LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

108 ಎಕರೆ ಸರ್ಕಾರಿ ಜಮೀನು ನೀಡುವಂತೆ ಒತ್ತಾಯಿಸಿ ಪ್ರತಿಭಟನೆ

Advertisement
Advertisement

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ಔಷಧೀಯ ಸಸ್ಯಗಳನ್ನು ಬೆಳೆಸಿ ಪಾರಂಪರಿಕ ವೈದ್ಯ ಪದ್ದತಿಯನ್ನು ಜೀವಂತವಾಗಿಡುವ ಉದ್ದೇಶದಿಂದ ೧೦೮ ಎಕರೆ ಸರ್ಕಾರಿ ಜಮೀನು ನೀಡುವಂತೆ ಅಖಿಲ ಕರ್ನಾಟಕ ಪಾರಂಪರಿಕ ವೈದ್ಯ ಪರಿಷತ್ ಹಾಗೂ ಸಂಘಗಳ ಒಕ್ಕೂಟ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

ಕರ್ನಾಟಕ ರಾಜ್ಯದಲ್ಲಿ ಅನೇಕ ತಲೆಮಾರುಗಳಿಂದ ಪಾರಂಪರಿಕ ವೈದ್ಯರುಗಳು ನಿಸ್ವಾರ್ಥವಾಗಿ ಸೇವೆ ಸಲ್ಲಿಸುತ್ತಿದ್ದು, ಔಷಧೀಯ ಸಸ್ಯಗಳ ಬಳಕೆ ಹಾಗೂ ಪ್ರಕೃತಿ ಚಿಕಿತ್ಸಾ ಪದ್ದತಿಗಳನ್ನು ಅನುಸರಿಸಿಕೊಂಡು ಬರುತ್ತಿದ್ದಾರೆ. ಗ್ರಾಮೀಣ ಭಾಗಗಳಲ್ಲಿ ಜನರಿಗೆ ಸುಲಭವಾಗಿ ಈ ಚಿಕಿತ್ಸೆ ನೀಡಲು ಸಹಕಾರಿಯಾಗಲಿದೆ. ಹಿರಿಯೂರು ತಾಲ್ಲೂಕಿನ

ಸಮೀಪ ಕಾಲುವೆಯ ಅಕ್ಕಪಕ್ಕದಲ್ಲಿ ೭೫೦ ಎಕರೆ ಸರ್ಕಾರಿ ಜಾಗವಿದ್ದು, ನಮಗೆ ಅಗತ್ಯವಿರುವ ೧೦೮ ಎಕರೆ ಜಮೀನು ನೀಡಿ ಪಾರಂಪರಿಕ ವೈದ್ಯಕೀಯ ಅಭಿವೃದ್ದಿ ಕೇಂದ್ರವನ್ನು ಸ್ಥಾಪಿಸಲು ನೆರವಾಗುವಂತೆ ಪಾರಂಪರಿಕ ವೈದ್ಯರುಗಳು ಜಿಲ್ಲಾಡಳಿತವನ್ನು ಒತ್ತಾಯಿಸಿದರು.

ಅಳಿವಿನಂಚಿನಲ್ಲಿರುವ ಅಪರೂಪದ ಹಾಗೂ ಅಮೂಲ್ಯ ಔಷಧೀಯ ಸಸ್ಯಗಳು, ಗಿಡಮೂಲಿಕೆಗಳು, ನಾರು, ಬೇರುಗಳು, ಹಾಗೂ ವನಮೂಲಿಕೆಗಳ ಸಂರಕ್ಷಣೆ, ಅಭಿವೃದ್ದಿ ಮತ್ತು ಜೀವವೈವಿದ್ಯ ಉದ್ಯಾನ ನಿರ್ಮಾಣ. ಆಯುಷ್ ಪಾರಂಪರಿಕ ವೈದ್ಯಕೀಯ ಹಾಗೂ ನ್ಯಾಚುರೋಪಥಿ ಆಧಾರಿತ ಚಿಕಿತ್ಸಾ ಕೇಂದ್ರಗಳ ಸ್ಥಾಪನೆ.

