ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಗರದ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಲೋಕೋಪಯೋಗಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಇಲಾಖೆಯ ವಿವಿಧ ಯೋಜನೆಗಳು ಹಾಗೂ ಅಭಿವೃದ್ಧಿ ಕಾಮಗಾರಿಗಳ ಕುರಿತು ಅಧಿಕಾರಿಗಳೊಂದಿಗೆ ಮಹತ್ವದ ಚರ್ಚೆ ನಡೆಸಿದರು.
ಸಭೆಯಲ್ಲಿ ಇಲಾಖೆಯ ಹಾಲಿ ಯೋಜನೆಗಳ ಸ್ಥಿತಿಗತಿ, ಕೈಗೆತ್ತಿಕೊಳ್ಳಬೇಕಾದ ನೂತನ ಕಾಮಗಾರಿಗಳು ಹಾಗೂ ಅಭಿವೃದ್ಧಿ ವೇಗವರ್ಧನೆ ಕುರಿತು ವಿಸ್ತೃತವಾಗಿ ಪರಿಶೀಲಿಸಲಾಯಿತು.
ಈ ಉನ್ನತ ಮಟ್ಟದ ಪರಿಶೀಲನಾ ಸಭೆಯಲ್ಲಿ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಎಲ್.ಕೆ. ಅತೀಕ್, ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್ ಹಾಗೂ ಲೋಕೋಪಯೋಗಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಅಂಜುಮ್ ಪರ್ವೇಜ್ ಸೇರಿದಂತೆ ಸರ್ಕಾರದ ವಿವಿಧ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.




