ಚಂದ್ರವಳ್ಳಿ ನ್ಯೂಸ್, ಶಿವಮೊಗ್ಗ:
ಕಸ್ತೂರಿ ರಂಗನ್ ವರದಿ ಜಾರಿಗೆ ಸಂಬಂಧಿಸಿದಂತೆ ಸ್ಥಳೀಯರ ಅಭಿಪ್ರಾಯ ಸಂಗ್ರಹಿಸಲು ಮತ್ತು ಚರ್ಚಿಸಲು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಇಂದು ಸಾರ್ವಜನಿಕರೊಂದಿಗೆ ನೇರ ಸಂವಾದ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಉದ್ಘಾಟಿಸಿ, ಹಲವು ಪ್ರಮುಖ ವಿಷಯಗಳ ಕುರಿತು ಗಹನವಾದ ಚರ್ಚೆ ನಡೆಸಿದರು.
ಸಾರ್ವಜನಿಕರ ನೇರ ಸಂವಾದ: ಕಸ್ತೂರಿ ರಂಗನ್ ವರದಿಯ ಸಾಧಕ-ಬಾಧಕಗಳು ಹಾಗೂ ಮಲೆನಾಡಿನ ಜನರ ಮೇಲಿನ ಇದರ ಪರಿಣಾಮಗಳ ಕುರಿತು ಸ್ಥಳೀಯ ರೈತರು, ಸಾರ್ವಜನಿಕರು ಮತ್ತು ತಜ್ಞರೊಂದಿಗೆ ಮುಕ್ತ ಚರ್ಚೆ ನಡೆಸಲಾಯಿತು.
ಈ ಮಹತ್ವದ ಸಂವಾದ ಸಭೆಯಲ್ಲಿ ಸಚಿವರಾದ ರಾಮಲಿಂಗಾರೆಡ್ಡಿ, ಮಧು ಬಂಗಾರಪ್ಪ, ಸಂಸದ ಬಿ.ವೈ. ರಾಘವೇಂದ್ರ, ಶಾಸಕರಾದ ಬೇಳೂರು ಗೋಪಾಲಕೃಷ್ಣ, ಆರಗ ಜಜ್ಞಾನೇಂದ್ರ, ಶಾರದಾ ಪೂಣ್ಯಾ ನಾಯಕ್, ಎಸ್.ಎನ್. ಚನ್ನಬಸಪ್ಪ ಉಪಸ್ಥಿತರಿದ್ದರು.
ಮಂಡಳಿ ಹಾಗೂ ಪ್ರಾಧಿಕಾರಗಳ ಮುಖ್ಯಸ್ಥರು ಭಾಗಿ: ಮಲೆನಾಡು ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಮಂಜುನಾಥ ಗೌಡ, ಭದ್ರಾ ಜಲಾಶಯ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಅನ್ಶುಮನ್, ಸುಡಾ ಅಧ್ಯಕ್ಷ ಎಚ್.ಎಸ್. ಸುಂದರೇಶ್ ಸೇರಿದಂತೆ ಹಲವು ಗಣ್ಯರು ಹಾಗೂ ಜನಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸ್ಥಳೀಯರ ಅಭಿಪ್ರಾಯಗಳನ್ನು ಆಲಿಸಿದರು.