ಪಾರಂಪರಿಕ ವೈದ್ಯರು, ವಿದ್ಯಾರ್ಥಿಗಳು ಹಾಗೂ ಸಂಶೋಧಕರಿಗಾಗಿ ತರಬೇತಿ, ಕೌಶಲ್ಯಾಭಿವೃದ್ದಿ ಮತ್ತು ಸಂಶೋಧನಾ ಸಂಸ್ಥೆ ಆರಂಭಿಸುವುದು. ಔಷಧೀಯ ಸಸ್ಯಗಳ ಬೆಳವಣಿಗೆ, ಸಂಸ್ಕರಣೆ, ಗುಣಮಟ್ಟ ಪರೀಕ್ಷೆ, ಔಷಧ ತಯಾರಿಕೆ ಹಾಗೂ ಮೌಲ್ಯವರ್ಧನೆಗೆ ಅಗತ್ಯ ಮೂಲಭೂತ ಸೌಕರ್ಯ ಕಲ್ಪಿಸುವುದು ಒಳಗೊಂಡಂತೆ ಇನ್ನಿತರೆ ಬೇಡಿಕೆಗಳನ್ನು ಈಡೇರಿಸುವಂತೆ ಪಾರಂಪರಿಕ ವೈದ್ಯರು ವಿನಂತಿಸಿದರು.

ಕರ್ನಾಟಕ ಪಾರಂಪರಿಕ ವೈದ್ಯ ಪರಿಷತ್ ಹಾಗೂ ಸಂಘಗಳ ಒಕ್ಕೂಟದ ಅಧ್ಯಕ್ಷ ಶರಣಪ್ಪ ಬಳ್ಳಾರಿ, ಉಪಾಧ್ಯಕ್ಷರುಗಳಾದ ತಿಪ್ಪಣ್ಣಸಾಲಿಖಾನಿ ಹಾವೇರಿ, ಹೆಚ್.ಡಿ.ಪೂಜಾರ್, ಪ್ರಧಾನ ಕಾರ್ಯದರ್ಶಿ ವಿಜಯಕುಮಾರ್, ಕಾರ್ಯದರ್ಶಿ ಕುಮಾರಸ್ವಾಮಿ, ಖಜಾಂಚಿ ಡಿ.ಟಿ.ರವಿಕುಮಾರ್ ಸೇರಿದಂತೆ ನಾಡಿನ ನಾನಾ ಭಾಗಗಳ ಪಾರಂಪರಿಕ ವೈದ್ಯರುಗಳು ಪ್ರತಿಭಟನೆಯಲ್ಲಿದ್ದರು.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೆಲ್ಲುಗುದಿಗೆ ಸರ್ಕಾರಿ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಭಕ್ತಿ ಭಾವದಿಂದ ನಡೆದ ನಾಗ ಪಂಚಮಿ ಆಚರಣೆಬ್ಯಾಂಕ್ ಸರ್ಕಲ್ ಫುಟ್ ಪಾತ್ ಒತ್ತುವರಿ:ಸ್ಥಳೀಯರ ಆಕ್ರೋಶಪೌರಕಾರ್ಮಿಕನ ಪುತ್ರನಿಗೆ ಒಲಿದ ಸಚಿವ ಸ್ಥಾನನರಕಸದೃಶ ಬದುಕು - ಚರಂಡಿ ನೀರೆಲ್ಲಾ ರಸ್ತೆಗೆ!, ಸ್ವಚ್ಛತೆ ಇಲ್ಲದ ಊರು, ರೋಗಗಳ ತವರು!ಆ.22 ರಾಜ್ಯ ಮಟ್ಟದ ಕನ್ನಡ ಕರೋಕೆ ಸ್ಪರ್ಧೆ, ಆ.23ರಂದು ಗಾಯನ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆಪೋಷಕರ ಸಹಕಾರದಿಂದ ಸರ್ಕಾರಿ ಶಾಲೆಗಳ ಅಭಿವೃದ್ಧಿ : ರೈತ ಮುಖಂಡ ಮಹೇಶ್ವರಪ್ಪಪರಿಸರ ಮತ್ತು ಆಧ್ಯಾತ್ಮದ ಸಮನ್ವಯದ 'ನಾಗರ ಪಂಚಮಿ':ಬೆಂಗಳೂರಿನಲ್ಲಿ ಏಷ್ಯಾದ ಅತಿ ದೊಡ್ಡ 'ಕ್ವಾಂಟಮ್ ಫೌಂಡ್ರಿ' ಉದ್ಘಾಟಿಸಿದ ಸಚಿವ ಪ್ರಿಯಾಂಕ್ ಖರ್ಗೆಕಾಂಗ್ರೆಸ್ ಗ್ಯಾರಂಟಿ ಹೆಸರಲ್ಲಿ ಕನ್ನಡಿಗರ ಜೇಬಿಗೆ ಕನ್ನ: ಜೆಡಿಎಸ್ ತೀವ್ರ ಆಕ್ರೋಶ