Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಸೆಂಬ್ಲಿ ಅಧಿವೇಶನದ ಹೋರಾಟದ ಹಾದಿ ಬಿಚ್ಚಿಟ್ಟ ಆರ್. ಅಶೋಕ್​

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಇತ್ತೀಚೆಗೆ ಮುಕ್ತಾಯಗೊಂಡ ರಾಜ್ಯ ಬಜೆಟ್ ಅಧಿವೇಶನದಲ್ಲಿ ರಾಜ್ಯ ಸರ್ಕಾರದ ವೈಫಲ್ಯಗಳನ್ನು ಎಳೆಎಳೆಯಾಗಿ ಬಿಚ್ಚಿಟ್ಟಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್, "ಕರ್ನಾಟಕದ ಜನರ ಹಿತಾಸಕ್ತಿ ಕಾಪಾಡುವಲ್ಲಿ ಬಿಜೆಪಿ ಜವಾಬ್ದಾರಿಯುತ ವಿರೋಧ ಪಕ್ಷವಾಗಿ ಕಾರ್ಯನಿರ್ವಹಿಸಿದೆ" ಎಂದು ಹೇಳಿದ್ದಾರೆ.

​ಅಧಿವೇಶನದಲ್ಲಿ ತಾವು ಎತ್ತಿದ ಪ್ರಮುಖ ವಿಷಯಗಳ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಅವರು, ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಹಣಕಾಸು ಅಶಿಸ್ತು ಮತ್ತು ಜನವಿರೋಧಿ ನೀತಿಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

​ರಾಜ್ಯ ಆವರಿಸಿದ ಸಾಲದ ಸುಳಿ:
​ಸರ್ಕಾರದ ಹಣಕಾಸು ನಿರ್ವಹಣೆಯನ್ನು ಕಟುವಾಗಿ ಟೀಕಿಸಿದ ಆರ್. ಅಶೋಕ್, "ಈ ಸರ್ಕಾರ ಬರೋಬ್ಬರಿ 1.32 ಲಕ್ಷ ಕೋಟಿ ಸಾಲ ಮಾಡಿದ್ದು, ರಾಜ್ಯವನ್ನು ಅಪಾಯಕಾರಿ ಸಾಲದ ಸುಳಿಗೆ ತಳ್ಳಿದೆ. ಕಳೆದ ಮೂರು ವರ್ಷಗಳಲ್ಲಿ ಒಟ್ಟು ಸಾಲದ ಮೊತ್ತ 3.5 ಲಕ್ಷ ಕೋಟಿಗೆ ಏರಿದೆ. ಈ ಹೊರೆ ಅಂತಿಮವಾಗಿ ತೆರಿಗೆದಾರರ ಮೇಲೆ ಬೀಳಲಿದೆ" ಎಂದು ಆತಂಕ ವ್ಯಕ್ತಪಡಿಸಿದರು.

​ಹಗರಣಗಳ ಬಯಲು ಮತ್ತು ಸಾರ್ವಜನಿಕ ಆಸ್ತಿ ರಕ್ಷಣೆ:
​ಗ್ಯಾರಂಟಿ ಯೋಜನೆಗಳಲ್ಲಿ ಅಕ್ರಮ: ಗೃಹಲಕ್ಷ್ಮಿ ಮತ್ತು ಅನ್ನಭಾಗ್ಯ ಯೋಜನೆಗಳಲ್ಲಿ ಸಾವಿರಾರು ಕೋಟಿ ರೂಪಾಯಿಗಳ ದುರುಪಯೋಗವಾಗುತ್ತಿರುವ ಬಗ್ಗೆ ಶಂಕೆ ವ್ಯಕ್ತಪಡಿಸಿದ ಅವರು, ಸರ್ಕಾರ ಈ ಬಗ್ಗೆ ಪಾರದರ್ಶಕ ಉತ್ತರ ನೀಡಲು ವಿಫಲವಾಗಿದೆ ಎಂದರು.

​ಜಕ್ಕೂರು ವೈಮಾನಿಕ ಶಾಲೆ ಉಳಿವಿಗೆ ಹೋರಾಟ: ಐತಿಹಾಸಿಕ ಜಕ್ಕೂರು ವೈಮಾನಿಕ ತರಬೇತಿ ಶಾಲೆಯನ್ನು ಮುಚ್ಚಿ ವಾಣಿಜ್ಯ ಸಂಕೀರ್ಣ ಮಾಡುವ ಸಂಚನ್ನು ವಿರೋಧ ಪಕ್ಷದ ಹೋರಾಟ ತಡೆದಿದೆ.

