ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ ಗ್ರಾಮ ಪಂಚಾಯತಿಗಳಲ್ಲಿ ಖಾಲಿ ಇರುವ ಕರವಸೂಲಿಗಾರರ ಹುದ್ದೆಗಳಿಗೆ ನೇರ ನೇಮಕಾತಿ ಮಾಡುವ ಸಂಬಂಧ ಈಗಾಗಲೇ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಿರುವ ಅರ್ಹ ಅಭ್ಯರ್ಥಿಗಳ ಪಟ್ಟಿಯನ್ನು ವೆಬ್‍ಸೈಟ್ chitradurga.nic.in ನಲ್ಲಿ ಪ್ರಕಟಿಸಲಾಗಿದ್ದು, ಆಕ್ಷೇಪಣೆ ಸಲ್ಲಿಸಲು ಮೇ 22 ಕೊನೆಯ ದಿನವಾಗಿದೆ.
ಈ ಪಟ್ಟಿಗೆ ಸಂಬಂಧಿಸಿದಂತೆ ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಅಭ್ಯರ್ಥಿಗಳು ಇದೇ ಮೇ 22ರ ಸಂಜೆ 5 ಗಂಟೆಯೊಳಗೆ ಚಿತ್ರದುರ್ಗ ಜಿಲ್ಲಾ ಪಂಚಾಯತ್ ಕಚೇರಿಗೆ ಸಲ್ಲಿಸಬಹುದು ಎಂದು ಪ್ರಕಟಣೆ ತಿಳಿಸಿದೆ.



