬ್ಬರ, ಬೀಜ, ಕೀಟನಾಶಕ ಸ್ಯಾಂಪಲ್ ಕಳಪೆ ಬಂದಾಗ ಕಂಪನಿಯವರ ಮೇಲೆ ಮಾತ್ರ ಕೇಸ್ ಹಾಕಿ ಡೀಲರ್‌ಗಳನ್ನು ಸಾಕ್ಷಿಯಾಗಿ ಪರಿಗಣಿಸಬೇಕು. ಡೀಲರ್‌ಗಳಿಂದ ಸ್ಯಾಂಪಲ್ ಡ್ರಾ ಮಾಡಿದಾಗ ಸ್ಯಾಂಪಲ್ಲಿನ ಹಣವನ್ನು ಕಡ್ಡಾಯವಾಗಿ ಡೀಲರ್‌ಗಳಿಗೆ ಪಾವತಿಸಬೇಕು.

ಅಧಿಕಾರಿಗಳು ತಪಾಸಣೆಗಾಗಿ ಅಂಗಡಿಗಳಿಗೆ ಭೇಟಿ ಕೊಟ್ಟ ನಂತರ ಮಾಧ್ಯಮಗಳಿಗೆ ಹೇಳಿಕೆಗಳನ್ನು ಕೊಡುವಾಗ ದಾಳಿ ಎನ್ನುವ ಪದ ಮತ್ತು ಅಂಗಡಿಗಳ ಫೋಟೋಗಳನ್ನು ಬಳಸಬಾರದು. ಎಫ್‌ಐಡಿ. ಮುಖಾಂತರ ಯೂರಿಯಾ ಗೊಬ್ಬರ ಮಾರಾಟ ಮಾಡುವ ಆದೇಶವನ್ನು ಸ್ವಾಗತಿಸುತ್ತೇವೆ. ನೀರಾವರಿ ಮತ್ತು ಒಣ ಬೇಸಾಯಗಾರರಿಗೆ ಬೆಳೆಗಳ ಆಧಾರದ ಮೇಲೆ ರಸಗೊಬ್ಬರ ದೊರೆಯುವಂತೆ ನೋಡಿಕೊಳ್ಳಬೇಕು. ಎಫ್‌ಐಡಿ ಮುಖಾಂತರ ಡಿಎಪಿ ಮತ್ತು ಯೂರಿಯಾ ಮಾರಾಟ ಮಾಡುವುದನ್ನು ಹಿಂಗಾರು ಬೆಳೆಗಳವರೆಗೆ ಕಡ್ಡಾಯಗೊಳಿಸಬೇಕು. ಬೀಜ ಮಾರಾಟ ಯ್ಯಾಪನ್ನು ಮಾರಾಟ ಸ್ನೇಹಿಯಾಗಿ ರೂಪಿಸಬೇಕೆಂದು ಪ್ರತಿಭಟನಾಕಾರರು ಜಿಲ್ಲಾಡಳಿತವನ್ನು ಒತ್ತಾಯಿಸಿದರು.

ಜಗದೀಶ್, ಸಿದ್ದಲಿಂಗಮೂರ್ತಿ, ಮಂಜುನಾಥ್, ಬಸವರಾಜ್, ಹರ್ಷ, ಅಶೋಕ್, ಗಿರೀಶ್, ತಿಪ್ಪೇಸ್ವಾಮಿ, ಚಿದಾನಂದ, ಮನೋಜ್‌ಕುಮಾರ್ ಇನ್ನು ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣದಿಂದ ಮಾತ್ರ ಜೀವನದಲ್ಲಿ ಬದಲಾವಣೆ ಕಂಡುಕೊಳ್ಳಲು ಸಾಧ್ಯ-- ನಿರುದ್ಯೋಗಿ ಯುವಕ-ಯುವತಿಯರಿಗೆ ಉಚಿತ ಟೈಲರಿಂಗ್ ತರಬೇತಿ ಹಾಗೂ ಯಂತ್ರೋಪಕರಣಗಳ ವಿತರಣೆಗೆ ಅರ್ಜಿ ಆಹ್ವಾನಪ್ರತಿಷ್ಠಿತ ಶಾಲೆಗಳ ಪ್ರವೇಶಕ್ಕೆ ಅರ್ಹತಾ ಪರೀಕ್ಷೆ: 321 ವಿದ್ಯಾರ್ಥಿಗಳು ಹಾಜರುನಿರುದ್ಯೋಗಿಗಳಿಗೆ ರುಡ್‍ಸೆಟ್  ಸಂಸ್ಥೆಯಿಂದ ಉದ್ಯೋಗ ತರಬೇತಿಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನಅದ್ದೂರಿಯಾಗಿ ನಡೆದ ಉಜ್ಜನಿ ಬೀರಲಿಂಗೇಶ್ವರ ಸ್ವಾಮಿ ಜಾತ್ರಾ ಮಹೋತ್ಸವಭಾರತದ ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ರಾಯಭಾರಿ ಸ್ವಾಮಿ ರಂಗನಾಥಾನಂದಜೀಡಾ. ಅಂಬೇಡ್ಕರ್ ಅವರ ಜಯಂತಿ ಕೇವಲ ಒಂದು ಜಾತಿ ಧರ್ಮಕ್ಕೆ ಮೀಸಲಾಗಬಾರದುಶ್ರೀ ಶ್ರೀ ರವಿಶಂಕರ್ ಗುರೂಜಿ ಅವರ 70ನೇ ಜನ್ಮೋತ್ಸವಕ್ಕೆ ಸಚಿವ ಎಂ.ಬಿ. ಪಾಟೀಲ್‌ಗೆ ಆಮಂತ್ರಣಜನರ ಅಹವಾಲು ಆಲಿಸಿದ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್: ದಾವಣಗೆರೆಯಲ್ಲಿ ‘ಜನತಾದರ್ಶನ’