​ರೇಷ್ಮೆ ಕಾರ್ಖಾನೆ ರಕ್ಷಣೆ: ಟಿ.ನರಸಿಪುರ ರೇಷ್ಮೆ ಕಾರ್ಖಾನೆಯ 6 ಎಕರೆ ಜಾಗವನ್ನು ವಶಪಡಿಸಿಕೊಳ್ಳುವ ಯತ್ನವನ್ನು ತಡೆದು, ಕಾರ್ಖಾನೆ ಮುಚ್ಚದಂತೆ ಸರ್ಕಾರದಿಂದ ಭರವಸೆ ಪಡೆಯಲಾಗಿದೆ.

​ಮೆಟ್ರೋ ಅನುದಾನದ ಕುರಿತು ಸತ್ಯದರ್ಶನ:
​"
ಮೆಟ್ರೋ ಯೋಜನೆಗೆ ಕೇಂದ್ರ ಸರ್ಕಾರ ಕೇವಲ 12% ನೀಡುತ್ತಿದೆ ಎಂಬ ರಾಜ್ಯ ಸರ್ಕಾರದ ಸುಳ್ಳು ವಾದವನ್ನು ಸದನದಲ್ಲಿ ದಾಖಲೆ ಸಹಿತ ಅಶೋಕ್ ಅವರು ತಳ್ಳಿಹಾಕಿದರು. ಮೆಟ್ರೋ ಯೋಜನೆಗಳು ಕೇಂದ್ರ ಮತ್ತು ರಾಜ್ಯದ 50-50 ಪಾಲುದಾರಿಕೆಯಲ್ಲಿ ನಡೆಯುತ್ತಿವೆ ಎಂಬ ಸತ್ಯವನ್ನು ಅವರು ಜನರ ಮುಂದಿಟ್ಟರು."

​ಇಂಧನ ಬೆಲೆ ಏರಿಕೆ ವಿರುದ್ಧ ಎಚ್ಚರಿಕೆ:
​ಖಜಾನೆ ತುಂಬಿಸಿಕೊಳ್ಳಲು ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಸಲು ಮುಂದಾದರೆ, ಬಿಜೆಪಿ ವತಿಯಿಂದ ರಾಜ್ಯಾದ್ಯಂತ ತೀವ್ರ ಪ್ರತಿಭಟನೆ ನಡೆಸಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ. ಕೇಂದ್ರದ ನರೇಂದ್ರ ಮೋದಿ ಸರ್ಕಾರ ಜನರ ಮೇಲಿನ ಹೊರೆ ಇಳಿಸುತ್ತಿದ್ದರೆ, ರಾಜ್ಯ ಸರ್ಕಾರ ಇಂಧನವನ್ನು 'ಕಾಮಧೇನು' ಎಂದು ಬಳಸಿಕೊಳ್ಳುತ್ತಿರುವುದು ಖಂಡನೀಯ ಎಂದರು.

​ಬೆಂಗಳೂರು ಮತ್ತು ಭದ್ರತೆ:
​ಬೆಂಗಳೂರು ಅಭಿವೃದ್ಧಿಯ ಬಗ್ಗೆ ಸರ್ಕಾರ ಮಾಡುತ್ತಿರುವ ಘೋಷಣೆಗಳು ಕೇವಲ 'ಬ್ರಾಂಡಿಂಗ್' ಗೆ ಸೀಮಿತವಾಗಿದ್ದು, ಯಾವುದೇ ಹಣಕಾಸಿನ ಬೆಂಬಲವಿಲ್ಲದ ಟೊಳ್ಳು ಭರವಸೆಗಳಾಗಿವೆ ಎಂದು ಟೀಕಿಸಿದರು. ಅಲ್ಲದೆ, ಐಪಿಎಲ್ ಪಂದ್ಯಗಳ ವೇಳೆ ಸಾರ್ವಜನಿಕ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಬೇಕೆಂದು ಅವರು ಒತ್ತಾಯಿಸಿದರು.
​"
ಪ್ರಜಾಪ್ರಭುತ್ವದಲ್ಲಿ ಜನರಿಗೆ ಉತ್ತರದಾಯಿತ್ವ ನೀಡಬೇಕಾದುದು ಸರ್ಕಾರದ ಆದ್ಯ ಕರ್ತವ್ಯ. ಜನರ ಹಿತಾಸಕ್ತಿಗೆ ಧಕ್ಕೆಯಾದಾಗ ಬಿಜೆಪಿ ಸುಮ್ಮನೆ ಕುಳಿತುಕೊಳ್ಳುವುದಿಲ್ಲ." ಆರ್. ಅಶೋಕ್, ವಿರೋಧ ಪಕ್ಷದ ನಾಯಕರು.

 

 

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