Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಒಳ ಮೀಸಲಾತಿ ಜಾರಿಗೊಳಿಸುವಂತೆ ಆಗ್ರಹಿಸಿ ಪ್ರತಿಭಟನೆ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ಉದ್ಯೋಗ ನೇಮಕದಲ್ಲಿ ಒಳ ಮೀಸಲಾತಿಯನ್ನು ಜಾರಿಗೊಳಿಸುವಂತೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ದಾದಾ ಸಾಹೇಬ್ ಎನ್.ಮೂರ್ತಿ ಸ್ಥಾಪಿತ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಿ ಉಪ ವಿಭಾಗಾಧಿಕಾರಿ ಮೂಲಕ ರಾಷ್ಟ್ರಪತಿ
, ಪ್ರಧಾನ ಮಂತ್ರಿ, ರಾಜ್ಯಪಾಲರು ಹಾಗೂ ಮುಖ್ಯಮಂತ್ರಿ ಇವರುಗಳಿಗೆ ಮನವಿ ಸಲ್ಲಿಸಲಾಯಿತು.

ಪ್ರವಾಸಿ ಮಂದಿರದಿಂದ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಪ್ರತಿಭಟನಾಕಾರರು ಒಳ ಮೀಸಲಾತಿ ಜಾರಿಗೊಳಿಸದ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ದ ಧಿಕ್ಕಾರಗಳನ್ನು ಕೂಗಿದರು.

ಒಳ ಮೀಸಲಾತಿ ಅನ್ವಯಿಸದೆ ರಾಜ್ಯ ಸರ್ಕಾರ ೫೬,೪೩೨ ಹುದ್ದೆಗಳ ನೇಮಕಾತಿಗೆ ಸುತ್ತೋಲೆ ಹೊರಡಿಸಿರುವುದನ್ನು ಕೂಡಲೆ ಹಿಂದಕ್ಕೆ ಪಡೆದು ಶೇ.೧೫ ರಷ್ಟು ಮೀಸಲಾತಿಯನ್ವಯ ನೇಮಕಾತಿ ಮಾಡಿಕೊಳ್ಳಬೇಕು. ವಿಶ್ವವಿದ್ಯಾಲಯಗಳನ್ನು ಒಂದು ಘಟಕವನ್ನಾಗಿಸಿ ಉದ್ಯೋಗ ನೇಮಕಾತಿಯನ್ನು ಕೈಬಿಡಬೇಕು. ಅಲೆಮಾರಿ, ಅರೆಅಲೆಮಾರಿಗಳಿಗೆ ಶೇ.೧ ರಷ್ಟು ಪ್ರತ್ಯೇಕ ಮೀಸಲಾತಿ ನೀಡಬೇಕು. ಪರಿಶಿಷ್ಟ ಜಾತಿಗೆ ಶೇ.೧೭, ಪರಿಶಿಷ್ಟ ವರ್ಗಕ್ಕೆ ಶೇ.೭ ರಷ್ಟು ಒಟ್ಟು ಶೇ.೫೬ ರಷ್ಟು ಮೀಸಲಾತಿಯನ್ನು ಸಂವಿಧಾನದ ೯ ನೇ ಅನುಸೂಚಿಸಯಲ್ಲಿ ಸೇರಿಸಿ ಮೀಸಲಾತಿ ಹೆಚ್ಚಿಸಬೇಕು. ಉದ್ಯೋಗ ನೇಮಕಾತಿ, ನೇರ ನೇಮಕಾತಿ, ಬ್ಯಾಕ್‌ಲಾಗ್, ಬಡ್ತಿ, ಮುಂಬಡ್ತಿ, ಒಳಗುತ್ತಿಗೆ, ಎಸ್ಸಿಪಿ, ಟಿಎಸ್ಪಿ, ಆರ್ಥಿಕ ಸೌಲಭ್ಯ ಎಲ್ಲಾ ಹಂತಗಳಲ್ಲಿಯೂ ಸಂಪೂರ್ಣ ಒಳ ಮೀಸಲಾತಿ ಕಲ್ಪಿಸಬೇಕೆಂದು ಸರ್ಕಾರವನ್ನು ಪ್ರತಿಭಟನಾಕಾರರು ಆಗ್ರಹಿಸಿದರು.

