Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕ್ವಾರಿ ದುರಂತ: ಸೂಕ್ತ ಪರಿಹಾರ ಹಾಗೂ ಕಟ್ಟುನಿಟ್ಟಿನ ಕ್ರಮಕ್ಕೆ ಕುಮಾರಸ್ವಾಮಿ ಆಗ್ರಹ

Advertisement
Advertisement

 ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಪಟ್ಟಣದಲ್ಲಿ ಸಂಭವಿಸಿದ ಕಲ್ಲು ಕ್ವಾರಿಯ ಬಂಡೆ ಕುಸಿತದ ಭೀಕರ ದುರಂತದಲ್ಲಿ ಏಳು ಜನ ಕಾರ್ಮಿಕರು ಧಾರುಣವಾಗಿ ಸಾವನ್ನಪ್ಪಿರುವ ಘಟನೆಗೆ ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿ ತೀವ್ರ ಆಘಾತ ಮತ್ತು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

​ಕಲ್ಲು ಕ್ವಾರಿ ಕುಸಿತದ ಸುದ್ದಿ ತಮಗೆ ಅತೀವ ನೋವುಂಟು ಮಾಡಿದೆ ಎಂದು ಹೇಳಿರುವ ಅವರು, ಘಟನೆಯಲ್ಲಿ ಮೃತಪಟ್ಟ ಬಡ ಕಾರ್ಮಿಕರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಗಾಯಗೊಂಡವರು ಆದಷ್ಟು ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದಾರೆ.

​ಯಾರ ಮೇಲೆಯೂ ಕ್ರಮ ಆಗದಿರುವುದೇ ದುರಂತಕ್ಕೆ ಕಾರಣ:
​ರಾಜ್ಯದಲ್ಲಿ ಪದೇಪದೇ ಕಲ್ಲು ಕ್ವಾರಿ ದುರಂತಗಳು ಸಂಭವಿಸುತ್ತಿದ್ದರೂ ಯಾರ ಮೇಲೆಯೂ ಕಟ್ಟುನಿಟ್ಟಿನ ಕ್ರಮ ಆಗಿಲ್ಲ ಎನ್ನುವುದು ಅತ್ಯಂತ ಬೇಸರದ ಸಂಗತಿಯಾಗಿದೆ. ಇಂತಹ ಬೇಜವಾಬ್ದಾರಿತನ ಹಾಗೂ ಕಠಿಣ ಕ್ರಮಗಳು ಆಗದಿರುವ ಕಾರಣಕ್ಕಾಗಿಯೇ ಇಂತಹ ಭೀಕರ ದುರಂತಗಳು ರಾಜ್ಯದಲ್ಲಿ ನಿರಂತರವಾಗಿ ಮರುಕಳಿಸುತ್ತಿವೆ ಎಂದು ಅವರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.

​ತಕ್ಷಣದ ಪರಿಹಾರ ಹಾಗೂ ನಿಗಾ ಇರಿಸಲು ಒತ್ತಾಯ:
​ಮಾದಪಟ್ಟಣ ದುರಂತದ ಹಿನ್ನೆಲೆಯಲ್ಲಿ ಹೆಚ್.ಡಿ. ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರ ಮತ್ತು ಕ್ವಾರಿ ಮಾಲೀಕರಿಗೆ ಪ್ರಮುಖ ಸೂಚನೆಗಳನ್ನು ನೀಡಿದ್ದಾರೆ.

​ತುರ್ತು ನೆರವು: ರಾಜ್ಯ ಸರ್ಕಾರವು ನೊಂದ ಕಾರ್ಮಿಕರ ಕುಟುಂಬಗಳಿಗೆ ತಕ್ಷಣವೇ ಸೂಕ್ತ ಆರ್ಥಿಕ ಪರಿಹಾರ ನೀಡುವುದರ ಜತೆಗೆ ಇನ್ನಿತರ ತುರ್ತು ನೆರವುಗಳನ್ನು ಒದಗಿಸಬೇಕು.

​ಕಟ್ಟುನಿಟ್ಟಿನ ನಿಯಮಾವಳಿ: ರಾಜ್ಯದ ಎಲ್ಲಾ ಕ್ವಾರಿಗಳಲ್ಲಿ ಕಟ್ಟುನಿಟ್ಟಿನ ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಜಾರಿಗೆ ತರಬೇಕು. ಈ ನಿಟ್ಟಿನಲ್ಲಿ ಸಂಬಂಧಪಟ್ಟ ಇಲಾಖೆಯು ಇನ್ನು ಮುಂದೆ ತೀವ್ರ ನಿಗಾ ಇರಿಸುವಂತೆ ಸರ್ಕಾರ ಕಟ್ಟುನಿಟ್ಟಿನ ಆದೇಶ ಹೊರಡಿಸಬೇಕು.

​ಮಾಲೀಕರಿಗೆ ಎಚ್ಚರಿಕೆ: ಕಲ್ಲು ಕ್ವಾರಿಗಳ ಮಾಲೀಕರು ಕೂಡ ಕೇವಲ ಲಾಭದ ಕಡೆಗೆ ಗಮನ ಹರಿಸದೆ, ಕಾರ್ಮಿಕರ ಜೀವ ರಕ್ಷಣೆಗಾಗಿ ಕಟ್ಟುನಿಟ್ಟಿನ ಮುನ್ನೆಚ್ಚರಿಕೆ ವಹಿಸಬೇಕು ಹಾಗೂ ಸೂಕ್ತ ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.

 

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.