Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Education News

  ಪಿಯುಸಿ ಫಲಿತಾಂಶ ಪ್ರಕಟ, ಡಿಜಿಲಾಕರ್ ಮೂಲಕ ಇಂದೇ ಅಂಕಪಟ್ಟಿ ನೋಡಿ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
2025-26ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಲಭ್ಯವಾಗಿದ್ದು, ಡಿಜಿಲಾಕರ್ ಮೂಲಕ ಇಂದೇ ಅಂಕಪಟ್ಟಿಯನ್ನ ನೋಡಬಹುದಾಗಿದೆ. ನ್ಯಾಷನಲ್‌ ಅಕಾಡೆಮಿಕ್‌ ಡೆಪೋಸಿಟರಿ (ಎನ್ಎಡಿ) ಡಿಜಿಲಾಕರ್ ಮೂಲಕ ಅಂಕಪಟ್ಟಿ ವೀಕ್ಷಿಸಬಹುದಾಗಿದೆ. ಕಾಗದರಹಿತ, ಆಡಳಿತದಲ್ಲಿ ಪಾರದರ್ಶಕತೆ ತರಲು ಹಾಗೂ ಭ್ರಷ್ಟಾಚಾರ ನಿಯಂತ್ರಿಸಿ ವಿದ್ಯಾರ್ಥಿಗಳಿಗೆ ತ್ವರಿತ ಸೇವೆ ನೀಡಲು ರಾಜ್ಯ ಸರ್ಕಾರ ನೂತನ ವ್ಯವಸ್ಥೆ ಜಾರಿ ತಂದಿದೆ. ಈ ಮೂಲಕ ರಿಸಲ್ಟ್ ಪಡೆದ ದಿನದಂದೇ ಅಂಕಪಟ್ಟಿ ನೋಡಬಹುದಾಗಿದೆ.

ಇದರಿಂದ ವಿದ್ಯಾರ್ಥಿಗಳಿಗೆ ಅಂಕಪಟ್ಟಿ ಪಡೆಯಲು ಸುಲಭ ಹಾಗೂ ಸರಿಯಾದ ಸಮಯಕ್ಕೆ ದೊರೆಯುವ ವ್ಯವಸ್ಥೆ ಜಾರಿಗೆ ಬಂದಿದೆ. ದ್ವಿತೀಯ ಪಿಯುಸಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಭೌತಿಕ ಅಂಕಪಟ್ಟಿಯ ಪ್ರತಿಯನ್ನು ನೀಡಲು ಸರ್ಕಾರ ಅನುಮತಿ ನೀಡಿತ್ತು. ಪ್ರಸ್ತಕ 2026-27ನೇ ಶೈಕ್ಷಣಿಕ ಸಾಲಿನಿಂದ ಭೌತಿಕ ಅಂಕಪ್ರತಿ ನೀಡುವ ಪದ್ಧತಿ ಕೈಬಿಡಲಾಗುತ್ತಿದ್ದು, ಸ್ವಯಂಚಾಲಿತ ಶಾಶ್ವತ ಶೈಕ್ಷಣಿಕ ಖಾತೆ ನೋಂದಣಿ (ಎಪಿಎಎಆರ್) ಕಡ್ಡಾಯವಾಗಿ ನಾಡ್ ಡಿಜಿಲಾಕರ್​ನಲ್ಲಿ ಅಂಕಪಟ್ಟಿ ಅಳವಡಿಸುವಂತೆ ಸೂಚಿಸಲಾಗಿದೆ. 

