Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಧ್ಯರಾತ್ರಿ ಒಂದು ಗಂಟೆವರೆಗೆ ಪಬ್‌ ಗಳು ಓಪನ್

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರು ನಗರದಲ್ಲಿ ಮಧ್ಯರಾತ್ರಿ ಒಂದು ಗಂಟೆವರೆಗೆ ಪಬ್‌ಗಳನ್ನು ತೆರೆಯಲು ಅವಕಾಶ ಮಾಡಿಕೊಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭರವಸೆ ನೀಡಿದ್ದಾರೆ.

ವಿಧಾನಸಭೆ ಕಲಾಪದಲ್ಲಿ ಮಾತನಾಡಿದ ಅವರು, ಬೆಂಗಳೂರಿನ ನಗರ ಅಂತರಾಷ್ಟ್ರೀಯ ಖ್ಯಾತಿ ಹೊಂದಿದ್ದು, ಲೈವ್ ಆಗಿರಬೇಕು. ಈ ಕಾರಣಕ್ಕೆ ತಡರಾತ್ರಿ 1 ಗಂಟೆವರೆಗೆ ಪಬ್ ತೆರೆಯಲು ಅವಕಾಶ ಮಾಡಿಕೊಡುವ ನಿಟ್ಟಿನಲ್ಲಿ ಪ್ರಯತ್ನಿಸಲಾಗುವುದು ಎಂದು ಡಿಸಿಎಂ ಭರವಸೆ ನೀಡಿದರು.

ತಡರಾತ್ರಿವರೆಗೆ ಕಾರ್ಯಾಚರಣೆಗೆ ಪಬ್​​ಗಳಿಗೆ ಆಕಾಶ ನೀಡುವ ವಿಚಾರವಾಗಿ ಬಿಜೆಪಿಯ ಎಚ್ಎಸ್ ಗೋಪಿನಾಥ್ ಅವರು ವಿಧಾನಸಭೆ ಕಲಾಪದಲ್ಲಿ ಗಮನ ಸೆಳೆದರು. ಇದಕ್ಕೆ ಅಬಕಾರಿ ಸಚಿವ ಆರ್‌ಬಿ ತಿಮ್ಮಾಪುರ ಉತ್ತರಿಸುತ್ತಿದ್ದ ವೇಳೆ ಮಧ್ಯ ಪ್ರವೇಶಿಸಿದ ಡಿಸಿಎಂ ಡಿಕೆ ಶಿವಕುಮಾರ್, ಬೆಳಗ್ಗೆ 10ರಿಂದ ರಾತ್ರಿ 11.30 ರ ವರೆಗೆ ಕಾರ್ಯಾಚರಣೆ ನಡೆಸಲು ಪಬ್​ಗಳಿಗೆ ಅವಕಾಶ ಇದೆ. ರೆಸ್ಟೋರೆಂಟ್​ಗಳಿಗೆ ಹೊಂದಿಕೊಂಡಿರುವ ಪಬ್​ಗಳಿಗೆ ರಾತ್ರಿ 1 ಗಂಟೆವರೆಗೆ ತೆರೆದಿರಲು ಅವಕಾಶವಿದೆ. ಇದನ್ನೇ ಎಲ್ಲಾ ಪಬ್​ಗಳಿಗೂ ಅನ್ವಯಿಸುವಂತೆ ಮಾಡಬೇಕಿದೆ ಎಂದು ತಿಳಿಸಿದರು.

ಸದ್ಯ ಬೆಳಗ್ಗೆ 10 ರಿಂದ ರಾತ್ರಿ 11:30 ರ ತನಕ ಬೆಂಗಳೂರಿನಲ್ಲಿ ಪಬ್ ಕಾರ್ಯಾಚರಣೆಗೆ ಅವಕಾಶವಿದ್ದು, ನಿಯಮ ಮೀರಿ ವರ್ತಿಸುವವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಮ್ಮಾಪುರ ಹೇಳಿದ್ದಾರೆ.
ಇದಕ್ಕೆ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್
, ನಿಯಮಗಳು ಕಿರುಕುಳ ಆಗಿ ಪರಿಣಮಿಸಬಾರದು. ಬೆಂಗಳೂರು ಅಂತರಾಷ್ಟ್ರೀಯ ಖ್ಯಾತಿಯ ನಗರವಾಗಿದೆ. ಇಲ್ಲಿ ಅನೇಕರು ರಾತ್ರಿ ಕೂಡ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ರಾತ್ರಿ ಕಾರ್ಯಾಚರಣೆ ಸಂಬಂಧ ಇರುವ ಸಮಸ್ಯೆಗಳ ಕುರಿತು ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿವಕುಮಾರ್ ಭರವಸೆ ನೀಡಿದ್ದಾರೆ.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