ಒಳ ಮೀಸಲಾತಿ ಅನುಷ್ಟಾನಗೊಳಿಸುವ ಅಧಿಕಾರ ಆಯಾ ರಾಜ್ಯ ಸರ್ಕಾರಗಳಿಗಿದೆ ಎಂದು ಸುಪ್ರೀಂಕೋರ್ಟ್, ಆ.೧, ೨೦೨೪ ರಂದು ಮಹತ್ವದ ತೀರ್ಪು ನೀಡಿದ್ದರು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಒಳ ಮೀಸಲಾತಿ ಜಾರಿಗೊಳಿಸುವಲ್ಲಿ ಇಚ್ಚಾಶಕ್ತಿ ತೋರುತ್ತಿಲ್ಲ. ಕಳೆದ ೩೫ ವರ್ಷಗಳಿಂದಲೂ ಒಳ ಮೀಸಲಾತಿ ಜಾರಿಗಾಗಿ ಹೋರಾಟ ನಡೆಯುತ್ತಿದೆ. ಸರ್ಕಾರ ಈಗಲಾದರು ಎಚ್ಚೆತ್ತುಕೊಂಡು ಒಳ ಮೀಸಲಾತಿ ಜಾರಿಗೊಳಿಸಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ನಡೆಸಲಾಗುವುದೆಂದು ಎಚ್ಚರಿಸಿದರು.

ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾಧ್ಯಕ್ಷ ವಿಶ್ವನಾರಾಯಣಮೂರ್ತಿ, ದಲಿತ ಮುಖಂಡ ಬಿ.ರಾಜಪ್ಪ, ಭ್ರಷ್ಠಾಚಾರ ನಿರ್ಮೂಲನಾ ವೇದಿಕೆ ರಾಜ್ಯಾಧ್ಯಕ್ಷ ಹನುಮಂತಪ್ಪ ದುರ್ಗಾ, ಗುರುಮೂರ್ತಿ ಜಿ, ಹೆಚ್.ಶಿವಮೂರ್ತಿ ಬಹದ್ದೂರ್‌ಘಟ್ಟ, ಎಂ.ದೇವರಾಜ್ ಲಕ್ಷ್ಮಿಸಾಗರ, ಕರ್ನಾಟಕ ರೈತ ಕಾರ್ಮಿಕ ಯುವ ಒಕ್ಕೂಟದ ರಾಜ್ಯಾಧ್ಯಕ್ಷ ಎಂ.ಹೆಚ್.ಶಶಿಧರ್, ಕರ್ನಾಟಕ ರಾಜ್ಯ ಆದಿ ಜಾಂಬವ ಸಂಘದ ಜಿಲ್ಲಾಧ್ಯಕ್ಷ ಜಿ.ಎಂ.ಪ್ರಕಾಶ್, ಮಹಾನಾಯಕ ದಲಿತ ಸೇನೆ ರಾಜ್ಯಾಧ್ಯಕ್ಷ ತಾಳಿಕೆರೆ ಎ.ಮಂಜುನಾಥ್, ಕೆ.ರಾಜಣ್ಣ, ಮಲ್ಲಿಕಾರ್ಜುನ್ ಪಾರ್ಥ, ಕೆ.ಅವಿನಾಶ್, ಕಣಿವೆಮಾರಮ್ಮ ಸಂಘದ ಅಧ್ಯಕ್ಷ ತಿಪ್ಪೇಸ್ವಾಮಿ, ಭೀಮರಾಜ್ ಹಳವುದರ, ಪಾಪಲಿಂಗೇಶ ಇನ್ನು ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