ಈ ಡಿಜಿ ಲಾಕರ್​ನಲ್ಲಿ ಲಭ್ಯವಾಗುವ ಅಂಕಪಟ್ಟಿಯನ್ನು ರಾಜ್ಯದ ಒಳಗೆ ಮತ್ತು ಹೊರಗೆ ಉನ್ನತ ವ್ಯಾಸಂಗಕ್ಕಾಗಿ ಅಧಿಕೃತ ದಾಖಲೆ ಎಂದು ಪರಿಗಣಿಸಲಿದೆ. ನೇಮಕಾತಿ ಪ್ರಕ್ರಿಯೆಗಳಲ್ಲಿ ವಿವಿಧ ಸಂಸ್ಥೆಗಳು ಮತ್ತು ಪ್ರಾಧಿಕಾರಗಳು N-DigiLocker ನಲ್ಲಿನ ಅಂಕಪಟ್ಟಿ ಹಾಗೂ ಪ್ರಮಾಣಪತ್ರಗಳನ್ನು ದೃಢೀಕೃತ ದಾಖಲೆಗಳೆಂದು ಪರಿಗಣಿಸುವಂತೆ ಸರ್ಕಾರ ನಿರ್ದೇಶನ ನೀಡಿದೆ. ಈ ಮೂಲಕ ವಿದ್ಯಾರ್ಥಿಗಳಿಗೆ ತ್ವರಿತ ಸೇವೆ ಜೊತೆಗೆ ಪಾರದರ್ಶಕತೆ ಹೆಚ್ಚಳ, ಭ್ರಷ್ಟಾಚಾರಕ್ಕೆ ಕಡಿವಾಣ ಮತ್ತು ದಾಖಲೆಗಳ ಸುರಕ್ಷಿತ ಸಂಗ್ರಹಣೆ ಸಾಧ್ಯವಾಗಲಿದೆ.

ನಾಡ್ ಡಿಜಿಲಾಕರ್ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ವಿದ್ಯಾರ್ಥಿಗಳ ಶೈಕ್ಷಣಿಕ ದಾಖಲೆಗಳಾದ ಅಂಕಪಟ್ಟಿ, ಪದವಿ ಹಾಗೂ ಡಿಪ್ಲೋಮಾ ಪ್ರಮಾಣಪತ್ರಗಳನ್ನ ಸುರಕ್ಷಿತವಾಗಿ ಡಿಜಿಟಲ್ ರೂಪದಲ್ಲಿ ಸಂಗ್ರಹಿಸಿ, ಯಾವಾಗ ಬೇಕಾದರೂ ಲಭ್ಯವಾಗುವಂತೆ ನೋಡಬಹುದಾಗಿದೆ.

ದೇಶದ ಒಳಗೆ ಮತ್ತು ಹೊರಗೆ ಉನ್ನತ ಶಿಕ್ಷಣಕ್ಕಾಗಿ ಡಿಜಿಲಾಕರ್​​ನಲ್ಲಿನ ದಾಖಲೆಗಳಿಗೆ ಮಾನ್ಯತೆ, ಉದ್ಯೋಗ ನೇಮಕಾತಿ ಪ್ರಕ್ರಿಯೆಯಲ್ಲಿ ದೃಢೀಕೃತ ದಾಖಲೆಗಳೆಂದು ಪರಿಗಣಿಸುವ ವ್ಯವಸ್ಥೆ ಇದಾಗಿದ್ದು, ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ.

ಹೀಗೆ ನೋಡಿ ರಿಸಲ್ಟ್: https://karresults.nic.in ಲಿಂಕ್​ ಮೂಲಕ ಹಾಗೂ KarnatakaOne Mobile App ಮೂಲಕವೂ ರಿಸಲ್ಟ್​ ನೋಡಬಹುದು. ಅಲ್ಲದೆ, ವಿದ್ಯಾರ್ಥಿಗಳ ನೋಂದಾಯಿತ ಮೊಬೈಲ್ ಸಂಖ್ಯೆಗೆ ವಾಟ್ಸ್​ಆ್ಯಪ್/ಎಸ್‌ಎಂಎಸ್ (SMS) ಮೂಲಕವೂ ಫಲಿತಾಂಶದ ಮಾಹಿತಿಯನ್ನು ಮಂಡಳಿಯಿಂದ ರವಾನಿಸಲಾಗುತ್ತಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಂಕಪಟ್ಟಿಯನ್ನು ಡಿಜಿಲಾಕರ್​​ನಿಂದ ಡೌನ್‌ಲೋಡ್ ಮಾಡಿಕೊಳ್ಳಲು ಬಯಸುವವರು ವಿಡಿಯೋ ಲಿಂಕ್​ https://tinyurl.com/mw84wmh9 ಮೂಲಕ ಪ್ರಕ್ರಿಯೆಯನ್ನು ತಿಳಿದುಕೊಳ್ಳಬಹುದು.

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು