Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಗ್ರಾಮ ಪಂಚಾಯ್ತಿ ಅವ್ಯವಸ್ಥೆ ವಿರುದ್ಧ ಸಾರ್ವಜನಿಕರ ಆಕ್ರೋಶ

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಚರಂಡಿಗಳಲ್ಲಿ ಸಮರ್ಪಕ ನೀರು ಹರಿಯುವ ವ್ಯವಸ್ಥೆಯಿಲ್ಲದೆ
, ಮಳೆಬಂದಾಗ ನೀರು ರಸ್ತೆ ಮೇಲೆ, ಕೆಲವೆಡೆ ಮನೆಗಳ ಒಳಗೆ ಕೂಡ ನುಗ್ಗುತ್ತಿದ್ದು, ಈ  ಬಗ್ಗೆ ಗ್ರಾಮ ಪಂಚಾಯತಿ ಅಧಿಕಾರಿಗಾಳಿ ಕ್ರಮವಹಿಸಬೇಕು ಎಂದು ರಾಜ್ಯ ವನ್ನಿಕುಲ ಕ್ಷತ್ರಿಯ ಸಂಘದ ನಿರ್ದೇಶಕ ಮಂಜುನಾಥ್ ತಿಳಿಸಿದರು.

ತಾಲೂಕಿನ ಕೊನಘಟ್ಟದಲ್ಲಿ ಮಳೆಯಿಂದ ಉಂಟಾದ ಅವಾಂತರದ ಬಗ್ಗೆ ಅಗತ್ಯಕ್ರಮವಹಿಸುವಂತೆ ಗ್ರಾಮ ಪಂಚಾಯ್ತಿ ಮುಂಭಾಗದಲ್ಲಿ ಸ್ಥಳೀಯ ಮುಖಂಡರು ಅಧಿಕಾರಿಗಳಿಗೆ ಮನವಿ ಮಾಡಿ ಮಾತನಾಡಿದ ಅವರು ಕೊನಘಟ್ಟ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಮಳೆಯಾದ ಹಿನ್ನಲೆಯಲ್ಲಿ ನಾನಾ ಕಡೆಗಳಲ್ಲಿ ಮಳೆ ನೀರಿನಿಂದ ಸಮಸ್ಯೆಯಾಗಿದೆ  ಈ ಬಗ್ಗೆ ತುರ್ತಾಗಿ ಅಧಿಕಾರಿಗಳು ಕ್ರಮವಹಿಸಬೇಕು ಎಂದರು.

Advertisement

ಕೇವಲ ಅಧಿಕಾರಿಗಳಷ್ಟೇ ಅಲ್ಲದೆ ಸಾರ್ವಜನಿಕರು ಕೂಡ ಸ್ವಚ್ಚತೆಯ ಬಗ್ಗೆ ಗಮನಹರಿಸಬೇಕು. ಇಲ್ಲಿನ ಕೈಗಾರಿಕೆಗಳ ನೀರು ಕೊನಘಟ್ಟ ಕೆರೆ ಸೇರುತ್ತಿರುವುದರಿಂದ ಕೆರೆಯೂ ಕಲುಷಿತಗೊಂಡಿದ್ದು, ಕೆರೆಯಲ್ಲಿರುವ ೩ ಬೋರ್‌ವೆಲ್‌ಗಳಿಂದ ನೀರನ್ನು ಊರುಗಳಿಗೆ ಸರಬರಾಜು ಮಾಡಬಾರದು. ಅದರ ಬದಲಾಗಿ ಇನ್ನಿತರೆ ಬೋರ್‌ವೆಲ್‌ಗಳಿಂದ, ಟ್ಯಾಂಕರ್‌ಗಳಿಂದ ನೀರನ್ನು ಪೂರೈಕೆ ಮಾಡಬೇಕು. ನೀರು ಸಂಪೂರ್ಣವಾಗಿ ಕಲುಷಿತಗೊಂಡಿದೆ. ಅಧಿಕಾರಿಗಳು ಕೆರೆಗೆ ಕಲುಷಿತ ನೀರು ಹರಿಯದಂತೆ ಎಚ್ಚರವಹಿಸಬೇಕು ಎಂದರು.

ಮುಖಂಡರಾದ ರಾಮಾಂಜಿನಪ್ಪ ಮಾತನಾಡಿ, ಕೊನಘಟ್ಟ ಗ್ರಾಮದ ಸಮೀಪದಲ್ಲಿ ಕೆಐಎಡಿಬಿಯಿಂದ ಕೈಗಾರಿಕೆಗಳಿಗೆ ಭೂಸ್ವಾದೀನ ಪಡಿಸಿಕೊಳ್ಳಲಾಗಿದೆ.  ಕೆಐಎಡಿಬಿ ಜಮೀನಿನಿಂದ ಬರುವ ನೀರು ಕೂಡ ಗ್ರಾಮಕ್ಕೆ ಸೇರುತ್ತಿದೆ . ಈ ಬಗ್ಗೆ ಗ್ರಾಮ ಪಂಚಾಯತಿ ಅಧಿಕಾರಿಗಳು, ತಾಲೂಕು ಮಟ್ಟದಲ್ಲಿ ಕ್ರಮವಹಿಸಬೇಕು.ಶೀಘ್ರದಲ್ಲಿ ಕಲುಷಿತ ನೀರು ಕೆರೆಗಳು ಸೇರುತ್ತಿರುವ ಬಗ್ಗೆ ಹೋರಾಟ ಮಾಡಲಾಗುತ್ತಿದೆ. ಗ್ರಾಮಗಳಲ್ಲೂ ಕೂಡ ಸಾಕಷ್ಟು ಜನರಿಗೆ ಜ್ವರ ಸೇರಿದಂತೆ ಹಲವು  ಖಾಯಿಲೆಗಳು ಕಂಡುಬರುತ್ತಿದ್ದು, ಈ ಬಗ್ಗೆ ಅಗತ್ಯಕ್ರಮವಹಿಸಬೇಕು ಎಂದರು.

ಈ ಬಗ್ಗೆ ಮಾತನಾಡಿದ ಗ್ರಾಮ ಪಂಚಾಯತಿ ಪಿಡಿಒ ಕಾಂತರಾಜು,  ಮಳೆಯಿಂದಾಗಿ ಹಲವು ಕಡೆಗಳಲ್ಲಿ ಸಮಸ್ಯೆಯಾಗಿದೆ. ತಕ್ಷಣ ಚರಂಡಿಗಳ ಸ್ವಚ್ಚತೆಗೆ ಕ್ರಮವಹಿಸಲಾಗಿದೆ. ಸಾರ್ವಜನಿಕರು ಕೂಡ ಸ್ವಚ್ಚತೆಗೆ ಸಹಕರಿಸಬೇಕು. ಸಮಸ್ಯೆ ಕಂಡುಬಂದಲ್ಲಿ ಅದರ ಮಾಹಿತಿ ಅನುಸಾರ ಕ್ರಮವಹಿಸಲಾಗಿದೆ. ಕೆರೆ ಕಲುಷಿತಗೊಂಡಿರುವ ಬಗ್ಗೆ ಮಾಲಿನ್ಯ ನಿಯಂತ್ರಣ ಮಂಡಳಿಗೆ ಪತ್ರ ಬರೆಯಲಾಗಿದ್ದು, ಅಗತ್ಯ ಕ್ರಮವಹಿಸಲಾಗುತ್ತಿದೆ ಎಂದರು.

 

 

Author
ಸಿ.ಹೆಂಜಾರಪ್ಪ
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಖ್ಯಮಂತ್ರಿಯವರ ತಾಂತ್ರಿಕ ಸಲಹೆಗಾರರಾಗಿ ನಿವೃತ್ತ ಕಾರ್ಯದರ್ಶಿ ಡಾ. ಕೆ. ಜೈಪ್ರಕಾಶ್ ನೇಮಕಜೆಎನ್‌ಯು ಪ್ರೊಫೆಸರ್ ಹಾಗೂ ಕಾಂಗ್ರೆಸ್ ಸಂಸದರಿಂದ ಲೈಂಗಿಕ ಕಿರುಕುಳ ಆರೋಪ, ಸೇವೆಯಿಂದ ವಜಾಆರ್‌ಬಿಐ ಬಿಗ್ ಶಾಕ್: ರೆಪೋ ದರ ಏರಿಕೆಯಿಂದ ಸಾಲಗಾರರಿಗೆ ಹೆಚ್ಚಳವಾದ ಇಎಂಐ ಬರೆ!ಎಸ್‌ಐಆರ್ ರದ್ದುಪಡಿಸುವಂತೆ ಜನತಾ ನ್ಯಾಯಾಲಯ ಸಮಾವೇಶ: ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹ10 ಸಚಿವರ ವಿರುದ್ಧ ಸ್ಟಿಂಗ್ ಆಪರೇಷನ್ ಸುಪಾರಿ - ಶಾಸಕ ಗಣಿಗ ರವಿ ಸ್ಫೋಟಕ ಪೆನ್‌ಡ್ರೈವ್ ಬಾಂಬ್!ಸಚಿವರಿಗೆ ಬಲೆ ಬೀಳಿಸಲು ಯತ್ನ: ಸಿಎಂ ಎಚ್ಚರಿಕೆ ನೀಡಿದ್ದಾರೆ ಎಂದ ಸತೀಶ್ ಜಾರಕಿಹೊಳಿಕೇಂದ್ರದೊಂದಿಗೆ ಜಿಎಸ್‌ಟಿ ಸಭೆ: ರಾಜ್ಯದ ಬಾಕಿ ಹಣದ ಕುರಿತು 'ಸಿಹಿ ಸುದ್ದಿ' ನೀಡಿದ ಸಿಎಂ ಡಿ.ಕೆ ಶಿವಕುಮಾರ್ ಸುಳಿವು!ಪ್ರಜ್ವಲ್ ರೇವಣ್ಣ ಜೈಲಿನಲ್ಲಿ ಮೊಬೈಲ್ ಪತ್ತೆ ಪ್ರಕರಣ: ಹಿಂಡಲಗಾ ಜೈಲಿಗೆ ಸ್ಥಳಾಂತರಪ್ರತಿಭಟನೆ ಹೆಸರಲ್ಲಿ ಎಲ್ಲವನ್ನೂ ಬಂದ್ ಮಾಡಲು ಆಗದು: ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್ದಾವಣಗೆರೆಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ವಕೀಲರ ಪಟ್ಟು: ಮಧ್ಯಕರ್ನಾಟಕದಲ್ಲಿ ತೀವ್ರಗೊಂಡ ಹೋರಾಟ